KSEDCL Recruitment : ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನೇಮಕಾತಿ 2023, Apply Online

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ.  ಈ ಲೇಖನದಲ್ಲಿ KEONICS 2023ರ ನೇಮಕಾತಿ ಅಡಿಯಲ್ಲಿ ಕೆಲಸವನ್ನು ಪಡೆದುಕೊಳ್ಳುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಒಂದು ಭರ್ಜರಿ ನೇಮಕಾತಿ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

– KEONICS ನೇಮಕಾತಿ(Recruitment) 2023ರ ಅವಲೋಕನ –

ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (KEONICS), ISO ಪ್ರಮಾಣೀಕೃತ ಸಂಸ್ಥೆಯಾಗಿದೆ. ಕರ್ನಾಟಕದಲ್ಲಿ ಎಲೆಕ್ಟ್ರಾನಿಕ್ಸ್ ಉದ್ಯಮಗಳನ್ನು ಉತ್ತೇಜಿಸುವ ಉದ್ದೇಶದಿಂದ ಈ  ಸಂಸ್ಥೆಯನ್ನು ಜಾರಿಗೆ ತರಲಾಗಿದೆ. KEONICS ರಾಜ್ಯದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು IT ಸಂಬಂಧಿತ ಕೈಗಾರಿಕೆಗಳಿಗೆ ವಿಶ್ವದರ್ಜೆಯ ಮೂಲಸೌಕರ್ಯವನ್ನು ಸ್ಥಾಪಿಸಲು ಗಮನಹರಿಸುತ್ತದೆ.
KEONICS, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಗ್ರೂಪ್ ಬಿ & ಸಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಆಕಾಂಕ್ಷಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯಾದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ,ವೇತನ ಸೇರಿದಂತೆ ಮುಂತಾದ ಮಾಹಿತಿ ಈ ಕೆಳಗಿನಂತಿಹೆ.

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು
ವರ್ಷ 2023
ಒಟ್ಟು ಹುದ್ದೆಗಳು  26
ಅಪ್ಲಿಕೇಶನ್ ವಿಧಾನ ಆನ್ಲೈನ್

KEONICS ಹುದ್ದೆಗಳ ಮಾಹಿತಿ 2023  :

ಹುದ್ದೆಯ ಹೆಸರು :
ಗ್ರೂಪ್ B:
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) – ( Assistant Manager)(Technical) – 04
ಸಹಾಯಕ ವ್ಯವಸ್ಥಾಪಕರು ( Non-technical)- 02

ಗ್ರೂಪ್ C:
ಆಪ್ತ ಕಾರ್ಯದರ್ಶಿ( Private Secretary) -01
ಹಿರಿಯ ಸಹಾಯಕರು( senior assistant)( technical) – 4
ಹಿರಿಯ ಸಹಾಯಕರು ( non-technical)-3
ಸಹಾಯಕರು( technical)-6
ಸಹಾಯಕರು( non technical)-6

ಒಟ್ಟು 26 ಖಾಲಿ ಹುದ್ದೆಗಳು

KEONICS ಹುದ್ದೆಗೆ ಬೇಕಾದ ಅರ್ಹತೆಗಳು :

  1.  ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ  ಅಥವಾ  ವಿಶ್ವವಿದ್ಯಾಲಯದಿಂದ ಯಾವುದೇ ಪದವಿ/ ಸ್ನಾತಕೋತ್ತರ ಪದವಿ ಗಳಿಸಿರಬೇಕು.
  2. ವಯೋಮಿತಿ(Age limit): ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು

ಸಂಬಳದ ವಿವರ :

ಗ್ರೂಪ್ B & C:

  1. ಸಹಾಯಕ ವ್ಯವಸ್ಥಾಪಕರು  ( Assistant Manager)(Technical) – ರೂ 52650 ರಿಂದ 97100
  2. ಸಹಾಯಕ ವ್ಯವಸ್ಥಾಪಕರು ( Non-technical)- ರೂ.52650-97100
  3. ಆಪ್ತ ಕಾರ್ಯದರ್ಶಿ( Private Secretary)- ರೂ. 40900-78200
  4.  ಹಿರಿಯ ಸಹಾಯಕರು( senior assistant)( technical) – ರೂ. 33450 ರಿಂದ 62600
  5.  ಹಿರಿಯ ಸಹಾಯಕರು ( non-technical)- ರೂ. 33450 ರಿಂದ 62600
  6.  ಸಹಾಯಕರು( technical)- ರೂ. 30350 ರಿಂದ 58250
  7. ಸಹಾಯಕರು( non technical)- ರೂ. 30350 ರಿಂದ 58250

ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?:

ಅಭ್ಯರ್ಥಿಗಳ ಆಯ್ಕೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ  ಮಾಡಲಾಗುತ್ತದೆ.

ಅರ್ಜಿ ಶುಲ್ಕ ಎಷ್ಟಿರುತ್ತದೆ?:

  1. ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 750/-
  2. ಪ್ರವರ್ಗ 2A/ 2B/ 3A/ 3B ಸೇರಿದ ಅಭ್ಯರ್ಥಿಗಳಿಗೆ : ರೂ. 750/-
  3. SC/ ST/ C1 ಸೇರಿದ ಅಭ್ಯರ್ಥಿಗಳಿಗೆ : 375/-
  4. ಅಂಗವಿಕಲ ಅಭ್ಯರ್ಥಿಗಳಿಗೆ ರೂ. 250/-

ಅರ್ಜಿ ಶುಲ್ಕವನ್ನು ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿಸಬಹುದು.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಅನ್ವಯಿಸಿದ್ದಲ್ಲಿ ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು.
ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಸದ್ಯಕ್ಕೆ ಮುಂದೂಡಲಾಗಿದೆ ಶೀಘ್ರದಲ್ಲೇ ಪ್ರಕಟಿಸಲಾಗುವುದು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಶೀಘ್ರದಲ್ಲೇ ಪ್ರಕಟಿಸಲಾಗುವುದು

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

lingarajramapur
Author

lingarajramapur

Leave a Reply

Your email address will not be published. Required fields are marked *