ನೌಕಾಪಡೆಯ ನೇಮಕಾತಿಗಾಗಿ ಅಧಿಸೂಚನೆ 2023 – Indian Navy SSR Recruitment 2023


ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ.  ಈ ಲೇಖನದಲ್ಲಿ ಭಾರತೀಯ ನೌಕಾಪಡೆಯ SSR ನೇಮಕಾತಿ (Indian Navy SSR Recruitment) – 2023 ರ  ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.  ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

– ಭಾರತೀಯ ನೌಕಾಪಡೆಯ SSR ನೇಮಕಾತಿ (Indian Navy SSR Recruitment) – 2023 –

ಭಾರತೀಯ ನೌಕಾಪಡೆಯು ಅಗ್ನಿವೀರ್ (SSR) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು  ಸಲ್ಲಿಸಬಹುದಾಗಿದೆ. ಈ ಇಂಡಿಯನ್ ನೇವಿ ಅಗ್ನಿವೀರ್(Agniveer) ಉದ್ಯೋಗ ಅಧಿಸೂಚನೆ 2023 ಅಧಿಕೃತ ವೆಬ್‌ಸೈಟ್‌ನಲ್ಲಿ 29.05.2023 ರಿಂದ 15.06.2023 ರವರೆಗೆ ಲಭ್ಯವಿರುತ್ತದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹುದ್ದೆಗಳ ಮಾಹಿತಿ ಕೆಳಗಿನಂತಿದೆ: 

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಭಾರತೀಯ ನೌಕಾಪಡೆ(Indian Navy)
ಹುದ್ದೆಗಳ ಹೆಸರು SSR
ವರ್ಷ 2023
ಒಟ್ಟು ಹುದ್ದೆಗಳು  1365 ಪೋಸ್ಟ್ ಗಳು
ಅಪ್ಲಿಕೇಶನ್ ವಿಧಾನ ಆನ್ಲೈನ್

SSR ನೇಮಕಾತಿ 2023 ಖಾಲಿ ಹುದ್ದೆಗಳ ವಿವರ :

ಒಟ್ಟು 1365 ಖಾಲಿ ಹುದ್ದೆಗಳಿವೆ
ಸೀನಿಯರ್ ಸೆಕೆಂಡರಿ ನೇಮಕಾತಿ (SSR) : 1365
ಪುರುಷ  : 1092
ಮಹಿಳೆ : 273
ಉದ್ಯೋಗ ಸ್ಥಳ : ಅಖಿಲ ಭಾರತ

SSR ಹುದ್ದೆಗೆ ಬೇಕಾದ ಅರ್ಹತೆಗಳು :

  1. ಶೈಕ್ಷಣಿಕ ಅರ್ಹತೆ:

ಭಾರತೀಯ ನೌಕಾಪಡೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು .

      2. ವಯೋಮಿತಿ :

ಅಭ್ಯರ್ಥಿಯು 01 ನವೆಂಬರ್ 2002 ರಿಂದ 30 ಏಪ್ರಿಲ್ ದಿನಾಂಕಗಳನ್ನು ಒಳಗೊಂಡಂತೆ).2006 ರ ನಡುವೆ ಜನಿಸಿರಬೇಕು (ಎರಡೂ

ಅಗ್ನಿವೀರ್‌ (SSR) ಅಭ್ಯರ್ಥಿಗಳ ವಯಸ್ಸು ದಾಖಲಾತಿ ದಿನದಂದು 172 – 21 ವರ್ಷಗಳ ನಡುವೆ ಇರಬೇಕು.

ಸಂಬಳದ ವಿವರ :

ಪ್ರತಿ ತಿಂಗಳು, ರೂ.30000/- ವರೆಗೆ
ನೀಡಲಾಗುತ್ತದೆ. ಜೊತೆಗೆ ಇದರ ಭತ್ಯೆಗಳನ್ನು ನೀಡಲಾಗುತ್ತದೆ.

ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?:

ಲಿಖಿತ ಪರೀಕ್ಷೆ, PFT, ನೇಮಕಾತಿ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಅರ್ಜಿ ಶುಲ್ಕ ಎಷ್ಟಿರುತ್ತದೆ?:

ಅರ್ಜಿ ಶುಲ್ಕ ರೂ. 550/- ಇರುತ್ತದೆ, ಇದನ್ನು ಆನ್ಲೈನ ಮೂಲಕ ಪಾವತಿಸಬೇಕು.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ, ಅದಕ್ಕಾಗಿ ಇಲ್ಲಿ  ಕ್ಲಿಕ್ ಮಾಡಿ.

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಅನ್ವಯಿಸಿದ್ದಲ್ಲಿ ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  29-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  15-06-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

   ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

Comments

5 responses to “ನೌಕಾಪಡೆಯ ನೇಮಕಾತಿಗಾಗಿ ಅಧಿಸೂಚನೆ 2023 – Indian Navy SSR Recruitment 2023”

Leave a Reply

Your email address will not be published. Required fields are marked *