ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ IBPS RRB 2023ರ ನೇಮಕಾತಿ ಅಡಿಯಲ್ಲಿ ಕೆಲಸವನ್ನು ಪಡೆದುಕೊಳ್ಳುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
– IBPS RRB ನೇಮಕಾತಿ(Recruitment) 2023ರ ಅವಲೋಕನ –
ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್(IBPS) ಪ್ರಾದೇಶಿಕ ಗ್ರಾಮೀಣ ಬ್ಯಾಂಕ್(RRB) 8594 ಆಫೀಸರ್ ಮತ್ತು ಆಫೀಸ್ ಅಸಿಸ್ಟೆಂಟ್ ಪೋಸ್ಟ್ಗಳಿಗೆ ಸಂಬಂಧಿಸಿದಂತೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ . ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ವಿವರಗಳ ಅಧಿಸೂಚನೆಯನ್ನು ಪರಿಶೀಲಿಸಬಹುದು. ಆರ್‌ಆರ್‌ಬಿಗಳಲ್ಲಿ ಪ್ರಮುಖವಾಗಿ ನೇಮಕ ಮಾಡಲು ಆಗಸ್ಟ್ – ಸೆಪ್ಟೆಂಬರ್‌ಗಳಲ್ಲಿ ಆನ್‌ಲೈನ್ ಪರೀಕ್ಷೆ ನಡೆಸಲಾಗುತ್ತದೆ, ನವೆಂಬರ್ ತಿಂಗಳಲ್ಲಿ ನಬಾರ್ಡ್ ಮತ್ತು ಐಬಿಪಿಎಸ್ ಜತೆಗೂಡಿ ಸಂದರ್ಶನ ಪ್ರಕ್ರಿಯೆ ನಡೆಸಲಿವೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ :
ಹುದ್ದೆಗಳ ಮಾಹಿತಿ ಕೆಳಗಿನಂತಿದೆ:
ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು: |
ಇಲಾಖೆ ಹೆಸರು | IBPS RRB |
ಹುದ್ದೆಗಳ ಹೆಸರು | ಆಫೀಸರ್ ಮತ್ತು ಆಫೀಸ್ ಅಸಿಸ್ಟೆಂಟ್ |
ವರ್ಷ | 2023 |
ಒಟ್ಟು ಹುದ್ದೆಗಳು | 8594 ಪೋಸ್ಟ್ ಗಳು |
ಅಪ್ಲಿಕೇಶನ್ ವಿಧಾನ | ಆನ್ಲೈನ್ |
IBPS RRB 2023 ರ ಹುದ್ದೆಯ ವಿವರ :
1. ಕಚೇರಿ ಸಹಾಯಕ (ವಿವಿಧೋದ್ದೇಶ)
ಹುದ್ದೆಗಳ ಸಂಖ್ಯೆ: 5538
2. ಆಫೀಸರ್ ಸ್ಕೇಲ್-I (ಸಹಾಯಕ ವ್ಯವಸ್ಥಾಪಕ)
ಹುದ್ದೆಗಳ ಸಂಖ್ಯೆ: 2485
3. ಅಧಿಕಾರಿ ಸ್ಕೇಲ್-II (ಜನರಲ್ ಬ್ಯಾಂಕಿಂಗ್ ಅಧಿಕಾರಿ (ಮ್ಯಾನೇಜರ್))
ಹುದ್ದೆಗಳ ಸಂಖ್ಯೆ: 315
4. ಆಫೀಸರ್ ಸ್ಕೇಲ್-II (ಮಾಹಿತಿ ತಂತ್ರಜ್ಞಾನ)
ಹುದ್ದೆಗಳ ಸಂಖ್ಯೆ: 68
5. ಆಫೀಸರ್ ಸ್ಕೇಲ್-II (ಚಾರ್ಟರ್ಡ್ ಅಕೌಂಟೆಂಟ್)
ಹುದ್ದೆಗಳ ಸಂಖ್ಯೆ: 21
6. ಆಫೀಸರ್ ಸ್ಕೇಲ್-II (ಕಾನೂನು)
ಹುದ್ದೆಗಳ ಸಂಖ್ಯೆ: 24
7. ಆಫೀಸರ್ ಸ್ಕೇಲ್-II (ಖಜಾನೆ ವ್ಯವಸ್ಥಾಪಕ)
ಹುದ್ದೆಗಳ ಸಂಖ್ಯೆ: 08
8. ಆಫೀಸರ್ ಸ್ಕೇಲ್-II (ಮಾರ್ಕೆಟಿಂಗ್)
ಹುದ್ದೆಗಳ ಸಂಖ್ಯೆ: 03
9. ಆಫೀಸರ್ ಸ್ಕೇಲ್-II (ಕೃಷಿ)
ಹುದ್ದೆಗಳ ಸಂಖ್ಯೆ: 59
10. ಆಫೀಸರ್ ಸ್ಕೇಲ್-III
ಹುದ್ದೆಗಳ ಸಂಖ್ಯೆ: 73
ಒಟ್ಟು : 8594 ಹುದ್ದೆಗಳು
ಉದ್ಯೋಗ ಸ್ಥಳ : ಭಾರತ
IBPS RRB ಹುದ್ದೆಗೆ ಬೇಕಾಗಿರುವ ಅರ್ಹತೆಯ ವಿವರಗಳು:
ಶೈಕ್ಷಣಿಕ ಅರ್ಹತೆ :
ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಪದವಿ / ಸ್ನಾತಕೋತ್ತರ ಪದವಿ ಪಾಸ್ ಮಾಡಿರಬೇಕು. ಜತೆಗೆ ಕೆಲವೊಂದು ಹುದ್ದೆಗೆ ಎಂಬಿಎ, ಸಿಎ ಪಾಸ್ ಮಾಡಿರಬೇಕು. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅರ್ಜಿಯನ್ನು ಸಲ್ಲಿಸುವುದು ಉತ್ತಮ.
Note : ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
0-5 ವರ್ಷಗಳ ಕಾರ್ಯನುಭವವನ್ನು ಹೊಂದಿರಬೇಕು
ವಯೋಮಿತಿ :
ಅಧಿಸೂಚನೆಯ ಪ್ರಕಾರ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 40 ವರ್ಷಗಳ ಒಳಗಿರಬೇಕು.
ವಯಸ್ಸಿನ ಸಡಿಲಿಕೆ :
ಒಬಿಸಿ (NCL) ಅಭ್ಯರ್ಥಿಗಳು: 03 ವರ್ಷಗಳು ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು ಅಂಗವಿಕಲ (ಒಬಿಸಿ) ಅಭ್ಯರ್ಥಿಗಳು: 13 ವರ್ಷಗಳು ಅಂಗವಿಕಲ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳು: 15 ವರ್ಷಗಳು
ಎಷ್ಟು ಸಂಬಳ ಸಿಗುತ್ತದೆ :
ಕಚೇರಿ ಸಹಾಯಕ : ರೂ.15,000 – 19,000/-
ಆಫೀಸರ್ ಸ್ಕೇಲ್-I : ರೂ.29,000- 33,000/-
ಆಫೀಸರ್ ಸ್ಕೇಲ್-II : ರೂ.33,000 – 39,000/-
ಆಫೀಸರ್ ಸ್ಕೇಲ್-III : ರೂ.38,000 – 44,000/-
ಆಯ್ಕೆ ಪ್ರಕ್ರಿಯೆ:
ಆರ್‌ಆರ್‌ಬಿ ಹುದ್ದೆಗಳ ಆಯ್ಕೆ ಪ್ರಕ್ರಿಯೆಯಲ್ಲಿ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಜತೆಗೆ, ಸಂದರ್ಶನ ಪ್ರಕ್ರಿಯೆ ಇರುತ್ತದೆ.
ಅರ್ಜಿ ಶುಲ್ಕ :
ಅಧಿಕಾರಿ (ಸ್ಕೇಲ್ I, II ಮತ್ತು III) ಹಾಗೂ ಕಚೇರಿ ಸಹಾಯಕ (ವಿವಿಧೋದ್ದೇಶ)
SC/ST/PWBD : ರೂ.175/-
ಇತರೆ : ರೂ.850/-
ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಅನ್ವಯಿಸಿದ್ದಲ್ಲಿ ಪಾವತಿಸಿ
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 1-06-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 21-06-2023 |
ಪ್ರಮುಖ ಲಿಂಕುಗಳು |
ಹೋಮ್ ಪೇಜ್ |
ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ