ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಕರ್ನಾಟಕ ಯುವನಿಧಿ ಯೋಜನೆ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿಸಿ ಕೊಡಲಾಗುತ್ತದೆ. ಕರ್ನಾಟಕ ಯುವನಿಧಿ ಯೋಜನೆ ಅಡಿಯಲ್ಲಿ ನಿರುದ್ಯೋಗಿಗಳಿಗೆ ಉಚಿತ ನಿರುದ್ಯೋಗಿ ಭತ್ಯೆ ಕೊಡಲು ಅರ್ಜಿಯನ್ನ ಆಹ್ವಾನಿಸಲಿದ್ದಾರೆ. ಅರ್ಜಿಯನ್ನ ಸಲ್ಲಿಸಿದವರಿಗೆ ಮಾತ್ರ ಈ ಉಚಿತ ಭತ್ಯೆ ಸಿಗುತ್ತದೆ. ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕು, ಎಲ್ಲಿ ಸಲ್ಲಿಸಬೇಕು ಕೊನೆಯ ದಿನಾಂಕ ಏನು ಎಂಬುದನ್ನು ಸಂಪೂರ್ಣವಾಗಿ ಕೆಳಗೆ ಕೊಡಲಾಗಿದೆ.
– ಕರ್ನಾಟಕ ಯುವ ನಿಧಿ ಯೋಜನೆ 2023 ರ ಅವಲೋಕನ –
2022-23ರಲ್ಲಿ ಉತ್ತೀರ್ಣರಾಗಿರುವ 18ರಿಂದ 25 ವರ್ಷದೊಳಗಿನ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ಸಾವಿರ ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು. ಮಂಗಳಮುಖಿಯರಿಗೂ (Transgender) ಇದು ಅನ್ವಯವಾಗುತ್ತದೆ ಮತ್ತು ಡಿಪ್ಲೋಮಾ ಹೊಂದಿದವರಿಗೆ 1500 ಪಾವತಿ ಮಾಡಲಾಗುವುದು. 24 ತಿಂಗಳ ಒಳಗೆ ಖಾಸಗಿ ಅಥವಾ ಸರ್ಕಾರಿ ನೌಕರಿ ಪಡೆದರೆ ಅಂತಹ ಪದವೀಧರರಿಗೆ ಅಥವಾ ಡಿಪ್ಲೋಮಾ ಹೋಲ್ಡರ್ಸ್ಗಳಿಗೆ ಹಣ ಪಾವತಿ ಮಾಡಲಾಗುವುದಿಲ್ಲ. ನಿರುದ್ಯೋಗಿ ಅಂತಾ ಅರ್ಜಿ ಹಾಕಿ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಹಣ ಪಾವತಿ ಮಾಡಲಾಗುತ್ತದೆ. ನೋಂದಣಿ ಮಾಡಿಕೊಂಡ 24 ತಿಂಗಳವರೆಗೆ ಮಾತ್ರ ಭತ್ಯೆ ನೀಡಲಾಗುತ್ತದೆ.
ಕರ್ನಾಟಕ ಯುವ ನಿಧಿ ಯೋಜನೆ ಮಾಹಿತಿ ಕೆಳಗಿನಂತಿದೆ:
ಯುವ ನಿಧಿ ಯೋಜನೆ ಮುಖ್ಯಾಂಶಗಳು: |
ಇಲಾಖೆ ಹೆಸರು | Karnataka Governament |
ಯೋಜನೆ | ಕರ್ನಾಟಕ ಯುವ ನಿಧಿ |
ವರ್ಷ | 2023 |
ವರ್ಗ | ನಿರುದ್ಯೋಗಿ ಪಧವಿದರರು & ಡಿಪ್ಲೋಮ ಹೋಲ್ಡರ್ಸ್ |
ಅಪ್ಲಿಕೇಶನ್ ವಿಧಾನ | online |
ಯುವ ನಿಧಿ ಅರ್ಜಿ ಸಲ್ಲಿಕೆಗೆ ಅರ್ಜಿ ಕರೆದ 6 ತಿಂಗಳವರೆಗೆ ಅವಕಾಶ ಇರಲಿದೆ. ದುರ್ಬಳಕೆ ತಡೆಯಲು ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ. 24 ತಿಂಗಳೊಳಗೆ ಖಾಸಗಿ ಅಥವಾ ಸರ್ಕಾರಿ ನೌಕರಿ ಪಡೆದರೆ ಇಲ್ಲ. ಅಂಥವರಿಗೆ ಯುವನಿಧಿ ಯೋಜನೆ ಹಣ ನೀಡುವುದನ್ನು ನೀಡುವುದಕ್ಕೆ ಪ್ರಾರಂಬಿಸುತ್ತಾರೆ.
Yuva Nidhi Scheme Karnataka 2023 ಷರತ್ತು ಮತ್ತು ನಿಬಂಧನೆಗಳು:
- ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ, ಎರಡು ವರ್ಷಗಳ ಅವಧಿಯೊಳಗೆ
- ಪದವಿ ಹಾಗೂ ಡಿಪ್ಲೊಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ (Domicile of Karnataka) ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ.
- ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ವಗಿತಗೊಳಿಸಲಾಗುವುದು.
- ಭತ್ಯೆಯನ್ನು DBT ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.
- ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.
ಯುವನಿಧಿ ಯೋಜನೆಗೆ ಇವರು ಅರ್ಹರಲ್ಲ
- ಈಗಾಗಲೇ ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದು ಕೆಲಸಕ್ಕೆ ಇರಲು ಕಾಯುತ್ತಿರುವವರು
- ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರು.
- ಶಿಶಿಕ್ಷು (Apprentice) ವೇತನವನ್ನು ಪಡೆಯುತ್ತಿರುವವರು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು
- ಆಧಾರ್ ಕಾರ್ಡ್
- ಆದಾಯ ಪ್ರಮಾಣಪತ್ರ
- ಶೈಕ್ಷಣಿಕ ಅರ್ಹತೆಯ ದಾಖಲೆಗಳು
- ಬ್ಯಾಂಕ್ ಖಾತೆ
- ಪಾಸ್ಪೋರ್ಟ್ ಗಾತ್ರದ ಫೋಟೋ
- ಮೊಬೈಲ್ ನಂಬರ
ಅರ್ಜಿಯನ್ನು ಹೀಗೆ ಸಲ್ಲಿಸಿ :
ಯುವನಿಧಿ ಯೋಜನೆಗೆ ಅರ್ಜಿಯನ್ನು ಆನ್ಲೈನ್ ಮೂಲಕ ಅಧಿಕೃತ ಜಾಲತಾಣತನವಾದ ಮೂಲಕ ಸಲ್ಲಿಸಬೇಕಾಗುತ್ತದೆ. ಯುವನಿಧಿ ಯೋಜನೆಗೆ ಕರ್ನಾಟಕ ಸರ್ಕಾರ ಈಗಾಗಲೇ ಆನ್ಲೈನ್ ಅರ್ಜಿ ಫಾರಂ ಅನ್ನು ಸಿದ್ದಪಡಿಸುತ್ತಿದ್ದೂ ಕೆಲವೇ ದಿನಗಳಲ್ಲಿ ಅರ್ಜಿ ಪ್ರಾರಂಭಿಸಲಾಗುತ್ತದೆ. ಆದ್ದರಿಂದ ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ & ವಿಡಿಯೋ ವನ್ನು ನಮ್ಮ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತೇವೆ. ಆದ್ದರಿಂದ ಮುಂದಿನ ಅಪ್ಡೇಟ್ ಗಳಿಗೆ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಶೀಘ್ರದಲ್ಲೇ ಪ್ರಕಟಿಸಲಾಗುವುದು. |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಶೀಘ್ರದಲ್ಲೇ ಪ್ರಕಟಿಸಲಾಗುವುದು. |
ಪ್ರಮುಖ ಲಿಂಕುಗಳು |
ಹೋಮ್ ಪೇಜ್ |
ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | Update Soon |
ಅರ್ಜಿ ಸಲ್ಲಿಸುವ ಲಿಂಕ್ | Update Soon |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ