ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಶಕ್ತಿ ಯೋಜನೆಯ ಉಚಿತ ಬಸ್ ಪ್ರಯಾಣದ ಹೊಸ 9 ಕಂಡೀಶನ್ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಪ್ರಯಾಣ ಮಾಡುವಾಗ ಯಾವ ದಾಖಲೆ ಕಡ್ಡಾಯ ಯಾವ ಬಸ್ಗಳಲ್ಲಿ ಉಚಿತವಿದೆ ಯಾವ ಬಸ್ಸುಗಳಲ್ಲಿ ಉಚಿತವಿಲ್ಲ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮತ್ತು ಬಹು ನಿರೀಕ್ಷೆಯ ‘ಶಕ್ತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಈ ಯೋಜನೆಯಡಿ ವಿದ್ಯಾರ್ಥಿನಿಯರೂ ಸೇರಿದಂತೆ ರಾಜ್ಯದ ಎಲ್ಲ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ (ಐಷಾರಾಮಿ/ಎಸಿ, ನಾನ್‌ಎಸಿ ಹೊರತುಪಡಿಸಿ) ಉಚಿತವಾಗಿ ಪ್ರಯಾಣಿಸಬಹುದು. ಆದರೆ ಕೆಳಗಿನ 9 ಕಂಡಿಶನ್ಸ್ ಗಳು ಕಡ್ಡಾಯ ಹಾಗೂ ದಾಖಲೆಗಳನ್ನು ಮಹಿಳೆಯರು ತೆಗೆದುಕೊಂಡು ಹೋಗಬೇಕು.
ಪ್ರಮುಖ ದಾಖಲೆಗಳು
ಆಧಾರ್ ಕಾರ್ಡ್ ಅಥವಾ ಯಾವುದೇ ಗುರುತಿನ ಚೀಟಿ, ಮೂರು ತಿಂಗಳ ಒಳಗಾಗಿ ಶಕ್ತಿ ಸ್ಮಾರ್ಟ್ ಕಾರ್ಡ್ ಕಡ್ಡಾಯವಾಗಿ ಪಡೆದುಕೊಳ್ಳಬೇಕು.
ಈ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ಇಲ್ಲ
ರಾಜ್ಯದ ಹೊರಗೆ ಪ್ರಯಾಣಿಸುವ ಬಸ್ಸುಗಳು, ಐಷಾರಾಮಿ ಬಸ್ಸುಗಳು, ಎಸಿ ಮತ್ತು ನಾನ್ ಎಸಿ ಸೇರಿದಂತೆ ಸ್ಲೀಪರ್ ಬಸ್‌ಗಳು, ವಾಯು ವಜ್ರ, ಅಂಬಾರಿ, ಐರಾವತ್, ವಿಮಾನ ನಿಲ್ದಾಣ ಬಸ್, EV ಪವರ್ ಪ್ಲಸ್ (AC)
ಯೋಜನೆಗೆ ಈ ಬಸ್ ಗಳನ್ನು ಮಾತ್ರ ಅನುಮತಿಸಲಾಗಿದೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯುವ್ಯ ರಸ್ತೆ ಸಾರಿಗೆ ನಿಗಮ (NWRTC), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC).
50% ಸೀಟುಗಳನ್ನು ಪುರುಷರಿಗೆ ಮೀಸಲಿಡಲಾಗಿದೆ
‘ಶಕ್ತಿ’ ಯೋಜನೆ ಅನ್ವಯವಾಗುವ ಬಸ್‌ಗಳಲ್ಲಿ ಶೇ.50ರಷ್ಟು ಸೀಟುಗಳನ್ನು ಪುರುಷರಿಗೆ ಮೀಸಲಿಡುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಆದರೆ ರಾಜ್ಯದ ಹೊರಗೆ ಪ್ರಯಾಣಿಸುವ ಬಸ್‌ಗಳು, ಐಷಾರಾಮಿ ಬಸ್‌ಗಳು, ಸ್ಲೀಪರ್ ಬಸ್‌ಗಳು (ಎಸಿ ಮತ್ತು ನಾನ್ ಎಸಿ ಎರಡೂ), ವಾಯು ವಜ್ರ, ಅಂಬಾರಿ, ಐರಾವತ್, ಫ್ಲೈಬಸ್ ಮತ್ತು ಇವಿ ಪವರ್ ಪ್ಲಸ್ (ಎಸಿ) ಬಸ್‌ಗಳಿಗೆ ‘ಶಕ್ತಿ’ ಯೋಜನೆ ಅನ್ವಯಿಸುವುದಿಲ್ಲ
ಶಕ್ತಿ ಸ್ಮಾರ್ಟ್ ಕಾರ್ಡ್ ಗೆ ಸೇವಾ ಸಿಂಧೂ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ ?
ಹಂತ 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
https://sevasindhuservices.karnataka.gov.in/
ಹಂತ 2: ನೀವು ಮೊದಲ ಸಾರಿ ನಿವಾಸಿದ್ದು ಮೂಲಕ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಅಕೌಂಟನ್ನು ಕ್ರಿಯೇಟ್ ಮಾಡಬೇಕಾಗುತ್ತದೆ. ಅದಕ್ಕಾಗಿ Register Here ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ಹಾಕಿ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ.
ಹಂತ 3: ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ಅಥವಾ ಓಟಿಪಿ ಮೂಲಕ ಲಾಗಿನ್ ಆಗಿ. ನಂತರ ಸರ್ಚ್ ಆಪ್ಷನ್ ಅಲ್ಲಿ ಶಕ್ತಿ ಸ್ಮಾರ್ಟ್ ಕಾರ್ಡ್ ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಿ
ಹಂತ 4: ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ಐಡಿ, ಆಧಾರ್ ಸಂಖ್ಯೆ, ಗುರುತಿನ ಚೀಟಿ ಮುಂತಾದ ನಿಮಗೆ ಅಗತ್ಯವಿರುವ ವಿವರಗಳನ್ನು ಇಲ್ಲಿ ನಮೂದಿಸಿ. ಕೊನೆಯದಾಗಿ, ಅಗತ್ಯ ದಾಖಲೆಗಳನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿ ಸಲ್ಲಿಸಬೇಕು.
ಹಂತ 5: ನಂತರ, ಸೇವಾ ಸಿಂಧು ಶಕ್ತಿ ಸ್ಮಾರ್ಟ್ ಕಾರ್ಡ್ PDF ಫೈಲ್‌ನಲ್ಲಿ ನಿಮ್ಮ ಮುಂದೆ ತೆರೆಯುತ್ತದೆ. ಇಲ್ಲಿ ನೀವು ಡೌನ್‌ಲೋಡ್ PDF ಅನ್ನು ಕ್ಲಿಕ್ ಮಾಡುವ ಮೂಲಕ ಸೇವಾ ಸಿಂಧು ಶಕ್ತಿ ಸ್ಮಾರ್ಟ್ ಕಾರ್ಡ್ ಅನ್ನು ಡೌನ್‌ಲೋಡ್ ಮಾಡಬೇಕು. ಈ ರೀತಿಯಲ್ಲಿ ನೀವು ಸೇವಾ ಸಿಂಧು ಶಕ್ತಿ ಸ್ಮಾರ್ಟ್ ಕಾರ್ಡ್ ಅನ್ನು ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಬಹುದು.
ಈ ತರಹದ ಉತ್ತಮ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹತರಿಗೆ ಹಾಗೂ ಬಂಧುಗಳಿಗೆ ತಪ್ಪದೆ ಶೇರ್ ಮಾಡಿ, ಧನ್ಯವಾದಗಳು.