ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿBPNL(ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್) 2023 ರ ನೇಮಕಾತಿಯ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ ಪಶುಪಾಲನ ನಿಗಮದ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
– BPNL ನೇಮಕಾತಿ(Recruitment) 2023 ರ ಅವಲೋಕನ –
ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್(BPNL) ನಲ್ಲಿ ಒಟ್ಟು 3444 ಹುದ್ದೆಗಳು ಖಾಲಿ ಇವೆ. ಪಶುಪಾಲನಾ ವಿಮಾ ಯೋಜನೆ, ಜಾನುವಾರು ಕಲ್ಯಾಣ ವಿಮಾ ಯೋಜನೆ, ಆರತಿಯ ಪಶುಪಾಲನ್ ನಿಗಮ್ ಲಿಮಿಟೆಡ್ ನಡೆಸುತ್ತಿರುವ ವಸತಿ ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ರಾಜ್ಯ ಮಟ್ಟದಲ್ಲಿ ನಿರ್ವಹಿಸಲು ಉದ್ದೇಶಿಸಲಾಗಿದೆ. ಈ ಯೋಜನೆಗಳ ಮೂಲಕ ರೈತರು ಮತ್ತು ಪಶುಗಳಿಗೆ ವಿಮೆಯ ಪ್ರಯೋಜನಗಳನ್ನು ಮತ್ತು ನಿರುದ್ಯೋಗಿ ಯುವಕರಿಗೆ ಕೌಶಲ್ಯ ತರಬೇತಿಯನ್ನು ನೀಡಲು ಮತ್ತು ಈ ಯೋಜನೆಗಳನ್ನು ಯಶಸ್ವಿಗೊಳಿಸಲು ಪಂಚಾಯತ್, ತಹಸಿಲ್ ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ಸಾಹಿ ಮತ್ತು ಶ್ರಮಶೀಲ ಯುವಕರ ಅಗತ್ಯವಿದೆ. ಹಾಗಾಗಿ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಿ, ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು.
ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :
ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು: |
ಇಲಾಖೆ ಹೆಸರು | ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್(BPNL) |
ಹುದ್ದೆಗಳ ಹೆಸರು | ಸರ್ವೆ ಇನ್ ಚಾರ್ಜ್, ಸರ್ವೇಯರ್ |
ವರ್ಷ | 2023 |
ಒಟ್ಟು ಹುದ್ದೆಗಳು | 3444 ಪೋಸ್ಟ್ ಗಳು |
ಅಪ್ಲಿಕೇಶನ್ ವಿಧಾನ | ಆನ್ಲೈನ್(online) |
BPNL ನೇಮಕಾತಿ 2023 ಖಾಲಿ ಹುದ್ದೆಗಳ ವಿವರ :
ಪೋಸ್ಟ್ ಹೆಸರು: ಸರ್ವೆ ಇನ್ ಚಾರ್ಜ್, ಸರ್ವೇಯರ್
ಸರ್ವೆ ಉಸ್ತುವಾರಿ : 574
ಸರ್ವೇಯರ್ : 2870
ಒಟ್ಟು ಹುದ್ದೆಗಳ ಸಂಖ್ಯೆ : 3444
ಉದ್ಯೋಗ ಸ್ಥಳ : ಅಖಿಲ ಭಾರತ
ಪಶುಪಾಲನ ನಿಗಮದ ನೇಮಕಾತಿ – 2023ಕ್ಕೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :
ಸರ್ವೆ ಉಸ್ತುವಾರಿ : 12 ನೇ ತರಗತಿಯನ್ನು ಪಾಸಾಗಿರಬೇಕು
ಸರ್ವೇಯರ್ : 10 ನೇ ತರಗತಿಯನ್ನು ಪಾಸಾಗಿರಬೇಕು
ವಯೋಮಿತಿ :
ಅಭ್ಯರ್ಥಿಯು ಅಧಿಸೂಚನೆಯ ಪ್ರಕಾರ ಕನಿಷ್ಠ 18 ವರ್ಷಗಳಿಂದ ಗರಿಷ್ಠ 40 ವರ್ಷಗಳನ್ನು ಮೀರಿರಬಾರದು.
ಸಂಬಳದ ಪ್ಯಾಕೇಜ್ ಎಷ್ಟು?:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಸರ್ವೆ ಉಸ್ತುವಾರಿಗೆ : ರೂ.24000/-
ಸರ್ವೇಯರ್ ಗೆ : ರೂ.20000/- ಸಂಬಳವನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ :
ಆನ್‌ಲೈನ್ ಪರೀಕ್ಷೆ
ಸಂದರ್ಶನ
ಅರ್ಜಿ ಶುಲ್ಕ :
ಅರ್ಜಿ ಶುಲ್ಕವಾಗಿ ಎಲ್ಲಾ ಅಭ್ಯರ್ಥಿಗಳು ರೂ.944/- ಗಳನ್ನು ಪಾವತಿಸಬೇಕು.
ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 16-06-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 05-07-2023 |
ಪ್ರಮುಖ ಲಿಂಕುಗಳು |
ಹೋಮ್ ಪೇಜ್ |
ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ