ರಾಜ್ಯದ ಅನ್ನದಾತರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ಅಕ್ರಮ ಸಕ್ರಮ ಯೋಜನೆಯಲ್ಲಿ ರೈತರ ಬೋರ್ವೆಲ್ ಗಳಿಗೆ
ಉಚಿತ ಟಿಸಿ, ವಿದ್ಯುತ್ ಮತ್ತು ಸೋಲಾರ್ ಪ್ಯಾನೆಲ್ ಒಳಗೊಂಡ ಕೃಷಿ ಪಂಪ್ ಸೆಟ್ ಅಳವಡಿಕೆ ಮಾಡಿಕೊಡಲಾಗುತ್ತಿದೆ, ಈ ಕುರಿತು ನಿನ್ನೆ ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ಕೊಟ್ಟಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಮಂಡ್ಯ ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ನಡೆದ ಇಂಧನ ಇಲಾಖೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಂಧನ ಸಚಿವ ಕೆಜೆ ಜಾರ್ಜ್ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಅಕ್ರಮ ಸಕ್ರಮ ಯೋಜನೆಯಡಿ ರಾಜ್ಯದ ರೈತರ ಜಮೀನಿನ ಬೋರ್ ವೆಲ್ ನಿಂದ 500 ಮೀಟರ್ ಒಳಗೆ ವಿದ್ಯುತ್ ಕಂಬ ಇದ್ದರೆ ಇಲಾಖೆ ವೆಚ್ಚದಲ್ಲಿಯೇ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಿ, ವಿದ್ಯುತ್ ಪರಿವರ್ತಕ (TC) ಅಳವಡಿಕೆ ಮಾಡಲಾಗುತ್ತದೆ.
ಒಂದು ವೇಳೆ ರೈತರ ಜಮೀನಿನ ಬೋರ್ವೆಲ್ 500 ಮೀಟರ್‌ಗಿಂತ ಹೆಚ್ಚಿನ ದೂರ ಇದ್ದಲ್ಲಿ ಅಂತಹ ಬೋರ್‌ವೆಲ್‌ಗಳನ್ನು ಸೋಲಾರ್ ಪಂಪ್‌ಸೆಟ್ ಯೋಜನೆಗೆ ಒಳಪಡಿಸಿ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಲು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ತಿಳಿಸಿದ್ದಾರೆ .
ರಾಜ್ಯದಲ್ಲಿ 2004 ರಿಂದ ಇದುವರೆಗೆ ಬರೋಬ್ಬರಿ ನಾಲ್ಕುವರೆ ಲಕ್ಷ ಅಕ್ರಮ ಐಪಿ ಸೆಟ್ಗಳನ್ನ ಸಕ್ರಮಗೊಳಿಸಿ ಮೂಲ ಸೌಲಭ್ಯ ಒದಗಿಸಲು ಅನುಮತಿ ಪಡೆಯಲಾಗಿದೆ
ನಂತರ 2.5 ಲಕ್ಷ ಐಪಿ ಸೆಟ್‌ಗಳನ್ನು ಸಕ್ರಮಗೊಳಿಸಿ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಉಳಿದ 2 ಲಕ್ಷ ಐಪಿ ಸೆಟ್‌ಗಳನ್ನು ಒಂದು ವರ್ಷದೊಳಗೆ ಸಕ್ರಮಗೊಳಿಸಿ ಮೂಲ ಸೌಲಭ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ .
ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೆರವಿನಲ್ಲಿ ರಾಜ್ಯದ ರೈತರಿಗೆ ಉಚಿತ ವಿದ್ಯುತ್ ಮತ್ತು ಸೋಲಾರ್ ಪಂಪ್ಸೆಟ್ ಗಳ ಅನುಕೂಲ ಆಗುತ್ತಿದ್ದು 500 ಮೀಟರ್‌ಗಿಂತ ಹೆಚ್ಚು ದೂರವಿರುವ ಬೋರ್‌ವೆಲ್‌ಗಳಿಗೆ ವಿದ್ಯುತ್ ಕಂಬಗಳಿಂದ ವಿದ್ಯುತ್ ಸಂಪರ್ಕ ಕೊಡುವುದರ ಬದಲು ಸೋಲಾರ್ ಅಳವಡಿಸಲು ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಲ್ಲಿ ಬರೋಬ್ಬರಿ 80 ಪರ್ಸೆಂಟ್ ರಿಯಾಯಿತಿ ದರ ರೈತರಿಗೆ ಸಿಗುತ್ತಿದ್ದು, ರಾಜ್ಯ ಸರ್ಕಾರದಿಂದ 50% ಮತ್ತು ಕೇಂದ್ರ ಸರ್ಕಾರದಿಂದ 30% ಸೇರಿ ಒಟ್ಟು ಶೇ. 80ರಷ್ಟು ರಿಯಾಯ್ತಿ ದರದಲ್ಲಿ ಸೌಲಭ್ಯ ನೀಡಲಾಗುತ್ತಿದೆ. ರೈತರು ಕೇವಲ ಶೇ.20ರಷ್ಟು ಹಣ ನೀಡಿದರೆ ಸಾಕು. ಸೋಲಾರ್ ಸಿಸ್ಟಮ್ ಬಳಕೆ ಮಾಡಿಕೊಳ್ಳಬಹುದು ಎಂದರು.
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Leave a Reply