ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ KEONICS 2023ರ ನೇಮಕಾತಿ ಅಡಿಯಲ್ಲಿ ಕೆಲಸವನ್ನು ಪಡೆದುಕೊಳ್ಳುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಒಂದು ಭರ್ಜರಿ ನೇಮಕಾತಿ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
– KEONICS ನೇಮಕಾತಿ(Recruitment) 2023ರ ಅವಲೋಕನ –
ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (KEONICS), ISO ಪ್ರಮಾಣೀಕೃತ ಸಂಸ್ಥೆಯಾಗಿದೆ. ಕರ್ನಾಟಕದಲ್ಲಿ ಎಲೆಕ್ಟ್ರಾನಿಕ್ಸ್ ಉದ್ಯಮಗಳನ್ನು ಉತ್ತೇಜಿಸುವ ಉದ್ದೇಶದಿಂದ ಈ ಸಂಸ್ಥೆಯನ್ನು ಜಾರಿಗೆ ತರಲಾಗಿದೆ. KEONICS ರಾಜ್ಯದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು IT ಸಂಬಂಧಿತ ಕೈಗಾರಿಕೆಗಳಿಗೆ ವಿಶ್ವದರ್ಜೆಯ ಮೂಲಸೌಕರ್ಯವನ್ನು ಸ್ಥಾಪಿಸಲು ಗಮನಹರಿಸುತ್ತದೆ.
KEONICS, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಗ್ರೂಪ್ ಬಿ & ಸಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಆಕಾಂಕ್ಷಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯಾದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ,ವೇತನ ಸೇರಿದಂತೆ ಮುಂತಾದ ಮಾಹಿತಿ ಈ ಕೆಳಗಿನಂತಿಹೆ.
ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು: |
ಇಲಾಖೆ ಹೆಸರು | ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ವರ್ಷ | 2023 |
ಒಟ್ಟು ಹುದ್ದೆಗಳು | 26 |
ಅಪ್ಲಿಕೇಶನ್ ವಿಧಾನ | ಆನ್ಲೈನ್ |
KEONICS ಹುದ್ದೆಗಳ ಮಾಹಿತಿ 2023 :
ಹುದ್ದೆಯ ಹೆಸರು :
ಗ್ರೂಪ್ B:
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) – ( Assistant Manager)(Technical) – 04
ಸಹಾಯಕ ವ್ಯವಸ್ಥಾಪಕರು ( Non-technical)- 02
ಗ್ರೂಪ್ C:
ಆಪ್ತ ಕಾರ್ಯದರ್ಶಿ( Private Secretary) -01
ಹಿರಿಯ ಸಹಾಯಕರು( senior assistant)( technical) – 4
ಹಿರಿಯ ಸಹಾಯಕರು ( non-technical)-3
ಸಹಾಯಕರು( technical)-6
ಸಹಾಯಕರು( non technical)-6
ಒಟ್ಟು 26 ಖಾಲಿ ಹುದ್ದೆಗಳು
KEONICS ಹುದ್ದೆಗೆ ಬೇಕಾದ ಅರ್ಹತೆಗಳು :
- ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ/ ಸ್ನಾತಕೋತ್ತರ ಪದವಿ ಗಳಿಸಿರಬೇಕು.
- ವಯೋಮಿತಿ(Age limit): ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು
ಸಂಬಳದ ವಿವರ :
ಗ್ರೂಪ್ B & C:
- ಸಹಾಯಕ ವ್ಯವಸ್ಥಾಪಕರು ( Assistant Manager)(Technical) – ರೂ 52650 ರಿಂದ 97100
- ಸಹಾಯಕ ವ್ಯವಸ್ಥಾಪಕರು ( Non-technical)- ರೂ.52650-97100
- ಆಪ್ತ ಕಾರ್ಯದರ್ಶಿ( Private Secretary)- ರೂ. 40900-78200
- ಹಿರಿಯ ಸಹಾಯಕರು( senior assistant)( technical) – ರೂ. 33450 ರಿಂದ 62600
- ಹಿರಿಯ ಸಹಾಯಕರು ( non-technical)- ರೂ. 33450 ರಿಂದ 62600
- ಸಹಾಯಕರು( technical)- ರೂ. 30350 ರಿಂದ 58250
- ಸಹಾಯಕರು( non technical)- ರೂ. 30350 ರಿಂದ 58250
ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?:
ಅಭ್ಯರ್ಥಿಗಳ ಆಯ್ಕೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಮಾಡಲಾಗುತ್ತದೆ.
ಅರ್ಜಿ ಶುಲ್ಕ ಎಷ್ಟಿರುತ್ತದೆ?:
- ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 750/-
- ಪ್ರವರ್ಗ 2A/ 2B/ 3A/ 3B ಸೇರಿದ ಅಭ್ಯರ್ಥಿಗಳಿಗೆ : ರೂ. 750/-
- SC/ ST/ C1 ಸೇರಿದ ಅಭ್ಯರ್ಥಿಗಳಿಗೆ : 375/-
- ಅಂಗವಿಕಲ ಅಭ್ಯರ್ಥಿಗಳಿಗೆ ರೂ. 250/-
ಅರ್ಜಿ ಶುಲ್ಕವನ್ನು ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿಸಬಹುದು.
ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಅನ್ವಯಿಸಿದ್ದಲ್ಲಿ ಪಾವತಿಸಿ
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು.
ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಸದ್ಯಕ್ಕೆ ಮುಂದೂಡಲಾಗಿದೆ ಶೀಘ್ರದಲ್ಲೇ ಪ್ರಕಟಿಸಲಾಗುವುದು |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಶೀಘ್ರದಲ್ಲೇ ಪ್ರಕಟಿಸಲಾಗುವುದು |
ಪ್ರಮುಖ ಲಿಂಕುಗಳು |
ಹೋಮ್ ಪೇಜ್ |
ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********