Job News : 5000 ಹುದ್ದೆಗಳ ಬೃಹತ್ ಉದ್ಯೋಗ ಮೇಳ, ಉದ್ಯೋಗ ಅಕಾಂಕ್ಷಿಗಳಿಗೆ ಗುಡ್ ನ್ಯೂಸ್

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಬಳ್ಳಾರಿಯಲ್ಲಿ ನಡೆಯುತ್ತಿರುವ ಉದ್ಯೋಗ ಮೇಳದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು ಈ ವರ್ಷ ಇದೇ ತಿಂಗಳ 18ನೇ ತಾರೀಕು, ಅಂದರೆ ಮೇ 18ನೇ ತಾರೀಕಿನಂದು ಈ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳ ಎಲ್ಲಿ ನಡೆಯುತ್ತಿದೆ?, ಯಾವ ಸಮಯದಲ್ಲಿ ಇದು ನಡೆಯುತ್ತದೆ?, ಈ ಮೇಳಕ್ಕೆ ಹಾಜರಾಗಲು ಯಾವ ದಾಖಲೆಗಳನ್ನು ಕೊಂದೊಯ್ಯಬೇಕು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.

– ಬಳ್ಳಾರಿಯಲಿ ಉದ್ಯೋಗ ಮೇಳ(Job fair) 2023-

ತಹಶೀಲ್ದಾರ ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಈ ಮಹಾ ಉದ್ಯೋಗ ಮೇಳ ಜರುಗಲಿದೆ. ಇದು ಒಂದು ಜಿಲ್ಲಾಮಟ್ಟದ ಉದ್ಯೋಗ ಮೇಳವಾಗಿದೆ. ಸರ್ವರಿಗೂ ಉದ್ಯೋಗಾವಕಾಶವನ್ನು ಕಲ್ಪಿಸಿ ಕೊಡುವುದು ಇದರ ಮುಖ್ಯ ಉದ್ದೇಶವಾಗಿದೆ. ಮೇ 18ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಗಳವರೆಗೆ ಈ ಉದ್ಯೋಗ ಮೇಳವು ಜರಗಲಿದೆ.

ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ನೀವೇನಾದರೂ ಆಸಕ್ತಿಯನ್ನು ಹೊಂದಿದ್ದರೆ, ನಿಮ್ಮ ಆಧಾರ್ ಕಾರ್ಡ್ ಹಾಗೂ ಸ್ವ-ವಿವರ ಪ್ರತಿ(Resume)ಗಳೊಂದಿಗೆ ಈ ಉದ್ಯೋಗ ಮೇಳಕ್ಕೆ ಹಾಜರಾಗಬೇಕು. ಈ ಉದ್ಯೋಗ ಮೇಳದಲ್ಲಿ ಸುಮಾರು 6 ಕಂಪನಿಗಳು ಉದ್ಯೋಗ ಅವಕಾಶವನ್ನು ನೀಡಲು ಬಂದಿರುತ್ತಾರೆ ಅಷ್ಟೇ ಅಲ್ಲದೆ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಹತೆಗಳು:

ಎಸ್‌ಎಸ್‌ಎಲ್ಸಿ, ಐಟಿಐ, ಪಿಯುಸಿ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿ.ಇಡಿ, ಬಿ.ಇಡಿ ಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಈ ಉದ್ಯೋಗ ಅವಕಾಶವು ದೊರೆಯಲಿದೆ. ಸಂದರ್ಶನಕ್ಕೆ ಪಾಲ್ಗೊಳ್ಳಲು ಯಾವುದೇ ರೀತಿಯ ಶುಲ್ಕವನ್ನು ನೀಡಬೇಕಾಗಿಲ್ಲ.

ಇದರ ಕೋರಿದ ಹೆಚ್ಚಿನ ವಿವರಗಳಿಗಾಗಿ ಈ ಕೆಳಗಿನ ವಿಳಾಸವನ್ನು ಸಂಪರ್ಕಿಸಿ :
ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ
ಬಳ್ಳಾರಿ
ಮೊ.8073365184, 9019692898 ಹಾಗೂ 7892971984

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಹಮ್ಮಿಕೊಂಡಿರುವ ಇಂತಹ ಒಂದು ಉತ್ತಮವಾದ ಉದ್ಯೋಗ ಮೇಳದಲ್ಲಿ ನೀವು ಕೂಡ ಪಾಲ್ಗೊಂಡು ಕೆಲಸವನ್ನು ತಮ್ಮದಾಗಿಸಿಕೊಳ್ಳುವ ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಇಂತಹ ಉತ್ತಮವಾದ ಉದ್ಯೋಗ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

lingarajramapur
Author

lingarajramapur

Leave a Reply

Your email address will not be published. Required fields are marked *