ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ವಿಪ್ರೊ(wipro)2023ರ ನೇಮಕಾತಿ ಅಡಿಯಲ್ಲಿ ಕೆಲಸವನ್ನು ಪಡೆದುಕೊಳ್ಳುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಒಂದು ಭರ್ಜರಿ ನೇಮಕಾತಿ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
– Wipro ನೇಮಕಾತಿ(Recruitment) 2023ರ ಅವಲೋಕನ –
ವಿಪ್ರೊ ಟೆಕ್ನಾಲಜೀಸ್ 198೦ ರಲ್ಲಿ ಸ್ಥಾಪಿತವಾದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ. ಇದು 1945 ರಿಂದ ಅಸ್ತಿತ್ವದಲ್ಲಿರುವ ವಿಪ್ರೊ ಸಂಸ್ಥೆಯ ಮಾಹಿತಿ ತಂತ್ರಜ್ಞಾನ ವಿಭಾಗ. ಇದರ ಮುಖ್ಯ ಕಛೇರಿ ಬೆಂಗಳೂರು ನಗರದಲ್ಲಿದೆ. ಈ ಸಂಸ್ಥೆ ಒಟ್ಟು 79, ೦೦೦ ಕ್ಕೂ ಹೆಚ್ಚು ಕೆಲಸಗಾರರನ್ನು ಹೊಂದಿದೆ. ಇಂತಹ ಒಂದು ಉನ್ನತ ಸಂಸ್ಥೆಯಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸುವ ಅವಕಾಶವಿದೆ. ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು: |
ಇಲಾಖೆ ಹೆಸರು | ವಿಪ್ರೋ ಲಿಮಿಟೆಡ್ |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ವರ್ಷ | 2023 |
ಒಟ್ಟು ಹುದ್ದೆಗಳು | 7625 |
ಅಪ್ಲಿಕೇಶನ್ ವಿಧಾನ | ಆನ್ಲೈನ್ |
ವಿಪ್ರೊ ಹುದ್ದೆಗಳ ಮಾಹಿತಿ 2023 :
ಉದ್ಯೋಗ ಸ್ಥಳಗಳೊಂದಿಗೆ ಪ್ರಸ್ತುತ ಖಾಲಿ ಹುದ್ದೆಗಳು:
ವಿಶ್ಲೇಷಕ(Analyst)
ಸ್ಥಳ – ಹಲವಾರು ಸ್ಥಳಗಳಲ್ಲಿ ಖಾಲಿ ಇವೆ
ತಾಂತ್ರಿಕ ಲೀಡ್(Technical Lead)
ಸ್ಥಳ- ಕಿಯೋನಿಕ್ಸ್ ಎಲೆಕ್ಟ್ರಾನಿಕ್ಸ್ ಸಿಟಿ
ಬೆಂಗಳೂರು, ಕರ್ನಾಟಕ
ಮ್ಯಾನೇಜ್ಮೆಂಟ್ ಟ್ರೈನಿ
ಸ್ಥಳ- ಗುರುಗ್ರಾಮ್, ಹರಿಯಾಣ
ನಿರ್ವಾಹಕ(Administrator)
ಸ್ಥಳ- ಪುಣೆ, ಮಹಾರಾಷ್ಟ್ರ
ಪ್ರೊಸೆಸರ್
ಸ್ಥಳ- ನೋಯ್ಡಾ, ಉತ್ತರ ಪ್ರದೇಶ
ಉತ್ಪಾದನಾ ತಜ್ಞ(Production Specialist)
ಸ್ಥಳ- ಗುರುಗ್ರಾಮ್, ಹರಿಯಾಣ
ಗ್ರಾಹಕ ಸೇವೆ ಪ್ರತಿನಿಧಿ(Customer Service Representative)
ಸ್ಥಳ- ಗುರುಗ್ರಾಮ್, ಹರಿಯಾಣ
ಅಸೋಸಿಯೇಟ್-ಆರ್ಡರ್ ಮ್ಯಾನೇಜ್ಮೆಂಟ್
ಸ್ಥಳ- ಚೆನ್ನೈ, ತಮಿಳುನಾಡು
ಹಿರಿಯ ಕಾರ್ಯನಿರ್ವಾಹಕ
ಸ್ಥಳ- ಚೆನ್ನೈ, ತಮಿಳುನಾಡು
ಗುಣಮಟ್ಟದ ಭರವಸೆ(Quality Assurance)
ಸ್ಥಳ- ಹೈದರಾಬಾದ್, ತೆಲಂಗಾಣ
ಒಟ್ಟು 7625 ಖಾಲಿ ಹುದ್ದೆಗಳು
ವಿಪ್ರೊ ಹುದ್ದೆಗೆ ಬೇಕಾದ ಅರ್ಹತೆಗಳು :
- ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ/ ಡಿಪ್ಲೋಮಾ/ BE/B.Tech /ಸ್ನಾತಕೋತ್ತರ ಪದವಿ ಗಳಿಸಿರಬೇಕು.
- ವಯೋಮಿತಿ(Age limit): ಕನಿಷ್ಠ ವಯಸ್ಸಿನ ಮಿತಿ 18 ವರ್ಷಗಳು.
ವಿವಿಧ ಹುದ್ದೆಗಳಿಗೆ ಗರಿಷ್ಠ ವಯೋಮಿತಿ ವಿಭಿನ್ನವಾಗಿರುತ್ತದೆ.
ಸಂಬಳದ ವಿವರ :
ವಿಪ್ರೋ ಕಂಪನಿ ಉದ್ಯೋಗಿಗಳಿಗೆ ಉತ್ತಮ ಸಂಬಳ ದೊರೆಯಲಿದೆ. ವಿವಿಧ ಹುದ್ದೆಗಳು ಮತ್ತು ವಿದ್ಯಾರ್ಹತೆಗಳಿಗೆ ವೇತನವು ವಿಭಿನ್ನವಾಗಿರುತ್ತದೆ (ಅಂದಾಜು 15,000/- ರಿಂದ 60,000/- pm).
ಹೆಚ್ಚಿನ ಪೋಸ್ಟ್ ವೈಸ್ ಸಂಬಳದ ವಿವರಗಳಿಗಾಗಿ ಅಧಿಕೃತ ವೃತ್ತಿ ವೆಬ್‌ಸೈಟ್ ಅನ್ನು ಸಹ ಪರಿಶೀಲಿಸಿ.
ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?:
ಅಭ್ಯರ್ಥಿಗಳ ಅಪ್ಲಿಕೇಶನ್ಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುವುದು ನಂತರ ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ. ಕೊನೆಯದಾಗಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಾರೆ ಮತ್ತು ವೈದ್ಯಕೀಯ ಪರೀಕ್ಷೆ ಇರುತ್ತದೆ .
ಅರ್ಜಿ ಶುಲ್ಕ ಎಷ್ಟಿರುತ್ತದೆ?:
ಆನ್ಲೈನ್ ಮುಖಾಂತರ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ, ಇದು ಸಂಪೂರ್ಣ ಉಚಿತವಾಗಿದೆ.
ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲಿಗೆ ಅಧಿಕೃತ ಸೂಚನೆಯನ್ನು ಪೂರ್ಣವಾಗಿ ಓದಿಕೊಳ್ಳಬೇಕು.
ಹಂತ 2: ನಂತರ ವಿಪ್ರೋ ಕಂಪನಿಯ ಅಧಿಕೃತ ಜಾಲತಾಣಕ್ಕೆ ತೆರಳಿ. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 3: ನಂತರ ರಿಜಿಸ್ಟರ್ ಅನ್ನು ಮಾಡಿಕೊಳ್ಳಿ. ಅಪ್ಲೈ ಎಂಬ ಲಿಂಕಿನ ಮೇಲೆ ಕ್ಲಿಕ್ ಮಾಡಿ
ಹಂತ 4: ಕೇಳಲಾದ ಮಾಹಿತಿಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಿ. ನಂತರ ದಾಖಲೆಗಳನ್ನು ಅಪ್ಲೋಡ್ ಮಾಡಿ
ಹಂತ 5: ಕೊನೆಯದಾಗಿ ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 17 – 05 – 2023 |
ಪ್ರಮುಖ ಲಿಂಕುಗಳು |
ಹೋಮ್ ಪೇಜ್ |
ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ