ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ರೈತ ವಿದ್ಯಾ ನಿಧಿ ವಿದ್ಯಾರ್ಥಿ ವೇತನದ ಬಗ್ಗೆ ತಿಳಿಸಿಕೊಡಲಾಗುತ್ತದೆ. ಕಳೆದ ವರ್ಷ ರೈತ ವಿದ್ಯಾ ನಿಧಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳ ಪೈಕಿ ಕೆಲವು ವಿದ್ಯಾರ್ಥಿಗಳಿಗೆ ಈಗಾಗಲೇ ಸ್ಕಾಲರ್ಶಿಪ್ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಬಂದು ತಲುಪಿದೆ. ಹಾಗಾಗಿ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನದ ಸ್ಟೇಟಸ್ ಯಾವ ರೀತಿ ಚೆಕ್ ಮಾಡುವುದು ಎನ್ನುವುದರ ಬಗ್ಗೆ ತಿಳಿದುಕೊಳ್ಳೋಣ.
ರೈತ ವಿದ್ಯಾನಿಧಿ ವಿದ್ಯಾರ್ಥಿವೇತನ 2022-23
ಆರ್ಥಿಕವಾಗಿ ಹಿಂದುಳಿದಂತಹ ರೈತರಿಗೆ ಹಾಗೂ ರೈತರ ಮಕ್ಕಳಿಗೆ ಉನ್ನತ ಶಿಕ್ಷಣಗಳನ್ನು ಪೂರೈಸುವಲ್ಲಿ ಅಡೆತಡೆಯಾಗದಂತೆ, ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಲು ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಎಲ್ಲಾ ಫಲಾನುಭವಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನದ ಮೂಲಕ, ವಿದ್ಯಾರ್ಥಿಗಳು 2,500 ರೂಗಳಿಂದ, ರೂ.11,000 ವರೆಗೂ ವಿದ್ಯಾರ್ಥಿ ವೇತನವನ್ನು ಪಡೆದು ತಮ್ಮ ಓದಿನ ಆಸೆಯನ್ನು ಪೂರ್ಣಗೊಳಿಸಿಕೊಳ್ಳಬಹುದಾಗಿದೆ. ಇಂತಹ ವಿದ್ಯಾರ್ಥಿ ವೇತನಗಳನ್ನು ರಾಜ್ಯ ಸರ್ಕಾರದವರು ನೀಡುವುದರಿಂದ ರೈತರಿಗೆ ತಮ್ಮ ಮಕ್ಕಳನ್ನು ಓದಿಸಲು ಯಾವುದೇ ರೀತಿಯ ತೊಂದರೆಯೂ ಆಗುವುದಿಲ್ಲ. ಒಟ್ಟಾರೆ ರೈತರ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ಪೂರೈಸುವಲ್ಲಿ ಯಾವುದೇ ಅಡೆತಡೆಯಾಗದಂತೆ ನೆರವು ನೀಡುವುದು ಈ ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವಾಗಿದೆ.
ಕಳೆದ ವರ್ಷ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ ಬಂದಿರುವುದನ್ನ ಕೆಳಗಡೆ ಗಮನಿಸಬಹುದು.
ಉದ್ಯೋಗ ಸಿರಿ ವಾಟ್ಸಪ್ ಗ್ರೂಪಿಗೆ ಸೇರಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
ವಿದ್ಯಾನಿಧಿ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳ ಪಟ್ಟಿ 2022-23 ವೀಕ್ಷಿಸುವುದ ಹೇಗೆ ?
ಎಸ್‌ಎಸ್‌ಪಿ ಅಧಿಕೃತ ವೆಬ್‌ಸೈಟ್ ನಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಹತೆ ಪಡೆದ ವಿದ್ಯಾರ್ಥಿಗಳ ಸಂಪೂರ್ಣ ಪಟ್ಟಿಯನ್ನು ನೀಡಲಾಗಿರುತ್ತದೆ
ಹಂತ1: ಎಸ್‌ಎಸ್‌ಪಿ ಕರ್ನಾಟಕ ವಿದ್ಯಾರ್ಥಿವೇತನದ ಅಧಿಕೃತ ವೆಬ್‌ಸೈಟ್‌ಗೆ https://ssp.postmatric.karnataka.gov.in/ ಭೇಟಿ ನೀಡಿ.
ಹಂತ 2: ಮುಖಪುಟದಲ್ಲಿ, ಮೆನು ಬಾರ್ ಮೇಲೆ ಕ್ಲಿಕ್ ಮಾಡಿ ಮತ್ತು ವಿದ್ಯಾರ್ಥಿಗಳ ಲಾಗಿನ್ ಮೇಲೆ ಕ್ಲಿಕ್ ಮಾಡಿ. ಈಗ ನಿಮ್ಮ ಲಾಗಿನ್ ಬಳಕೆದಾರ ಐಡಿ ಮತ್ತು ಪಾಸ್‌ವರ್ಡ್ ಅನ್ನು ನಮೂದಿಸಿ ಮತ್ತು ಲಾಗಿನ್ ಮೇಲೆ ಕ್ಲಿಕ್ ಮಾಡಿ
ಹಂತ 3: ನೀವು ವಿದ್ಯಾರ್ಥಿ ಸ್ಥಿತಿ ವರದಿ (Year wise Student Status)ಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ Student Id ಮತ್ತು Academic Year ಅನ್ನು ನಮೂದಿಸಿ ಮತ್ತು View ಬಟನ್ ಕ್ಲಿಕ್ ಮಾಡಿ. ( ಕೆಳಗಿನ ಚಿತ್ರದಲ್ಲಿ ತೋರಿಸಿರುವಂತೆ
ಹಂತ 4: ನಂತರ ಸಂರ್ಪೂರ್ಣ ವಿವರ ನಿಮ್ಮ ಪರದೆಯ ಮೇಲೆ ಮೂಡಲಿದೆ.ಹೀಗೆ, ( ಕೆಳಗಿನ ಚಿತ್ರದಲ್ಲಿ ತೋರಿಸಿರುವಂತೆ )
ಹಂತ 5: ಕೊನೆಯದಾಗಿ, ಅದನ್ನು ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾದ ಅರ್ಹತೆಗಳು :
- ವಿದ್ಯಾರ್ಥಿಯು ಖಾಯಂ ಕರ್ನಾಟಕದ ನಿವಾಸಿಯಾಗಿರಬೇಕು.
- ವಿದ್ಯಾರ್ಥಿಗಳು ಪಿಯುಸಿ, ಐಟಿಐ, ಬಿಎ, ಬಿ ಎಸ್ ಸಿ, ಬಿಕಾಂ, ಎಂಬಿಬಿಎಸ್, ಕಾನೂನು, ಅರೆ ವೈದ್ಯಕೀಯ, ನರ್ಸಿಂಗ್, ಇತರೆ ವೃತ್ತಿಪರ ಪದವಿಗಳು ಅಥವಾ ಸ್ನಾತಕೋತ್ತರ ಪದವಿಯನ್ನು ಓದುತ್ತಿರಬೇಕು.
- ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಕರ್ನಾಟಕ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದ ವತಿಯಿಂದ ಮಾನ್ಯತೆ ಪಡೆದ ಶಾಲೆಯಿಂದ 10ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು.
- ಕೃಷಿ ಹಾಗೂ ಮೀನುಗಾರಿಕೆ ಮಾಡಿಕೊಂಡ ಪೋಷಕರ ಮಕ್ಕಳಿಗೆ ಮಾತ್ರ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿ ವೇತನದ ಮೊತ್ತ :
- ಪಿಯುಸಿ ಅಥವಾ ಐಟಿಐ ವಿದ್ಯಾರ್ಥಿ ಗಳಿಗೆ: ವಿದ್ಯಾರ್ಥಿಗಳಿಗೆ ವರ್ಷಕ್ಕೆ 2500ರೂ ಹಾಗೂ ವಿದ್ಯಾರ್ಥಿನಿಯರಿಗೆ ರೂ.3,000ಗಳನ್ನು ನೀಡಲಾಗುತ್ತದೆ .
- ಬಿ ಎ, ಬಿ ಎಸ್ ಸಿ, ಬಿಕಾಂ, ಬಿಇ, ಎಂಬಿಬಿಎಸ್ ಹಾಗೂ ಇತರೆ ವೃತ್ತಿಪರ ಕೋರ್ಸ್ ಗಳಿಗೆ : ವಿದ್ಯಾರ್ಥಿಗಳಿಗೆ 5000 ರೂಗಳು ಹಾಗೂ ವಿದ್ಯಾರ್ಥಿನಿಯರಿಗೆ 5500 ರೂಗಳನ್ನು ನೀಡಲಾಗುತ್ತದೆ.
- ಕಾನೂನು, ಅರೆವೈದ್ಯಕೀಯ, ನರ್ಸಿಂಗ್ ಹಾಗೂ ಇತರೆ ವೃತ್ತಿಪರ ಕೋರ್ಸ್ ಗಳಿಗೆ : ವಿದ್ಯಾರ್ಥಿಗಳಿಗೆ 7,500 ರೂಗಳು ಹಾಗೂ ವಿದ್ಯಾರ್ಥಿನಿಯರಿಗೆ 8000 ರೂಗಳನ್ನು ನೀಡಲಾಗುತ್ತದೆ.
- ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ : ವಿದ್ಯಾರ್ಥಿಗಳಿಗೆ ರೂ.10,000 ಹಾಗೂ ವಿದ್ಯಾರ್ಥಿನಿಯರಿಗೆ ರೂ.11,000 ನೀಡಲಾಗುತ್ತದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾದ ದಾಖಲೆಗಳು :
- ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ
- ವಿದ್ಯಾರ್ಥಿಗಳ SATS ಸಂಖ್ಯೆ / ಕಾಲೇಜು ನೋಂದಣಿ ಸಂಖ್ಯೆ
- ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಸಂಖ್ಯೆ
- ವಿದ್ಯಾರ್ಥಿಯ ಅಥವಾ ಹೆತ್ತವರ FRUITS ಗುರುತಿನ ಸಂಖ್ಯೆ
- ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ಲಿನ ದಾಖಲಾತಿ ಸಂಖ್ಯೆ ( ಅಲ್ಪಸಂಖ್ಯಾತಿಯ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ ) ಸೂಚನೆ: ಅಲ್ಪಸಂಖ್ಯಾತ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಮೊದಲು ರಾಷ್ಟ್ರೀಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
- ವಿದ್ಯಾರ್ಥಿಯ ಹೆಸರಿನಲ್ಲಿರುವ ಆರ್ ಡಿ ಇಂದ ಶುರುವಾಗುವ ಜಾತಿ ಅಥವಾ ಆದಾಯ ಅಥವಾ ಆರ್ಥಿಕವಾಗಿ ದುರ್ಬಲ ವಿಭಾಗದ ( ಬ್ರಾಹ್ಮಣ ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ ) ಪ್ರಮಾಣ ಪತ್ರಗಳ ಸಂಖ್ಯೆ.
- ಇ ದೃಡಿಕರಿಸಿದ ದಾಖಲೆಗಳ ಸಂಖ್ಯೆಗಳು
- ಅಂಕಪಟ್ಟಿ
- ಶುಲ್ಕ ರಶೀದಿ
- ಅಂಗವಿಕಲ ವಿದ್ಯಾರ್ಥಿಯಾಗಿದ್ದಲ್ಲಿ ಭಾರತ ಸರ್ಕಾರದಿಂದ ನೀಡಿರುವ ಅಂಗೈಯಲ್ಲಿ ಅಂಗವಿಕಲ ಕಾರ್ಡ್ ಸಂಖ್ಯೆ
ಕರ್ನಾಟಕ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ರಶೀದಿಯನ್ನು ಇ-ದೃಢೀಕರಣವನ್ನು ಮಾಡಿಸುವ ಅಗತ್ಯವಿರುವುದಿಲ್ಲ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನದ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿಯನ್ನು ಸಲ್ಲಿಸುವ ವಿಧಾನ :
ಈ ಮೊದಲು ಕೃಷಿ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡಲಾಗಿತ್ತು. ನಂತರ ಈ ರೈತ ವಿದ್ಯಾನಿಕೇತನ ವರ್ಷಕ್ಕೆ ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ ಅಂದರೆ SSP ಪೋರ್ಟಲ್ಲಿ ನಾವು ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದು. ನೀವು ಈಗಾಗಲೇ SSP ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಿದ್ದರೆ ಇದು ರೈತ ವಿದ್ಯಾನಿಧಿ ಮತ್ತು ಕಾರ್ಮಿಕ ಸ್ಕಾಲರ್ಶಿಪ್ ಅನ್ನೋ ಒಳಗೊಂಡಿರುತ್ತದೆ.
ಕರ್ನಾಟಕ SSPವಿದ್ಯಾರ್ಥಿವೇತನ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ಇರಲಿದ್ದು. ಈ ಕೆಳಗಿನ ಹಂತಗಳನ್ನು ಅನುಸರಿಸಿ
ಹಂತ 1: ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ಕೆಳಗಡೆ ಆನ್ಲೈನ್ ಸೇವೆಗಳು ಎಂಬ ಆಪ್ಷನ್ ಅಲ್ಲಿ ಮುಖ್ಯಮಂತ್ರಿ ರೈತ ವಿಜ್ಞಾನಿಧಿ ಕಾರ್ಯಕ್ರಮದಲ್ಲಿ ಮಾಡಲು ಎನ್ನುವ ಆಪ್ಷನ್ ಸೆಲೆಕ್ಟ್ ಮಾಡಿಕೊಳ್ಳಿ
ಹಂತ 3: ನಂತರ ರಾಜ್ಯ ವಿದ್ಯಾರ್ಥಿ ತಂತ್ರಾಂಶ ಅಂದ್ರೆ SSP ಪೋರ್ಟಲ್ ಗೆ ಮರು ನಿರ್ದೇಶಸಲಾಗುತ್ತದೆ. ಅಥವಾ ನೇರವಾಗಿ ಅಧಿಕೃತ ವೆಬ್ಸೈಟ್ ssp.karnataka.gov.in ಗೆ ಭೇಟಿ ನೀಡಿ.
ಹಂತ 4: ಹೋಂ ಪೇಜ್ ನಲ್ಲಿ ಲಭ್ಯವಿರುವ ಖಾತೆಯನ್ನು ರಚಿಸುವ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಹಂತ 5:ನಿಮ್ಮ ಆಧಾರ್ ಸಂಖ್ಯೆ ಮತ್ತು ನಿಮ್ಮ ಹೆಸರು ಆಧಾರ್ ನಲ್ಲಿರುವಂತೆ ಇಲ್ಲಿ ನಮೂದಿಸಿ, ಲಿಂಗವನ್ನು ಆಯ್ಕೆ ಮಾಡಿ, ಕ್ಯಾಪ್ಚಾ ಕೊಡನ್ನು ನಮೂದಿಸಿ ಅರ್ಜಿಯನ್ನು ಮುಂದುವರಿಸಿ
ಹಂತ 6: ನಿಮ್ಮ ಪಾಲಕ ಅಥವಾ ಪೋಷಕರ ಆಧಾರ್ ಸಂಖ್ಯೆಯನ್ನು ನಮೂದಿಸಿ ಮೊಬೈಲ್ ನಂಬರನ್ನು ಭರ್ತಿ ಮಾಡಿ ಮತ್ತು ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ನಂತರ ನೀವು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒಟಿಪಿ ಪಡೆಯುತ್ತೀರಿ.
ಹಂತ 7: ನಂತರ ಅರ್ಜಿದಾರರು ಬಳಕೆದಾರ ID ಮತ್ತು ಪಾಸ್‌ವರ್ಡ್ ಅನ್ನು ಪಡೆಯುತ್ತೀರಿ. ಅದನ್ನು ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.
ಕರ್ನಾಟಕ ಎಸ್‌ಎಸ್‌ಪಿ ವೆಬ್‌ಸೈಟ್‌ಗೆ ಲಾಗಿನ್ ಮಾಡುವುದು ಹೇಗೆ?
ಅರ್ಜಿದಾರರು ನೀವು ಪಡೆದುಕೊಂಡಿರುವ ಬಳಕೆದಾರ ID ಮತ್ತು ಪಾಸ್‌ವರ್ಡ್‌ನೊಂದಿಗೆ ಅಧಿಕೃತ ವೆಬ್‌ಸೈಟ್‌ಗೆ ಲಾಗ್ ಇನ್ ಮಾಡಬಹುದು.
ನಂತರ ವಿದ್ಯಾರ್ಥಿ ಖಾತೆಯ ಮುಖಪುಟಕ್ಕೆ ಪ್ರವೇಶ ಪಡೆಯುತ್ತೀರಿ. ಆ ಮುಖಪುಟದಲ್ಲಿ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ವಿವರಗಳಾದ ಆಧಾರ್ ಸಂಖ್ಯೆ, ಆದಾಯ ಮತ್ತು ಜಾತಿ ಪ್ರಮಾಣಪತ್ರ ಮತ್ತು NSP ID, FRUIT ID, KUTUMB ID ಯನ್ನು ಭರ್ತಿ ಮಾಡಬೇಕಾಗುತ್ತದೆ. ಎಲ್ಲಾ ಅಗತ್ಯ ವಿವರಗಳನ್ನು ಪರಿಶೀಲಿಸಿದ ನಂತರ ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.
ಸಲ್ಲಿಸಿದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು ಮತ್ತು ನಂತರ ಅದನ್ನು ಸ್ವೀಕೃತಿ ಚೀಟಿಯೊಂದಿಗೆ ಶಾಲೆಗೆ ಅಥವಾ ಕಾಲೇಜಿಗೆ ಸಲ್ಲಿಸಬೇಕು.
ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳ ಪಟ್ಟಿ 2022-23 ವೀಕ್ಷಿಸುವುದ ಹೇಗೆ ?
ಎಸ್‌ಎಸ್‌ಪಿ ಅಧಿಕೃತ ವೆಬ್‌ಸೈಟ್ ನಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಹತೆ ಪಡೆದ ವಿದ್ಯಾರ್ಥಿಗಳ ಸಂಪೂರ್ಣ ಪಟ್ಟಿಯನ್ನು ನೀಡಲಾಗಿರುತ್ತದೆ
ಹಂತ 1: ಎಸ್‌ಎಸ್‌ಪಿ ಕರ್ನಾಟಕ ವಿದ್ಯಾರ್ಥಿವೇತನದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ಹಂತ 2: ಲಾಗಿನ್ ಆಗಿ.
ನಂತರ ಸಂರ್ಪೂರ್ಣ ವಿವರ ನಿಮ್ಮ ಪರದೆಯ ಮೇಲೆ ಮೂಡಲಿದೆ.
ಕರ್ನಾಟಕ ರಾಜ್ಯ ಸರ್ಕಾರದ ಈ ಯೋಜನೆಯ ಮೂಲಕ ಆರ್ಥಿಕವಾಗಿ ದುರ್ಬಲವಾಗಿರುವ ರೈತರ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಪ್ರೋತ್ಸಾಹಿಸಲಾಗುವುದು. ಸ್ಕಾಲರ್‌ಶಿಪ್ ಮೊತ್ತವನ್ನು ರಾಜ್ಯ ಸರ್ಕಾರವು ಫಲಾನುಭವಿ ವಿದ್ಯಾರ್ಥಿಗಳಿಗೆ ಅವರ ಬ್ಯಾಂಕ್ ಖಾತೆಗಳಿಗೆ ನೇರ ಲಾಭ ವರ್ಗಾವಣೆ ವಿಧಾನದ ಮೂಲಕ ನೇರವಾಗಿ ವರ್ಗಾಯಿಸುತ್ತದೆ. ರಾಜ್ಯ ಸರ್ಕಾರದ ಈ ಯೋಜನೆಯ ಪೋರ್ಟಲ್‌ನಲ್ಲಿ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಈ ಯೋಜನೆಯಿಂದ ಎಲ್ಲಾ ರೈತ ಮಕ್ಕಳು ಅನುಕೂಲವನ್ನು ಪಡೆದುಕೊಳ್ಳಬೇಕೆಂಬುದು ನಮ್ಮ ಆಶಯವಾಗಿದೆ. ಇಂತಹ ಮುಖ್ಯ ಮಾಹಿತಿಯನ್ನು ಒಳಗೊಂಡಿರುವಂತಹ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ರೈತ ಮಿತ್ರರಿಗೆ, ಸ್ನೇಹಿತರಿಗೆ ಹಾಗೂ ಪೋಷಕರಿಗೆ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ