ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ PNB (ಪಂಜಾಬ್ ನ್ಯಾಷನಲ್ ಬ್ಯಾಂಕ್) – 2023 ರ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.
ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
– PNB ನೇಮಕಾತಿ(Recruitment) 2023ರ ಅವಲೋಕನ –
ಪಂಜಾಬ್ ನ್ಯಾಷನಲ್ ಬ್ಯಾಂಕ್ ಸರ್ಕಾರಿ-ಆಧಾರಿತ ಬ್ಯಾಂಕ್ ಆಗಿದ್ದು, ದೇಶಾದ್ಯಂತ ಹಲವಾರು ಶಾಖೆಗಳನ್ನು ಹೊಂದಿದೆ. PNB ಅಧಿಕೃತ ವೆಬ್‌ಸೈಟ್ pnbindia.in ನಲ್ಲಿ PNB SO ನೇಮಕಾತಿ 2023 ಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. PNB SO ನೇಮಕಾತಿ 2023 ಮೂಲಕ ಒಟ್ಟು 240 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು ಪ್ರಕಟಿಸಲಾಗಿದೆ. ಅಧಿಕೃತ ವೆಬ್‌ಸೈಟ್‌ನಲ್ಲಿ PNB SO 2023 ಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಮತ್ತು ಅರ್ಜಿ ಸಲ್ಲಿಸುವ ಆನ್‌ಲೈನ್ ಪ್ರಕ್ರಿಯೆಯು 11th ಜೂನ್ 2023 ರವರೆಗೆ ಇರುತ್ತದೆ. ಲೇಖನದಲ್ಲಿ ಉಲ್ಲೇಖಿಸಲಾದ ನೇರ ಲಿಂಕ್ ಮೂಲಕ ತಮ್ಮ ಅರ್ಜಿ ನಮೂನೆಯನ್ನು ಸಲ್ಲಿಸಿ. ಸಂಪೂರ್ಣ ವಿವರಗಳಿಗಾಗಿ ಲೇಖನವನ್ನು ಕೊನೆವರೆಗೂ ಓದಿ.
ಹುದ್ದೆಗಳ ಮಾಹಿತಿ ಕೆಳಗಿನಂತಿದೆ:
ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು: |
ಇಲಾಖೆ ಹೆಸರು | ಪಂಜಾಬ್ ನ್ಯಾಷನಲ್ ಬ್ಯಾಂಕ್ |
ಹುದ್ದೆಗಳ ಹೆಸರು | ಅಧಿಕಾರಿ, ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ |
ವರ್ಷ | 2023 |
ಒಟ್ಟು ಹುದ್ದೆಗಳು | 240 ಪೋಸ್ಟ್ ಗಳು |
ಅಪ್ಲಿಕೇಶನ್ ವಿಧಾನ | ಆನ್ಲೈನ್ |
PNB ನೇಮಕಾತಿ 2023 ಖಾಲಿ ಹುದ್ದೆಗಳ ವಿವರ :
ಒಟ್ಟು 240 ಖಾಲಿ ಹುದ್ದೆಗಳಿವೆ
- ಅಧಿಕಾರಿ(officer)-ಕ್ರೆಡಿಟ್ : 200
- ಅಧಿಕಾರಿ-ಉದ್ಯಮ : 8
- ಅಧಿಕಾರಿ-ಸಿವಿಲ್ ಇಂಜಿನಿಯರ್ : 5
- ಅಧಿಕಾರಿ-ವಿದ್ಯುತ್ ಇಂಜಿನಿಯರ್ : 4
- ಅಧಿಕಾರಿ-ವಾಸ್ತುಶಿಲ್ಪಿ : 1
- ಅಧಿಕಾರಿ-ಅರ್ಥಶಾಸ್ತ್ರ : 6
- ಮ್ಯಾನೇಜರ್-ಅರ್ಥಶಾಸ್ತ್ರ : 4
- ಮ್ಯಾನೇಜರ್(Manager)-ಡೇಟಾ ಸೈಂಟಿಸ್ಟ್ : 3
- ಸೀನಿಯರ್ ಮ್ಯಾನೇಜರ್-ಡೇಟಾ ಸೈಂಟಿಸ್ಟ್ : 2
- ಮ್ಯಾನೇಜರ್-ಸೈಬರ್ ಸೆಕ್ಯುರಿಟಿ : 4
- ಸೀನಿಯರ್ ಮ್ಯಾನೇಜರ್-ಸೈಬರ್ ಸೆಕ್ಯುರಿಟಿ : 3
PNB ನೇಮಕಾತಿ – 2023 ಬೇಕಾಗಿರುವ ಶೈಕ್ಷಣಿಕ ಅರ್ಹತೆ :
ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಆಸಕ್ತಿಯುಳ್ಳ ಆಕಾಂಕ್ಷಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ/ ಎಂಬಿಎ/ ಪಿಜಿಡಿಎಮ್ / ಬಿ.ಟೆಕ್ / ಬಿಇ / ಎಂಇ / ಎಂ.ಟೆಕ್/ ಸ್ನಾತಕೋತ್ತರ ಪದವಿಯಲ್ಲಿ( ಕನಿಷ್ಠ %60 ಅಂಕಗಳೊಂದಿಗೆ ) ಉತ್ತೀರ್ಣರಾಗಿರಬೇಕು .
ವಯೋಮಿತಿ :
ಅರ್ಜಿದಾರರ ವಯಸ್ಸಿನ ಮಿತಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಟ 38 ಮೀರಿರಬಾರದ.
SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ ಶ್ರೇಣಿ:
PNB SO ಅಧಿಕಾರಿ 2023 ರ ವೇತನ: ರೂ. 36000-1490/7-46430-1740/2-49910-1990/7-63840
PNB SO ಮ್ಯಾನೇಜರ್ 2023 ರ ಸಂಬಳ: ರೂ.48170-1740/1-49910-1990/10-69810
PNB SO ಸೀನಿಯರ್ ಮ್ಯಾನೇಜರ್ 2023 ರ ಸಂಬಳ: ರೂ.63840-1990/5-73790-2220/2- 78230 ಪ್ರತಿ ತಿಂಗಳು ದೊರೆಯುತ್ತದೆ.
PNB ನೇಮಕಾತಿಗೆ ಅರ್ಜಿ ಶುಲ್ಕ :
SC/ST/PwBD ಅಭ್ಯರ್ಥಿಗಳಿಗೆ : ರೂ.59/-
ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.1180/-
PNB ಆಯ್ಕೆ ಪ್ರಕ್ರಿಯೆ :
ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಆಕಾಂಕ್ಷೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ( Interview) ಬಿಡಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಅನ್ವಯಿಸಿದ್ದಲ್ಲಿ ಪಾವತಿಸಿ
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 24-05-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 11-06-2023 |
ಪ್ರಮುಖ ಲಿಂಕುಗಳು |
ಹೋಮ್ ಪೇಜ್ |
ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ