ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ KMF TUMUL (ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ.,) – 2023 ರ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
– KMF ತುಮುಲ್ ನೇಮಕಾತಿ 2023(KMF TUMUL Recruitment) ರ ಅವಲೋಕನ –
ತುಮಕೂರು: ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಮಲ್ಲಸಂದ್ರ ಇದರಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿನ 219 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಸಿಒ 130 ಸಿಸಿಬಿ 2022 04,11,2022 ರನ್ವಯ ಆನುಮೋದಿಸಿದಂತೆ ನೇರ ನೇಮಕಾತಿಗೆ ಪ್ರಕಟಣೆ ಹೊರಡಿಸಿರುವ ಹುದ್ದೆಗಳ ವಿವರ, ಮೀಸಲಾತಿ ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ ಇತ್ಯಾದಿ ವಿವರಗಳು ಈ ಕೆಳಕಂಡಂತೆ ಇರುತ್ತವೆ.
TUMUL ಹುದ್ದೆಗೆ ಈಗಾಗಲೇ ಅಧಿಸೂಚನೆಯನ್ನು ಹೊರಡಿಸಲಾಗಿತ್ತು ಆದರೆ ಅದನ್ನು ರದ್ದುಪಡಿಸಿ, ತಿದ್ದುಪಡಿ ಮಾಡಿ ಪ್ರಸ್ತುತ ಪ್ರಕಟಣೆಯನ್ನು ಹೊರಡಿಸಲಾಗಿದೆ. ಪ್ರಸ್ತುತ ಪ್ರಕಟಣೆಯ ಅನುಗುಣವಾಗಿ ಹುದ್ದೆಯ ಸಂಪೂರ್ಣ ವಿವರ ಕೆಳಗಿನಂತಿದೆ :
ಹುದ್ದೆಗಳ ಮಾಹಿತಿ ಕೆಳಗಿನಂತಿದೆ:
ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು: |
ಇಲಾಖೆ ಹೆಸರು | KMF TUMUL (ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ.,) |
ಹುದ್ದೆಗಳ ಹೆಸರು | ಸಹಾಯಕ ಮ್ಯಾನೇಜರ್, ಜೂನಿಯರ್ ಟೆಕ್ನಿಷಿಯನ್ |
ವರ್ಷ | 2023 |
ಒಟ್ಟು ಹುದ್ದೆಗಳು | 219 ಪೋಸ್ಟ್ ಗಳು |
ಅಪ್ಲಿಕೇಶನ್ ವಿಧಾನ | ಆನ್ಲೈನ್ |
TUMUL ನೇಮಕಾತಿ 2023 ಖಾಲಿ ಹುದ್ದೆಗಳ ವಿವರ :
ಒಟ್ಟು 219 ಖಾಲಿ ಹುದ್ದೆಗಳಿವೆ
ಸಹಾಯಕ ವ್ಯವಸ್ಥಾಪಕ : 28
ವೈದ್ಯಕೀಯ ಅಧಿಕಾರಿ : 1
ಆಡಳಿತ ಅಧಿಕಾರಿ : 1
ಖರೀದಿ/ಸ್ಟೋರ್ಕೀಪರ್ : 3
MIS/ಸಿಸ್ಟಮ್ ಅಧಿಕಾರಿ : 1
ಲೆಕ್ಕಪತ್ರ ಅಧಿಕಾರಿ : 2
ಮಾರ್ಕೆಟಿಂಗ್ ಅಧಿಕಾರಿ : 3
ತಾಂತ್ರಿಕ ಅಧಿಕಾರಿ : 14
ತಂತ್ರಜ್ಞ : 1
ವಿಸ್ತರಣಾಧಿಕಾರಿ : 22
MIS ಸಹಾಯಕ ಗ್ರೇಡ್-I : 2
ಆಡಳಿತ ಸಹಾಯಕ ಗ್ರೇಡ್-2 : 13
ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್-2 : 12
ಮಾರ್ಕೆಟಿಂಗ್ ಸಹಾಯಕ ಗ್ರೇಡ್-2 : 18
ಖರೀದಿ ಸಹಾಯಕ ಗ್ರೇಡ್-2 : 6
ರಸಾಯನಶಾಸ್ತ್ರಜ್ಞ ಗ್ರೇಡ್-2 : 4
ಜೂನಿಯರ್ ಸಿಸ್ಟಮ್ ಆಪರೇಟರ್ : 10
ಕೋ-ಆರ್ಡಿನೇಟರ್ (ರಕ್ಷಣೆ) : 2
ದೂರವಾಣಿ ನಿರ್ವಾಹಕ : 2
ಜೂನಿಯರ್ ತಂತ್ರಜ್ಞ : 64
ಚಾಲಕರು : 8
ಲ್ಯಾಬ್ ಸಹಾಯಕ : 2
TUMUL ನೇಮಕಾತಿ – 2023 ಬೇಕಾಗಿರುವ ಶೈಕ್ಷಣಿಕ ಅರ್ಹತೆ :
ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಆಸಕ್ತಿಯುಳ್ಳ ಆಕಾಂಕ್ಷಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ / ಯಾವುದೇ ಪದವಿ / M.Com/ MBA/MSc/ BE/BTech ಪೂರ್ಣಗೊಳಿಸಿರಬೇಕು. ಯಾವ ಹುದ್ದೆಗೆ ಯಾವ ನಿರ್ದಿಷ್ಟ ವಿದ್ಯಾಭ್ಯಾಸವನ್ನು ಹೊಂದಿರಬೇಕು ಎಂಬುವುದರ ಸಂಪೂರ್ಣ ವಿವರವನ್ನು ಕೆಳಗಿನ ಅಧಿಸೂಚನೆಯ ಲಿಂಕ್ ನಲ್ಲಿ ನೀಡಲಾಗಿದೆ ಅದನ್ನು ಪರಿಶೀಲಿಸಬಹುದು.
ವಯೋಮಿತಿ :
ಅರ್ಜಿದಾರರ ವಯಸ್ಸಿನ ಮಿತಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಟ 35 ಮೀರಿರಬಾರದು.
ವಯೋಮಿತಿ ಸಡಿಲಿಕೆ :
SC/ST ಅಭ್ಯರ್ಥಿಗಳು: 05 ವರ್ಷಗಳು
Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 21,400/- ರಿಂದ 52,650/- ಗಳನ್ನು ನೀಡಲಾಗುತ್ತದೆ.
TUMUL ನೇಮಕಾತಿಗೆ ಅರ್ಜಿ ಶುಲ್ಕ :
SC/ST/ ಪ್ರವರ್ಗ 1 ಅಭ್ಯರ್ಥಿಗಳಿಗೆ : ರೂ.500/-
ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.1000/-
ಬ್ಯಾಂಕ್ ಶುಲ್ಕ ಪ್ರತ್ಯೇಕವಾಗಿ ಇರುತ್ತದೆ.
TUMUL ಆಯ್ಕೆ ಪ್ರಕ್ರಿಯೆ :
ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಆಕಾಂಕ್ಷೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ( Interview) ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಅನ್ವಯಿಸಿದ್ದಲ್ಲಿ ಪಾವತಿಸಿ
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 23-05-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 06-06-2023 |
ಪ್ರಮುಖ ಲಿಂಕುಗಳು |
ಹೋಮ್ ಪೇಜ್ |
ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ