ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ MSIL (ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್) 2023 ರ ನೇಮಕಾತಿಯ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ MSIL ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
– MSIL ನೇಮಕಾತಿ (Recruitment) 2023 ರ ಅವಲೋಕನ –
ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್, ಬೆಂಗಳೂರು ಇಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಯನ್ನು ಪಡೆಯಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ.
ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :
ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು: |
ಇಲಾಖೆ ಹೆಸರು | ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್(MSIL) |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ವರ್ಷ | 2023 |
ಒಟ್ಟು ಹುದ್ದೆಗಳು | 72 ಪೋಸ್ಟ್ ಗಳು |
ಅಪ್ಲಿಕೇಶನ್ ವಿಧಾನ | ಆನ್ಲೈನ್(online) |
MSIL ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :
ಹುದ್ದೆಯ ಹೆಸರುಗಳು :
ಸಹಾಯಕ ವ್ಯವಸ್ಥಾಪಕರು (ಸೇಲ್ಸ್) :14 ಸಹಾಯಕ ವ್ಯವಸ್ಥಾಪಕರು (ಆಕೌಂಟ್ಸ್) : 4
ಸಹಾಯಕ ವ್ಯವಸ್ಥಾಪಕರು ( ಪರ್ಸನಲ್ ) : 1
ಸಹಾಯಕ ವ್ಯವಸ್ಥಾಪಕರು (ಫಾರ್ಮ) : 1
ಸಹಾಯಕ ವ್ಯವಸ್ಥಾಪಕರು( ಟೂರ್ಸ್ ಅಂಡ್ ಟ್ರಾವೆಲ್ಸ್ ) : 1
ಸಹಾಯಕ ವ್ಯವಸ್ಥಾಪಕರು (ಇ.ಡಿ.ಪಿ) : 2 ಸೇಲ್ಸ್ ಮೇಲ್ವಿಚಾರಕರು : 19
ಮಾರಾಟ ಪ್ರತಿನಿಧಿ : 6
ಸೇಲ್ಸ್ ಇಂಜಿನೀಯರ್( ಮೆಕಾನಿಕಲ್) : 1
ಸೇಲ್ಸ್ ಇಂಜಿನೀಯರ್ (ಸಿವಿಲ್) : 1
ಸೇಲ್ಸ್ ಇಂಜಿನೀಯರ್ (ಇ&ಸಿ) : 1
ಸೇಲ್ಸ್ ಇಂಜಿನೀಯರ್( ಎಲೆಕ್ಟ್ರಿಕಲ್) : 1
ಲೆಕ್ಕ ಗುಮಾಸ್ತರು : 5
ಗುಮಾಸ್ತರು : 12
ಒಟ್ಟು ಹುದ್ದೆಗಳ ಸಂಖ್ಯೆ : 72
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
MSIL ನೇಮಕಾತಿ – 2023ಕ್ಕೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ MBA, ಡಿಪ್ಲೋಮ, CA/ICWA/MBA (Finance) from IIM, MCA, BE, ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಯಾವ ಹುದ್ದೆಗೆ ಯಾವ ವಿದ್ಯಾರ್ಹತೆಯನ್ನು ಪಡೆದಿರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಪರಿಶೀಲಿಸಿ.
ವಯೋಮಿತಿ :
ಅಭ್ಯರ್ಥಿಯು ಕನಿಷ್ಠ 18 ವರ್ಷಗಳಿಂದ ಗರಿಷ್ಠ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷಗಳು
ಪ್ರವರ್ಗ 2ಎ, 2 ಬಿ, 3ಎ, 3ಬಿ : 38 ವರ್ಷಗಳು
ST, SC, ಪ್ರವರ್ಗ1 ಅಭ್ಯರ್ಥಿಗಳಿಗೆ : 40 ವರ್ಷಗಳು
ಸಂಬಳದ ಪ್ಯಾಕೇಜ್ ಎಷ್ಟು?:
ಸಹಾಯಕ ವ್ಯವಸ್ಥಾಪಕರು- ರೂ. 44200 ರಿಂದ ರೂ. 80100/-
ಸೇಲ್ಸ್ ಮೇಲ್ವಿಚಾರಕ- ರೂ. 35150 ರಿಂದ ರೂ. 64250/-
ಸೇಲ್ಸ್ ಇಂಜಿನಿಯರ್- ರೂ. 35150 ರಿಂದ ರೂ. 64250/-
ಅಕೌಂಟ್ಸ್ ಕ್ಲರ್ಕ್- ರೂ. 25200 ರಿಂದ ರೂ. 50150/-
ಕ್ಲರ್ಕ್- ರೂ. 21900 ರಿಂದ ರೂ. 43100/-
ಸೇಲ್ಸ್ ಪ್ರತಿನಿಧಿ- ರೂ. 28950 ರಿಂದ ರೂ. 55350/-.
ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಶುಲ್ಕ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.1000.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.750.
ಎಸ್ಸಿ/ ಎಸ್ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.250
ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 23-06-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 22-07-2023 |
ಪ್ರಮುಖ ಲಿಂಕುಗಳು |
ಹೋಮ್ ಪೇಜ್ |
ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ |
ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ