Home » Karnataka Jobs » ಪಿಯುಸಿ, ಡಿಪ್ಲೋಮ ಆದವರಿಗೆ ಜಿಲ್ಲಾ ಕೋರ್ಟ್ ನಲ್ಲಿ ಉದ್ಯೋಗಾವಕಾಶ | District court recruitment 2023

ಪಿಯುಸಿ, ಡಿಪ್ಲೋಮ ಆದವರಿಗೆ ಜಿಲ್ಲಾ ಕೋರ್ಟ್ ನಲ್ಲಿ ಉದ್ಯೋಗಾವಕಾಶ | District court recruitment 2023

WhatsApp Group Join Now
Telegram Group Join Now
Picsart 23 07 29 10 42 05 628 scaled

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಬೆಳಗಾವಿ ಜಿಲ್ಲಾ ನ್ಯಾಯಾಲಯದ (Belagavi District Court) ನೇಮಕಾತಿಯ(Recruitment) 2023 ರ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  ಬೆಳಗಾವಿ ಜಿಲ್ಲಾ ನ್ಯಾಯಾಲಯದ ನೇಮಕಾತಿ (Recruitment) 2023 ರ ಅವಲೋಕನ  –

ಬೆಳಗಾವಿ, ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿಯಿರುವ ಶೀಘ್ರಲಿಪಿಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿ ಅವ್ಹಾನಿಸಿದ್ದು, ಅದರಲ್ಲಿ 13 ಶೀಘ್ರಲಿಪಿಗಾರರ ಹುದ್ದೆಗಳು ತುಂಬದೆ ಖಾಲಿ ಇದ್ದು, ಅವುಗಳನ್ನು ಆಯಾ ಮೀಸಲಾತಿ ವರ್ಗೀಕರಣಗಳಡಿಯಲ್ಲಿ ಹಿಂಬಾಕಿ ಹುದ್ದೆಗಳೆಂದು ಪರಿಗಣಿಸಿ, ಸದರಿ 13 ಖಾಲಿ ಇರುವ ಶೀಘ್ರಲಿಗಾರರ ಹಿಂಬಾಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಜಾಗರೂಕತೆಯಿಂದ ಎಲ್ಲಾ ಅಂಕಣಗಳನ್ನು ತಪ್ಪಿಲ್ಲದಂತೆ ಭರ್ತಿಮಾಡಿ ಕೊನೆಯ ದಿನಾಂಕದೊಳಗೆ ಅರ್ಜಿಗಳನ್ನು ಬೆಳಗಾವಿಯ ಜಿಲ್ಲಾ ನ್ಯಾಯಾಲಯದ https://districts.ecourts.gov.in/belagavi-online-recruitment Deser ವೆಬ್ಸೈಟ್ ಲಿಂಕ್ ಬಳಸಿ ಆನ್‌ಲೈನ್ ಮುಖಾಂತರ ಸಲ್ಲಿಸಬೇಕು. ದಿನಾಂಕ: 21.07.2023 ರಿಂದ ದಿನಾಂಕ 21.08.2023ರ ರಾತ್ರಿ 11.59 ರವರೆಗೆ ಮಾತ್ರ ಸಲ್ಲಿತಕ್ಕದ್ದು ಹಾಗೂ ಶುಲ್ಕವನ್ನು ಚಲನ್ ಮುಖಾಂತರ ಪಾವತಿಸಲು ದಿನಾಂಕ: 24.08.20123 ಕೊನೆಯ ದಿನಾಂಕವಾಗಿದ್ದು, ನಿಗದಿತ ಅವಧಿಯೊಳಗೆ ಎಸ್.ಬಿ.ಐ.ನ ಯಾವುದೇ ಶಾಖೆಯ ವ್ಯವಹಾರದ ವೇಳೆಯಲ್ಲಿ ಪಾವತಿಸತಕ್ಕದ್ದು ಅಥವಾ ಆನ್‌ಲೈನ್‌ಮೂಲಕ ಪಾವತಿಸತಕ್ಕದ್ದು, ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ.

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಬೆಳಗಾವಿ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಹೆಸರು ಶೀಘ್ರಲಿಪಿಗಾರ
ವರ್ಷ 2023
ಒಟ್ಟು ಹುದ್ದೆಗಳು  13
ಅಪ್ಲಿಕೇಶನ್ ವಿಧಾನ ಆನ್ಲೈನ್

ಬೆಳಗಾವಿ ಜಿಲ್ಲಾ ನ್ಯಾಯಾಲಯದ ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಶೀಘ್ರ ಲಿಪಿಗಾರರು)(ಸ್ಟೆನೋಗ್ರಾಫರ್) ಗ್ರೇಡ್-III
ಒಟ್ಟು ಹುದ್ದೆಗಳ ಸಂಖ್ಯೆ : 13
ಉದ್ಯೋಗ ಸ್ಥಳ : ಬೆಳಗಾವಿ-ಕರ್ನಾಟಕ

ಬೆಳಗಾವಿ ಜಿಲ್ಲಾ ನ್ಯಾಯಾಲಯದ ನೇಮಕಾತಿ – 2023ಕ್ಕೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ PUC, ವಾಣಿಜ್ಯ ಅಭ್ಯಾಸದಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು .

ವಯೋಮಿತಿ :

ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷಗಳ ಒಳಗಿರಬೇಕ ವಯಸ್ಸಿನ ಸಡಿಲಿಕೆ :
SC/ST ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2A/2B/3A/3B ಅಭ್ಯರ್ಥಿಗಳು: 03 ವರ್ಷಗಳು

ಸಂಬಳದ ಪ್ಯಾಕೇಜ್ ಎಷ್ಟು?:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.27650-52650/- ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಟೈಪಿಂಗ್ ಪರೀಕ್ಷೆ
ಸಂದರ್ಶನ

ಅರ್ಜಿ ಶುಲ್ಕ:

SC/ST/PH ಅಭ್ಯರ್ಥಿಗಳು: ಇಲ್ಲ
ಸಾಮಾನ್ಯ/cat-2A/2B/3A/3B ಅಭ್ಯರ್ಥಿಗಳು: ರೂ.300/-

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  21-7-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  21-8-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *