Home » Karnataka Jobs » Job Alert – ಬೆಸ್ಕಾಂ’ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಕಂಪ್ಲೀಟ್ ಮಾಹಿತಿ

Job Alert – ಬೆಸ್ಕಾಂ’ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಕಂಪ್ಲೀಟ್ ಮಾಹಿತಿ

WhatsApp Group Join Now
Telegram Group Join Now
Bescom 400 vacancy

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ(BESCOM) ನಲ್ಲಿ ಖಾಲಿ ಇರುವ 400 ಅಪ್ರೆಂಟಿಸ್ ಗಳ ಹುದ್ದೆಗಳಿಗೆ ಇರುವ ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೆ ಬೆಸ್ಕಾಂ ವತಿಯಿಂದ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ

– BESCOM ನೇಮಕಾತಿ (Recruitment) 2023 ರ ಅವಲೋಕನ –

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ಅಧಿಕೃತ ವೆಬ್‌ಸೈಟ್ bescom.org ಮೂಲಕ ಖಾಲಿ ಇರುವ 400 ಅಪ್ರೆಂಟಿಸ್ ಉದ್ಯೋಗಗಳ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿಯನ್ನು ಆನ್‌ಲೈನ್ ಮೂಲಕ ಡಿಸೆಂಬರ್ 31, 2023 ರ ಒಳಗಾಗಿ ಸಲ್ಲಿಸಬಹುದು. ಡಿಪ್ಲೊಮ ಇಂಜಿನಿಯರಿಂಗ್‌(Diploma Engineering) ಮತ್ತು ಇಂಜಿನಿಯರಿಂಗ್(Engineering) ಅಧ್ಯಯನ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಇದಕ್ಕೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಕೂಡಲೇ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM)
ಹುದ್ದೆಗಳ ಹೆಸರು ಅಪ್ರೆಂಟಿಸ್
ವರ್ಷ 2023
ಒಟ್ಟು ಹುದ್ದೆಗಳು  400
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

BESCOM ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಹುದ್ದೆಯ ಹೆಸರು :ಗ್ರಾಜುಯೇಟ್‌ / ಟೆಕ್ನೀಷಿಯನ್ ಅಪ್ರೆಂಟಿಸ್‌

ಒಟ್ಟು ಹುದ್ದೆಗಳು: 400

ಗ್ರಾಜುಯೇಟ್‌ ಅಪ್ರೆಂಟಿಸ್‌ ಪೋಸ್ಟಗಳ ವಿವರ :

ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ :143
ಇಲೆಕ್ಟ್ರಾನಿಕ್ಸ್ ಮತ್ತು ಕಂಮ್ಯೂನಿಕೇಷನ್ ಇಂಜಿನಿಯರಿಂಗ್ : 116
ಕಂಪ್ಯೂಟರ್ ಸೈನ್ಸ್‌ ಮತ್ತು ಇಂಜಿನಿಯರಿಂಗ್ : 36
ಇನ್‌ಫಾರ್ಮೇಷನ್‌ ಸೈನ್ಸ್‌ ಮತ್ತು ಇಂಜಿನಿಯರಿಂಗ್ : 20
ಸಿವಿಲ್ ಇಂಜಿನಿಯರಿಂಗ್ : 05
– ಇನ್‌ಸ್ಟ್ರುಮೆಂಟೇಶನ್ ಟೆಕ್ನಾಲಜಿ ಇಂಜಿನಿಯರಿಂಗ್ : 05
ಒಟ್ಟು ಗ್ರಾಜುಯೇಟ್‌ ಅಪ್ರೆಂಟಿಸ್‌ ಹುದ್ದೆಗಳ ಸಂಖ್ಯೆ : 325

ಟೆಕ್ನೀಷಿಯನ್ (ಡಿಪ್ಲೊಮ) ಅಪ್ರೆಂಟಿಸ್‌ ಪೋಸ್ಟಗಳ ಸಂಖ್ಯೆ

ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್ : 55
ಇಲೆಕ್ಟ್ರಾನಿಕ್ಸ್‌ ಮತ್ತು ಕಂಮ್ಯುನಿಕೇಷನ್‌ ಇಂಜಿನಿಯರಿಂಗ್: 10
ಕಂಪ್ಯೂಟರ್ ಸೈನ್ಸ್‌ ಮತ್ತು ಇಂಜಿನಿಯರಿಂಗ್ : 10

ಒಟ್ಟು ಟೆಕ್ನೀಷಿಯನ್ ಅಪ್ರೆಂಟಿಸ್‌ ಸಂಖ್ಯೆ : 75

BESCOM ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಅನ್ವಯವಾಗುವ ವಿಭಾಗಗಳಲ್ಲಿ B. E/B. Tech ಪದವಿ/ಡಿಪ್ಲೊಮಾ ಪ್ರಮಾಣಪತ್ರವನ್ನು ಹೊಂದಿರಬೇಕು

ವಯೋಮಿತಿ:

ಈ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು 18 ವರ್ಷಕ್ಕಿಂತ ಕಡಿಮೆಯಿರಬಾರದು.

ವಯೋಮಿತಿ ಸಡಿಲಿಕೆ:
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಿಯಮಗಳ ಪ್ರಕಾರ

Picsart 23 06 10 13 55 14 667

ಸಂಬಳದ ಪ್ಯಾಕೇಜ್ ಎಷ್ಟು?:

ಗ್ರಾಜುಯೇಟ್‌ ಅಪ್ರೆಂಟಿಸ್‌ : ಮಾಸಿಕ ಸ್ಟಿಫೆಂಡ್ ರೂ.9008.
ಟೆಕ್ನೀಷಿಯನ್ ಅಪ್ರೆಂಟಿಸ್‌ : ಮಾಸಿಕ ಸ್ಟಿಫೆಂಡ್ ರೂ.8000.

ಅರ್ಜಿ ಶುಲ್ಕ:
ಯಾವದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಪಡೆದ ಮೆರಿಟ್ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ತದನಂತರ, ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ದಾಖಲೆಗಳ ಪರಿಶೀಲನೆ(Document verification)ಗಾಗಿ ವೈಯಕ್ತಿಕವಾಗಿ ಹಾಜರಾಗಬೇಕಾಗುತ್ತದೆ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದ್ದಲ್ಲಿ)

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಮೂಲ ದಾಖಲೆಗಳ ಪರಿಶೀಲನೆ ವಿಳಾಸ : BESCOM, HRD ಸೆಂಟರ್, 1 ನೇ ಮಹಡಿ,

ಕ್ರೆಸೆಂಟ್ ಟವರ್, ಕ್ರೆಸೆಂಟ್ ರಸ್ತೆ,

ಮಲ್ಲಿಗೆ ನರ್ಸಿಂಗ್ ಹೋಮ್ ಹತ್ತಿರ,

ರೇಸ್ ಕೋರ್ಸ್, ಬೆಂಗಳೂರು 560001.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  11-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31-12-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ.

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *