Home » Central Jobs » 3,000ಕ್ಕೂ ಹೆಚ್ಚು ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆ | BPNL Recruitment 2023 For Survey in Charge, Apply Online

3,000ಕ್ಕೂ ಹೆಚ್ಚು ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆ | BPNL Recruitment 2023 For Survey in Charge, Apply Online

WhatsApp Group Join Now
Telegram Group Join Now
Picsart 23 06 21 12 51 43 051 scaled

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿBPNL(ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್) 2023 ರ ನೇಮಕಾತಿಯ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ  ಪಶುಪಾಲನ ನಿಗಮದ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

– BPNL ನೇಮಕಾತಿ(Recruitment) 2023 ರ ಅವಲೋಕನ  –

ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್(BPNL) ನಲ್ಲಿ ಒಟ್ಟು 3444 ಹುದ್ದೆಗಳು ಖಾಲಿ ಇವೆ. ಪಶುಪಾಲನಾ ವಿಮಾ ಯೋಜನೆ, ಜಾನುವಾರು ಕಲ್ಯಾಣ ವಿಮಾ ಯೋಜನೆ, ಆರತಿಯ ಪಶುಪಾಲನ್ ನಿಗಮ್ ಲಿಮಿಟೆಡ್ ನಡೆಸುತ್ತಿರುವ ವಸತಿ ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ರಾಜ್ಯ ಮಟ್ಟದಲ್ಲಿ ನಿರ್ವಹಿಸಲು ಉದ್ದೇಶಿಸಲಾಗಿದೆ. ಈ ಯೋಜನೆಗಳ ಮೂಲಕ ರೈತರು ಮತ್ತು ಪಶುಗಳಿಗೆ ವಿಮೆಯ ಪ್ರಯೋಜನಗಳನ್ನು ಮತ್ತು ನಿರುದ್ಯೋಗಿ ಯುವಕರಿಗೆ ಕೌಶಲ್ಯ ತರಬೇತಿಯನ್ನು ನೀಡಲು ಮತ್ತು ಈ ಯೋಜನೆಗಳನ್ನು ಯಶಸ್ವಿಗೊಳಿಸಲು ಪಂಚಾಯತ್, ತಹಸಿಲ್ ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ಸಾಹಿ ಮತ್ತು ಶ್ರಮಶೀಲ ಯುವಕರ ಅಗತ್ಯವಿದೆ. ಹಾಗಾಗಿ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಿ, ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು.

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್(BPNL)
ಹುದ್ದೆಗಳ ಹೆಸರು ಸರ್ವೆ ಇನ್ ಚಾರ್ಜ್, ಸರ್ವೇಯರ್
ವರ್ಷ 2023
ಒಟ್ಟು ಹುದ್ದೆಗಳು  3444 ಪೋಸ್ಟ್ ಗಳು
ಅಪ್ಲಿಕೇಶನ್ ವಿಧಾನ ಆನ್ಲೈನ್(online)

BPNL ನೇಮಕಾತಿ 2023 ಖಾಲಿ ಹುದ್ದೆಗಳ ವಿವರ :

ಪೋಸ್ಟ್ ಹೆಸರು: ಸರ್ವೆ ಇನ್ ಚಾರ್ಜ್, ಸರ್ವೇಯರ್
ಸರ್ವೆ ಉಸ್ತುವಾರಿ : 574
ಸರ್ವೇಯರ್ : 2870
ಒಟ್ಟು ಹುದ್ದೆಗಳ ಸಂಖ್ಯೆ : 3444
ಉದ್ಯೋಗ ಸ್ಥಳ : ಅಖಿಲ ಭಾರತ

ಪಶುಪಾಲನ ನಿಗಮದ ನೇಮಕಾತಿ – 2023ಕ್ಕೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಸರ್ವೆ ಉಸ್ತುವಾರಿ : 12 ನೇ ತರಗತಿಯನ್ನು ಪಾಸಾಗಿರಬೇಕು
ಸರ್ವೇಯರ್ : 10 ನೇ ತರಗತಿಯನ್ನು ಪಾಸಾಗಿರಬೇಕು

ವಯೋಮಿತಿ :

ಅಭ್ಯರ್ಥಿಯು ಅಧಿಸೂಚನೆಯ ಪ್ರಕಾರ   ಕನಿಷ್ಠ 18 ವರ್ಷಗಳಿಂದ ಗರಿಷ್ಠ 40 ವರ್ಷಗಳನ್ನು ಮೀರಿರಬಾರದು.

ಸಂಬಳದ ಪ್ಯಾಕೇಜ್ ಎಷ್ಟು?:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಸರ್ವೆ ಉಸ್ತುವಾರಿಗೆ : ರೂ.24000/-
ಸರ್ವೇಯರ್ ಗೆ : ರೂ.20000/- ಸಂಬಳವನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಆನ್‌ಲೈನ್ ಪರೀಕ್ಷೆ
ಸಂದರ್ಶನ

ಅರ್ಜಿ ಶುಲ್ಕ :

ಅರ್ಜಿ ಶುಲ್ಕವಾಗಿ ಎಲ್ಲಾ ಅಭ್ಯರ್ಥಿಗಳು  ರೂ.944/- ಗಳನ್ನು ಪಾವತಿಸಬೇಕು.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  16-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  05-07-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *