Home » Karnataka Jobs » ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ, 10ನೇ ಕ್ಲಾಸ್ ಪಾಸ್ ಆಗಿದ್ರೆ ಅರ್ಜಿ ಹಾಕಿ | Forest Watcher Recruitment 2023

ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ, 10ನೇ ಕ್ಲಾಸ್ ಪಾಸ್ ಆಗಿದ್ರೆ ಅರ್ಜಿ ಹಾಕಿ | Forest Watcher Recruitment 2023

WhatsApp Group Join Now
Telegram Group Join Now
WhatsApp Image 2023 09 16 at 08.36.223

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ(Recruitment) ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.  ಈಗಾಗಲೇ ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆಯ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ (Recruitment) 2023 ರ ಅವಲೋಕನ  –

ಕರ್ನಾಟಕ ಅರಣ್ಯ ಇಲಾಖೆಯಲ್ಲಿನ ವಿವಿಧ ವೃತ್ತಗಳ ಹಂತದಲ್ಲಿ, ಖಾಲಿ ಇರುವ ಅರಣ್ಯ ವೀಕ್ಷಕ(Forest watcher) ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಹೊಸದಾಗಿ ಸೃಜಿಸಲಾದ 310 ಅರಣ್ಯ ವೀಕ್ಷಕ ಹುದ್ದೆಗಳನ್ನು ಚಾಲ್ತಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ  ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ನೇಮಕಾರ ಅಧಿಸೂಚನೆಯನ್ನು ಹೊರಡಿಸಿ, ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಹಾಗೂ ಮುಂದುವರೆಸಲು ಅನುಮತಿಯನ್ನು ಕರ್ನಾಟಕ ಸರ್ಕಾರ(Karnataka Government) ನೀಡಿದೆ. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಕರ್ನಾಟಕ ಅರಣ್ಯ ಇಲಾಖೆ
ಹುದ್ದೆಗಳ ಹೆಸರು ಅರಣ್ಯ ವೀಕ್ಷಕ(Forest watcher)
ವರ್ಷ 2023
ಒಟ್ಟು ಹುದ್ದೆಗಳು  310
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

ಕರ್ನಾಟಕ ಅರಣ್ಯ ಇಲಾಖೆ(Karnataka Forest Department) ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಹುದ್ದೆಯ ಹೆಸರು: ಅರಣ್ಯ ವೀಕ್ಷಕ ಹುದ್ದೆ

ಯಾವ ವೃತ್ತದಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ :
ಬೆಂಗಳೂರು ವೃತ್ತ : 33 ಹುದ್ದೆಗಳು
ಬೆಳಗಾವಿ ವೃತ್ತ : 20
ಬಳ್ಳಾರಿ ವೃತ್ತ : 20
ಚಾಮರಾಜನಗರ ವೃತ್ತ : 32
ಚಿಕ್ಕಮಗಳೂರು ವೃತ್ತ : 25
ಧಾರವಾಡ ವೃತ್ತ : 20
ಹಾಸನ ವೃತ್ತ : 20
ಕೆನರಾ ವೃತ್ತ : 32
ಕಲಬುರ್ಗಿ ವೃತ್ತ : 23
ಮಂಗಳೂರು ವೃತ್ತ : 20
ಮೈಸೂರು ವೃತ್ತ : 32
ಶಿವಮೊಗ್ಗ ವೃತ್ತ : 30
ಒಟ್ಟು ಹುದ್ದೆಗಳ ಸಂಖ್ಯೆ : 310
ಉದ್ಯೋಗ ಸ್ಥಳ : ಕರ್ನಾಟಕ

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಕಡ್ಡಾಯವಾಗಿ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾಹರ್ತೆಯನ್ನು ಹೊಂದಿರಬೇಕು.

ವಯೋಮಿತಿ :

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳಿಂದ ಗರಿಷ್ಠ 27 ವರ್ಷಗಳನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwD ( ಅಂಗವಿಕಲ) ಅಭ್ಯರ್ಥಿಗಳು: 10 ವರ್ಷಗಳು

Picsart 23 06 10 13 55 14 667

ಸಂಬಳದ ಪ್ಯಾಕೇಜ್ ಎಷ್ಟು?:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.18600-32600/-  ಗಳನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ದೈಹಿಕ ಪರೀಕ್ಷೆ ಮತ್ತು ಇನ್ನಿತರ ಪರೀಕ್ಷೆಗಳನ್ನು ನಡೆಸಲಾಗುವುದು ಹೆಚ್ಚಿನ ಮಾಹಿತಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  27-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  26-10-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *