Home » Trending News » ರೇಷನ್ ಕಾರ್ಡ್ ಆಕ್ಟಿವ್ ಇದ್ದವರಿಗೆ ಮಾತ್ರ ಸಿಗಲಿದೆ ಗೃಹಲಕ್ಷ್ಮಿ& ಅನ್ನಭಾಗ್ಯ ಹಣ, ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

ರೇಷನ್ ಕಾರ್ಡ್ ಆಕ್ಟಿವ್ ಇದ್ದವರಿಗೆ ಮಾತ್ರ ಸಿಗಲಿದೆ ಗೃಹಲಕ್ಷ್ಮಿ& ಅನ್ನಭಾಗ್ಯ ಹಣ, ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

WhatsApp Group Join Now
Telegram Group Join Now
annabhagyaaa

ಆಹಾರ ಇಲಾಖೆಯಿಂದ ಅನರ್ಹ ಫಲಾನುಭವಿಗಳ ಬಿಪಿಎಲ್ ರೇಷನ್ ಕಾರ್ಡ್ಗಳನ್ನು ಕುಲಂಕುಶವಾಗಿ ಪರಿಶೀಲಿಸಿ ಅರ್ಹ ರಲ್ಲದ ಫಲಾನುಭವಿಗಳ ರೇಷನ್ ಕಾರ್ಡ್ ಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು. ತೆರಿಗೆ ಪಾವತಿದಾರರು ಸರ್ಕಾರಿ ನೌಕರ ಬಳಿಯೂ ಬಿಪಿಎಲ್ ಕಾರ್ಡ್ ಇದ್ದು, ಅಂಥವರ ರೇಷನ್ ಕಾರ್ಡ್ ರದ್ದು ಗೊಳಿಸುವುದರ ಜೊತೆಗೆ ದಂಡದ ರುಚಿಯನ್ನು ಸಹಿತ ತೋರಿಸಲಾಗುತ್ತಿದೆ. ತುಂಬಾ ಜನರ ರೇಷನ್ ಕಾರ್ಡ್ ರದ್ದಾಗಿವೆ ಹಾಗೂ ಇನ್ನೂ ರದ್ದಾಗುವ ಸಾದ್ಯತೆ ಇವೆ. ಹೀಗೆ ರದ್ದಾದ ರೇಷನ್ ಕಾರ್ಡ್ ಫಲಾನುಭವಿಗಳಿಗೆ ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಮತ್ತು ಅನ್ನಭಾಗದ ಹಣ ಜಮಾ ಆಗುವುದಿಲ್ಲ. ಆದ್ದರಿಂದ ನಿಮಗೆ 6 ಮತ್ತು 7ನೇ ಕಂತಿನ ಹಣ ಇದುವರೆಗೂ ಜಮಾ ಆಗಿಲ್ಲ ಎಂದರೆ ನಿಮ್ಮ ಕಾರ್ಡ್ ಸ್ಥಿತಿಯನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳಲಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಶಾಕ್ ಸರ್ಕಾರ ಕೊಟ್ಟ

ರಾಜ್ಯದಲ್ಲಿ 1.27 ಕೋಟಿ ಬಿಪಿಎಲ್ ಕಾರ್ಡ್‌ಗಳಿದ್ದು, 4.36 ಕೋಟಿ ಜನರಿಗೆ ಅನುಕೂಲವಾಗಿದೆ. ಆದರೆ, ಬಿಪಿಎಲ್ ಗೆ ಅರ್ಹರಲ್ಲದ ಫಲಾನುಭವಿಗಳು ಉಚಿತ ಆಹಾರ ಧಾನ್ಯ ಪಡೆಯುತ್ತಿದ್ದಾರೆ ಎಂಬ ದೂರಿನ ಅನ್ವಯ ಬಿಪಿಎಲ್ ಕಾರ್ಡಿಗೆ ಅರ್ಹರಲ್ಲದ ಫಲಾನುಭವಿಗಳ ಸೂಕ್ತ ದಾಖಲೆಗಳನ್ನು ಪಡೆದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬರೋಬರಿ 4.59 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿದೆ.

ಕಳೆದ ವರ್ಷ 2023 ರಲ್ಲಿ ರಾಜ್ಯದಲ್ಲಿ ಬರೋಬ್ಬರಿ 4 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದು ಮಾಡಿ ಸುಮಾರು 13 ಕೋಟಿ ರೂಪಾಯಿ ಬಂಡವನ್ನು ವಸೂಲಿ ಮಾಡಿದ್ದಾರೆ. ಅದೇ ಪ್ರಕಾರ ಈ ವರ್ಷವೂ ಸಹಿತ ಚುರುಕಿನ ಕಾರ್ಯಾಚರಣೆ ಮೂಲಕ ಬಿಪಿಎಲ್ ಕಾರ್ಡಿಗೆ ಅರ್ಹರಲ್ಲದ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುವ ಮೂಲಕ ಅರ್ಹ ಫಲಾನುಭಗಳಿಗೆ ಹೆಚ್ಚಿನ ಸೌಲಭ್ಯಗಳ ಲಾಭ ಆಗುವಂತೆ ನೋಡಿಕೊಳ್ಳುವ ಭರವಸೆಯನ್ನು ಇಲಾಖೆ ಹೊಂದಿದೆ.

ಬಡತನ ರೇಖೆಗಿಂತ ಕೆಳಗಿರುವವರ ಜೀವನ ಮಟ್ಟ ಸುಧಾರಿಸುವ ಉದ್ದೇಶದಿಂದ ಸರಕಾರ ಬಿಪಿಎಲ್‌ ಕಾರ್ಡ್‌ಗಳನ್ನು ನೀಡುತ್ತಿದೆ. ಆದರೆ, ಇಲ್ಲೂ ಬಡವರ ತುತ್ತಿನ ಚೀಲಕ್ಕೆ ಉಳ್ಳವರು ಕನ್ನ ಹಾಕುತ್ತಿದ್ದಾರೆ. ಇಂತಹ ಸಾವಿರಾರು ಫಲಾನುಭವಿಗಳಿಗೆ ದಂಡದ ರುಚಿ ತೋರಿಸಲಾಗಿದೆ.

Picsart 23 06 10 14 01 54 141

ಅರ್ಹತೆ ಇರದ್ದಿದ್ದರೂ ಬಿಪಿಎಲ್‌ ಕಾರ್ಡ್‌ಗಳನ್ನು ಹೊಂದಿದ್ದರೆ ಅಂತಹವರು ಕಾರ್ಡ್‌ ಹಿಂದಿರುಗಿಸಬೇಕೆಂದು ಆಹಾರ ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ನಿರಂತರ ತಿಳಿವಳಿಕೆ ಮೂಡಿಸುತ್ತಲೇ ಇದೆ. ಆದರೆ, ಸಾವಿರಾರು ಅನರ್ಹರು ಸರಕಾರ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇಂಥವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದ್ದು, ಪತ್ತೆ ಹಚ್ಚಿ ಕಾರ್ಡ್‌ಗಳನ್ನು ರದ್ದುಪಡಿಸಲಾಗುತ್ತಿದೆ.

Ration card  ಸ್ಥಿತಿಯನ್ನು ಚೆಕ್ ಮಾಡಲು ಕೆಳಗಿನ ಸಲಹೆಗಳನ್ನು ಅನುಸರಿಸಿ:

ಹಂತ 1: ಮೊದಲಿಗೆ,ಕರ್ನಾಟಕ ಸರ್ಕಾರದ “ಮಾಹಿತಿ ಕಣಜ” website ಗೆ ಹೋಗಿ.

https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010

ಹಂತ 2: My Ration card details ವಿವರಗಳ ಪುಟ ತೆರೆದುಕೊಳ್ಳುತ್ತದೆ.

01

ಹಂತ 3: ನಂತರ ನಿಮ್ಮ ಜಿಲ್ಲೆ ಮತ್ತು  ನಿಮ್ಮ ration card ಅಲ್ಲಿ ಇರುವ 12 ಸಂಖ್ಯೆಯ  ನಂಬರ್ ಅನ್ನು ನಮೂದಿಸಿ. ನಂತರ ಸಲ್ಲಿಸು/submit ಇದಲ್ಲಿ ಕ್ಲಿಕ್ ಮಾಡಿ. ಅದು ಆದ ಬಳಿಕ my Ration shop details/ನನ್ನ ಪಡಿತರ ಅಂಗಡಿ ವಿವರದ ಪುಟ ತೆರೆಯುತ್ತದೆ. ನಂತರ card status/ಕಾರ್ಡ್ ಸ್ಥಿತಿ  ಸಕ್ರಿಯ/active ಎಂದು ತೋರಿಸಿದರೆ ನಮ್ಮ Ration card ಚಾಲ್ತಿ ಇದೆ ಎಂದು ತಿಳಿಯಬಹುದಾಗಿದೆ.

02

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

Picsart 23 06 10 13 55 14 667

 

 

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *