Home » Karnataka Jobs » HESCOM Recruitment – ಹೆಸ್ಕಾಂನಲ್ಲಿ ವಿವಿಧ ಹುದ್ದೆಗಳ ನೇಮಕಾತಿ – ಆನ್ಲೈನ್ ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್ ಇಲ್ಲಿದೆ

HESCOM Recruitment – ಹೆಸ್ಕಾಂನಲ್ಲಿ ವಿವಿಧ ಹುದ್ದೆಗಳ ನೇಮಕಾತಿ – ಆನ್ಲೈನ್ ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now
WhatsApp Image 2023 08 27 at 15.21.28

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಹುಬ್ಬಳ್ಳಿ ಎಲೆಕ್ಟ್ರಿಕ್ ಸಪ್ಲೈ ಕಂಪನಿ(HESCOM) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ(Recruitment) ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.  ಈಗಾಗಲೇ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–   HESCOM (Recruitment) 2023 ರ ಅವಲೋಕನ  –

2023-24 ನೇ ವರ್ಷದ ಅವಧಿಗಾಗಿ ಐಟಿಐ ಇಲೆಕ್ಸಿಕಿಯನ್ ವೃತ್ತಿ ತರಬೇತಿrew 248 ಶಿಶುಕ್ಷುಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಕರೆಯಲಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಬೇಕಾಗುವ ಅರ್ಹತೆಗಳ ವಿವರ ಹಾಗೂ ಅಪ್ರೆಂಟಿಸ್ ಗಳು ಸಲ್ಲಿಸಬೇಕಾಗುವ ಅರ್ಜಿಯ ನಮೂನೆ ಹಾಗೂ ಸಂಬಂಧಿತ ಲಗತ್ತುಗಳು ಹಸ್ಕಾಂನ ವೆಬ್ ಸೈಟ್ www.hescom.karnataka.gov.in ನಲ್ಲಿ ಲಭ್ಯವಿರುತ್ತವೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್‌ 10,2023 ರಂದು ಅಥವಾ ಮೊದಲು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು HESCOM
ಹುದ್ದೆಗಳ ಹೆಸರು ಅಪ್ರೆಂಟಿಸ್(Apprentice)
ವರ್ಷ 2023
ಒಟ್ಟು ಹುದ್ದೆಗಳು  248
ಅಪ್ಲಿಕೇಶನ್ ವಿಧಾನ online and offline

HESCOM ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಹುದ್ದೆಯ ಹೆಸರು :ಅಪ್ರೆಂಟಿಸ್(Apprentice)
ಒಟ್ಟು ಹುದ್ದೆಗಳ ಸಂಖ್ಯೆ : 248
ಉದ್ಯೋಗ ಸ್ಥಳ : ಹುಬ್ಬಳ್ಳಿ – ಕರ್ನಾಟಕ

HESCOM ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ :

ಅಭ್ಯರ್ಥಿಗಳು ಗರಿಷ್ಠ 25 ವರ್ಷಗಳನ್ನು ಮೀರಿರಬಾರದು. ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ವಯಸ್ಸು 30 ವರ್ಷಗಳನ್ನು ಮೀರಿರಬಾರದು.

ಸಂಬಳದ ಪ್ಯಾಕೇಜ್ ಎಷ್ಟು?:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.7,000/- ಗಳನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಮೆರಿಟ್ ಪಟ್ಟಿ
ಸಂದರ್ಶನ

ಅರ್ಜಿ ಶುಲ್ಕ:

SC/ST ಅಭ್ಯರ್ಥಿಗಳಿಗೆ : ರೂ.50/-
ಸಾಮಾನ್ಯ ಅಭ್ಯರ್ಥಿಗಳಿಗೆ: ರೂ.100/-
ಅರ್ಜಿ ಶುಲ್ಕವನ್ನು ಭಾರತೀಯ ಪೋಸ್ಟಲ್ ಆರ್ಡರ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ:

ಹಂತ 1: ಪೂರ್ಣ ವಿವರವಿರುವ ಎ-1 ಸೈಜಿನ ಹಾಳೆಯಲ್ಲಿ ಸ್ವಯಂ ಲಿಖಿತ ಅಥವಾ ಬೆರಳಚ್ಚು ಮಾಡಿದ ನಿಗದಿತ ನಮೂನೆಯಲ್ಲಿರುವ ಅರ್ಜಿಗಳನ್ನು ಸಾಮಾನ್ಯ ಅಭ್ಯರ್ಥಿಗಳು ರೂ.100/- ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ರೂ. 50/- ಮೊತ್ತದ ಇಂಡಿಯನ್ ಫೊಸ್ಟಲ್ ಆರ್ಡರನ್ನು “ಆರ್ಥಿಕ ಸಲಹೆಗಾರರು, ಹುವಿಸಕಂವಿ, ಹುಬ್ಬಳ್ಳಿ” ಇವರ ಹೆಸರಿನಲ್ಲಿ ಖರೀದಿಸಿ, ಅರ್ಜಿಯೊಂದಿಗೆ ಲಗತ್ತಿಸಬೇಕು.

ಹಂತ 2: ಹಾಗೂ ಲಕೋಟೆಯ ಮೇಲೆ ಇಲೆಕ್ನಿಶಿಯನ್ ವೃತ್ತಿಯ ಶಶಿಕ್ಷು ತರಬೇತಿಗಾಗಿ ಅರ್ಜಿ” ಎಂದು ನಮೂದಿಸಬೇಕು.

ಹಂತ 3: ಮೇಲೆ ತಿಳಿಸಿದ ಮೊತ್ತದ ಇಂಡಿಯನ್ ಪೊಸ್ಟಲ್ ಆರ್ಡರನ್ನು ಹೊರತು ಪಡಿಸಿ, ಬ್ಯಾಂಕ್‌ ಡಿಮಾಂಡ ಡ್ರಾಫ್ಟ್ (DD) ಅಥವಾ ನಗದನ್ನು ಲಗತ್ತಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಹಂತ 4: ಅಭ್ಯರ್ಥಿಗಳು ಅಪ್ರೆಂಟಿಸ್‌ಶಿಪ್ ಫೋರ್ಟಲ್ www.apprenticeshipindia.gov.in ನಲ್ಲಿ ನೋಂದಾಯಿಸಬೇಕು, ನಂತರ Hubli Electricity Supply Company Ltd, ನ್ನು ಆಯ್ಕೆ ಮಾಡಬೇಕು

ಹಂತ 5: ಅಪ್ರೆಂಟಿಸ್‌ಶಿಪ್ ಪೋರ್ಟಲ್ಲಿನಲ್ಲಿ ನೋಂದಣಿ ಮಾಡಿಕೊಂಡ ಪ್ರತಿಯನ್ನು ಅರ್ಜಿಯ ಜೊತೆಗೆ ಲಗತ್ತಿಸಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  23-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  10-09-2023(online), 16-9-2023(Hard Copy Submission)

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್
ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *