Home » Karnataka Jobs » ಗ್ರಾಮ ಪಂಚಾಯಿತಿ ನೇಮಕಾತಿ, ಮೇಲ್ವಿಚಾರಕ ಹುದ್ದೆಗಳಿಗೆ ಪಿಯುಸಿ ಆಗಿದ್ರೆ ಅರ್ಜಿ ಹಾಕಿ – ಇಲ್ಲಿದೆ ಡೈರೆಕ್ಟ್ ಲಿಂಕ್

ಗ್ರಾಮ ಪಂಚಾಯಿತಿ ನೇಮಕಾತಿ, ಮೇಲ್ವಿಚಾರಕ ಹುದ್ದೆಗಳಿಗೆ ಪಿಯುಸಿ ಆಗಿದ್ರೆ ಅರ್ಜಿ ಹಾಕಿ – ಇಲ್ಲಿದೆ ಡೈರೆಕ್ಟ್ ಲಿಂಕ್

WhatsApp Group Join Now
Telegram Group Join Now
WhatsApp Image 2023 09 27 at 7.28.03 AM

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಕಲಬುರಗಿ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ(Recruitment) ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.  ಈಗಾಗಲೇ ಜಿಲ್ಲಾ ಪಂಚಾಯತ ಕಾರ್ಯಾಲಯ, ಕಲಬುರಗಿ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  ಕಲಬುರಗಿ ಗ್ರಾಮ ಪಂಚಾಯಿತಿ(Kalaburagi District Gram Panchayat) ನೇಮಕಾತಿ  (Recruitment) 2023 ರ ಅವಲೋಕನ  –

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಸೇವಾ ನಿಯಮಗಳನ್ನು  ಜಾರಿಗೊಳಿಸಲಾಗಿದೆ.  ಅಧಿಸೂಚನೆಯಲ್ಲಿರುವಂತೆ ಜಾರಿಯಲ್ಲಿರುವ ನಿಯಮಗಳಡಿಯಲ್ಲಿ ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಇರುವ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲು ಉಲ್ಲೇಖ-2ರಲ್ಲಿ ನಿರ್ದೇಶಿಸಲಾಗಿದೆ. ಒಟ್ಟು 45 ಹುದ್ದೆಗಳು ಖಾಲಿ ಇವೆ. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಕಲಬುರಗಿ ಗ್ರಾಮ ಪಂಚಾಯಿತಿ
ಹುದ್ದೆಗಳ ಹೆಸರು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ
ವರ್ಷ 2023
ಒಟ್ಟು ಹುದ್ದೆಗಳು  45
ಅಪ್ಲಿಕೇಶನ್ ವಿಧಾನ offline

Picsart 23 06 10 14 01 54 141

ಕಲಬುರ್ಗಿ ಗ್ರಾಮ ಪಂಚಾಯಿತಿ ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಹುದ್ದೆಯ ಹೆಸರು : ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ
ಒಟ್ಟು ಹುದ್ದೆಗಳ ಸಂಖ್ಯೆ : 45
ಉದ್ಯೋಗ ಸ್ಥಳ : ಕಲಬುರ್ಗಿ- ಕರ್ನಾಟಕ

ಕಲಬುರ್ಗಿ ಗ್ರಾಮ ಪಂಚಾಯಿತಿ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ದ್ವಿತೀಯ ಪದವಿ ಪೂರ್ವ ಪರೀಕ್ಷೆ (ಪಿ.ಯು.ಸಿ)ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್‌ ಕೋರ್ಸ್ ಇನ್ ಲೈಬ್ರರಿ ಸೈನ್ಸನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ ಮೂರು ತಿಂಗಳ ಮಾನ್ಯತೆ ಪಡೆದ ಸಂಸ್ಥೆಯಿಂದ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ಒಂದು ವೇಳೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್‌ನಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿ.ಯು.ಸಿ ಪರೀಕ್ಷೆಯಲ್ಲಿ ಅಭ್ಯರ್ಥಿಯುಗಳಿಸಿದ ಅಂಕಗಳನ್ನು ಆಧರಿಸಿ, ಮೀಸಲಾತಿಯನ್ನು ಪರಿಗಣಿಸಿ ಅಭ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ವಯೋಮಿತಿ :

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ವಯಸ್ಸುನ್ನು ಪೂರೈಸಿರತಕ್ಕದ್ದು ಹಾಗೂ ಗರಿಷ್ಠ ವಯೋಮಿತಿಯು ಈ ಕೆಳಕಂಡಂತೆ ಇರತಕ್ಕದ್ದು.
ಸಾಮಾನ್ಯ ವರ್ಗದ ಅಭ್ಯರ್ಥಿಗಳು : 35
2A, 2B, 3A, 3B ಅಭ್ಯರ್ಥಿಗಳು  : 38
SC/ST ಪ್ರವರ್ಗ -1 ರ ಅಭ್ಯರ್ಥಿಗಳು : 40

Picsart 23 06 10 13 55 14 667

ಸಂಬಳದ ಪ್ಯಾಕೇಜ್ ಎಷ್ಟು?:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು  ರೂ. 15,196 ಹಾಗೂ ಕಾರ್ಮಿಕ ಇಲಾಖೆ ಕಾಲ ಕಾಲಕ್ಕೆ ನಿಗದಿಪಡಿಸುವ ವ್ಯತ್ಯಯವಾಗುವ ತುಟ್ಟಿ ಭತ್ಯೆಯನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಅಂಕಗಳನ್ನು ಪರಿಶೀಲಿಸಿ ಶಾರ್ಟ್ ಲಿಸ್ಟ್ ಅನ್ನು ತಯಾರಿಸಲಾಗುತ್ತದೆ( ಮೆರಿಟ್ ಆಧಾರದ ಮೇಲೆ) ನಂತರ ದಾಖಲೆಗಳ ಪರಿಶೀಲನೆ ಇರುತ್ತದೆ.

ಅರ್ಜಿ ಶುಲ್ಕ :

ರೂ. 40 ಗಳನ್ನು ಪಾವತಿಸಿ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ, ಕಲಬುರಗಿ ಕಛೇರಿಯಲ್ಲಿ ಪಡೆಯಬಹುದು.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಭರ್ತಿ ಮಾಡಿದ ಅರ್ಜಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಹಾಗೂ ಅರ್ಜಿಯ ಕವ‌ನ ಮೇಲೆ ಗ್ರಾಮ ಪಂಚಾಯತ ಹೆಸರನ್ನು ನಮೂದಿಸಿ ಕೊನೆಯ ದಿನಾಂಕ ದಂದು ಅಥವಾ ಒಳಗಾಗಿ ಸ್ವಯಂ ದೃಢೀಕರಿಸಿ ಉಪ ನಿರ್ದೇಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ ಕಲಬುರಗಿ ಕಛೇರಿಯಲ್ಲಿ ಸಲ್ಲಿಸತಕ್ಕದ್ದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  25-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  13-10-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *