Home » Karnataka Jobs » ಕರ್ನಾಟಕ ಆಹಾರ ಇಲಾಖೆಯಲ್ಲಿ ಉದ್ಯೋಗವಕಾಶ | Karnataka food department recruitment 2023

ಕರ್ನಾಟಕ ಆಹಾರ ಇಲಾಖೆಯಲ್ಲಿ ಉದ್ಯೋಗವಕಾಶ | Karnataka food department recruitment 2023

WhatsApp Group Join Now
Telegram Group Join Now
Picsart 23 07 18 09 51 34 668 scaled

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ KFCSC(ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ) 2023 ರ ನೇಮಕಾತಿಯ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ  ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  KFCSC ನೇಮಕಾತಿ (Recruitment) 2023 ರ ಅವಲೋಕನ  –

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಬೆಂಗಳೂರು ಇಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಈ ಲೇಖನದಲ್ಲಿ ರಾಜ್ಯ ಆಹಾರ ನಿಗಮದ ನೇಮಕಾತಿ 2023 ಕ್ಕಾಗಿ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಈಗಾಗಲೇ ಈ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು 22 ಜುಲೈ 2023 ಎಂದು ನಿಗದಿಪಡಿಸಲಾಗಿತ್ತು ಆದರೆ ಇದನ್ನು 31 ಜುಲೈ 2023 ಕ್ಕೆ  ವಿಸ್ತರಿಸಲಾಗಿದೆ.

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು KFCSC(ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ)
ಹುದ್ದೆಗಳ ಹೆಸರು ಸಹಾಯಕ ವ್ಯವಸ್ಥಾಪಕ, ಕಿರಿಯ ಸಹಾಯಕರು
ವರ್ಷ 2023
ಒಟ್ಟು ಹುದ್ದೆಗಳು  386
ಅಪ್ಲಿಕೇಶನ್ ವಿಧಾನ ಆನ್ಲೈನ್

ರಾಜ್ಯ ಆಹಾರ ನಿಗಮದ ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಸಹಾಯಕ ವ್ಯವಸ್ಥಾಪಕ : 10
ಹಿರಿಯ ಸಹಾಯಕರು : 57
ಹಿರಿಯ ಸಹಾಯಕರು (ಖಾತೆಗಳು) : 33
ಗುಣಮಟ್ಟದ ಇನ್ಸ್ಪೆಕ್ಟರ್ : 23
ಕಿರಿಯ ಸಹಾಯಕರು : 263
ಒಟ್ಟು ಹುದ್ದೆಗಳ ಸಂಖ್ಯೆ : 386
ಉದ್ಯೋಗ ಸ್ಥಳ : ಕರ್ನಾಟಕ

KFCSC ನೇಮಕಾತಿ – 2023ಕ್ಕೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಸಹಾಯಕ ವ್ಯವಸ್ಥಾಪಕರು : ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪದವಿ ಪರೀಕ್ಷೆಯಲ್ಲಿ ಕನಿಷ್ಟ ಶೇ.50% ಪಡೆದು ತೇರ್ಗಡೆಯಾಗಿರಬೇಕು. ಹಾಗು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿಯನ್ನು ಹಣಕಾಸು ಅಥವಾ ಮಾರ್ಕೆಟಿಂಗ್ ಅಥವಾ ಮಾನವ ಸಂಪನ್ಮೂಲ ವಿಶೇಷತೆಯೊಂದಿಗೆ ಪಡೆದಿರಬೇಕು.

ಗುಣಮಟ್ಟ ನಿರೀಕ್ಷಕರು: ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಕೃಷಿ ವಿಜ್ಞಾನ ಪದವಿಯನ್ನು ಸಹಕಾರ | ಕೃಷಿ ಮಾರುಕಟ್ಟೆ ವಿಶೇಷತೆಯೊಂದಿಗೆ ಪಡೆದಿರಬೇಕು ಅಥವಾ ತತ್ಸಮಾನ ಅರ್ಹತೆಯನ್ನು ಪಡೆದಿರಬೇಕು.

ಹಿರಿಯ ಸಹಾಯಕರು (ಲೆಕ್ಕ) : ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲಟ್ಟ ವಿಶ್ವವಿದ್ಯಾಲಯದಿಂದ ವಾಣಿಜ್ಯ ಪದವಿಯನ್ನು ಪಡೆದಿರಬೇಕು ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು

ಹಿರಿಯ ಸಹಾಯಕರು: ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ಆರ್ಹತೆಯನ್ನು ಹೊಂದಿರಬೇಕು.

ಕಿರಿಯ ಸಹಾಯಕರು: ಅಭ್ಯರ್ಥಿಯು ಪಿಯುಸಿ ಅಥವಾ ತತ್ಸಮಾನ ಅರ್ಹತೆಯನ್ನು ಪಡೆದಿರಬೇಕು.

ವಯೋಮಿತಿ :

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷಗಳನ್ನು ಮೀರಿರಬಾರದು.
SC/ST ಗಾಗಿ 5 ವರ್ಷಗಳು, ಪ್ರವರ್ಗ -2A/2B/3A & 3B ಗಾಗಿ 3 ವರ್ಷಗಳ ವಯಸ್ಸಿನ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

ಸಂಬಳದ ಪ್ಯಾಕೇಜ್ ಎಷ್ಟು?:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.21400-83900/- ಗಳನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಶುಲ್ಕ :

PWD & Ex-Servicemen ಅಭ್ಯರ್ಥಿಗಳು: ರೂ.250/-
SC/ST ಮತ್ತು Cat-I ಅಭ್ಯರ್ಥಿಗಳು: ರೂ.750/-
ಸಾಮಾನ್ಯ ಮತ್ತು ಇತರೆ ವರ್ಗದ ಅಭ್ಯರ್ಥಿಗಳು: ರೂ.1000/-
ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಚೇರಿಗಳಲ್ಲಿ ಮಾತ್ರ ಪಾವತಿಸಬೇಕು.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  23-June-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31-July-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *