Home » Karnataka Jobs » KMF ನೇಮಕಾತಿ 2023 : ಕರ್ನಾಟಕ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ

KMF ನೇಮಕಾತಿ 2023 : ಕರ್ನಾಟಕ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ

WhatsApp Group Join Now
Telegram Group Join Now
Picsart 23 05 28 08 49 45 698 scaled

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ.  ಈ ಲೇಖನದಲ್ಲಿ KMF TUMUL (ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ.,) – 2023 ರ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

– KMF ತುಮುಲ್ ನೇಮಕಾತಿ 2023(KMF TUMUL Recruitment) ರ ಅವಲೋಕನ –

ತುಮಕೂರು: ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಮಲ್ಲಸಂದ್ರ ಇದರಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿನ 219 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್‌ ಮುಖಾಂತರ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಸಿಒ 130 ಸಿಸಿಬಿ 2022 04,11,2022 ರನ್ವಯ ಆನುಮೋದಿಸಿದಂತೆ ನೇರ ನೇಮಕಾತಿಗೆ ಪ್ರಕಟಣೆ ಹೊರಡಿಸಿರುವ ಹುದ್ದೆಗಳ ವಿವರ, ಮೀಸಲಾತಿ ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ ಇತ್ಯಾದಿ ವಿವರಗಳು ಈ ಕೆಳಕಂಡಂತೆ ಇರುತ್ತವೆ.

TUMUL ಹುದ್ದೆಗೆ ಈಗಾಗಲೇ ಅಧಿಸೂಚನೆಯನ್ನು ಹೊರಡಿಸಲಾಗಿತ್ತು ಆದರೆ ಅದನ್ನು ರದ್ದುಪಡಿಸಿ, ತಿದ್ದುಪಡಿ ಮಾಡಿ ಪ್ರಸ್ತುತ ಪ್ರಕಟಣೆಯನ್ನು ಹೊರಡಿಸಲಾಗಿದೆ. ಪ್ರಸ್ತುತ ಪ್ರಕಟಣೆಯ ಅನುಗುಣವಾಗಿ ಹುದ್ದೆಯ ಸಂಪೂರ್ಣ ವಿವರ ಕೆಳಗಿನಂತಿದೆ :

ಹುದ್ದೆಗಳ ಮಾಹಿತಿ ಕೆಳಗಿನಂತಿದೆ: 

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು KMF TUMUL (ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ.,)
ಹುದ್ದೆಗಳ ಹೆಸರು ಸಹಾಯಕ ಮ್ಯಾನೇಜರ್, ಜೂನಿಯರ್ ಟೆಕ್ನಿಷಿಯನ್
ವರ್ಷ 2023
ಒಟ್ಟು ಹುದ್ದೆಗಳು  219 ಪೋಸ್ಟ್ ಗಳು
ಅಪ್ಲಿಕೇಶನ್ ವಿಧಾನ ಆನ್ಲೈನ್

TUMUL ನೇಮಕಾತಿ 2023 ಖಾಲಿ ಹುದ್ದೆಗಳ ವಿವರ :

ಒಟ್ಟು 219 ಖಾಲಿ ಹುದ್ದೆಗಳಿವೆ

ಸಹಾಯಕ ವ್ಯವಸ್ಥಾಪಕ : 28
ವೈದ್ಯಕೀಯ ಅಧಿಕಾರಿ : 1
ಆಡಳಿತ ಅಧಿಕಾರಿ : 1
ಖರೀದಿ/ಸ್ಟೋರ್ಕೀಪರ್ : 3
MIS/ಸಿಸ್ಟಮ್ ಅಧಿಕಾರಿ : 1
ಲೆಕ್ಕಪತ್ರ ಅಧಿಕಾರಿ : 2
ಮಾರ್ಕೆಟಿಂಗ್ ಅಧಿಕಾರಿ : 3
ತಾಂತ್ರಿಕ ಅಧಿಕಾರಿ : 14
ತಂತ್ರಜ್ಞ : 1
ವಿಸ್ತರಣಾಧಿಕಾರಿ : 22
MIS ಸಹಾಯಕ ಗ್ರೇಡ್-I : 2
ಆಡಳಿತ ಸಹಾಯಕ ಗ್ರೇಡ್-2 : 13
ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್-2 : 12
ಮಾರ್ಕೆಟಿಂಗ್ ಸಹಾಯಕ ಗ್ರೇಡ್-2 : 18
ಖರೀದಿ ಸಹಾಯಕ ಗ್ರೇಡ್-2 : 6
ರಸಾಯನಶಾಸ್ತ್ರಜ್ಞ ಗ್ರೇಡ್-2 : 4
ಜೂನಿಯರ್ ಸಿಸ್ಟಮ್ ಆಪರೇಟರ್ : 10
ಕೋ-ಆರ್ಡಿನೇಟರ್ (ರಕ್ಷಣೆ) : 2
ದೂರವಾಣಿ ನಿರ್ವಾಹಕ : 2
ಜೂನಿಯರ್ ತಂತ್ರಜ್ಞ : 64
ಚಾಲಕರು : 8
ಲ್ಯಾಬ್ ಸಹಾಯಕ : 2

TUMUL ನೇಮಕಾತಿ – 2023 ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಈ  ನೇಮಕಾತಿಗೆ ಅರ್ಜಿ ಸಲ್ಲಿಸುವ ಆಸಕ್ತಿಯುಳ್ಳ ಆಕಾಂಕ್ಷಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ  10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ / ಯಾವುದೇ ಪದವಿ / M.Com/ MBA/MSc/ BE/BTech ಪೂರ್ಣಗೊಳಿಸಿರಬೇಕು.  ಯಾವ ಹುದ್ದೆಗೆ ಯಾವ ನಿರ್ದಿಷ್ಟ ವಿದ್ಯಾಭ್ಯಾಸವನ್ನು ಹೊಂದಿರಬೇಕು ಎಂಬುವುದರ ಸಂಪೂರ್ಣ ವಿವರವನ್ನು ಕೆಳಗಿನ ಅಧಿಸೂಚನೆಯ ಲಿಂಕ್ ನಲ್ಲಿ ನೀಡಲಾಗಿದೆ ಅದನ್ನು ಪರಿಶೀಲಿಸಬಹುದು.

ವಯೋಮಿತಿ :

ಅರ್ಜಿದಾರರ ವಯಸ್ಸಿನ ಮಿತಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಟ 35 ಮೀರಿರಬಾರದು.
ವಯೋಮಿತಿ ಸಡಿಲಿಕೆ :
SC/ST ಅಭ್ಯರ್ಥಿಗಳು: 05 ವರ್ಷಗಳು
Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ವೇತನ ಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 21,400/- ರಿಂದ 52,650/- ಗಳನ್ನು ನೀಡಲಾಗುತ್ತದೆ.

TUMUL ನೇಮಕಾತಿಗೆ ಅರ್ಜಿ ಶುಲ್ಕ :

SC/ST/ ಪ್ರವರ್ಗ 1  ಅಭ್ಯರ್ಥಿಗಳಿಗೆ : ರೂ.500/-
ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.1000/-
ಬ್ಯಾಂಕ್ ಶುಲ್ಕ ಪ್ರತ್ಯೇಕವಾಗಿ ಇರುತ್ತದೆ.

TUMUL ಆಯ್ಕೆ ಪ್ರಕ್ರಿಯೆ :

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಆಕಾಂಕ್ಷೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ( Interview) ನಡೆಸುವುದರ  ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ, ಅದಕ್ಕಾಗಿ ಇಲ್ಲಿ  ಕ್ಲಿಕ್ ಮಾಡಿ.

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಅನ್ವಯಿಸಿದ್ದಲ್ಲಿ ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  23-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  06-06-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

   ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

3 thoughts on “KMF ನೇಮಕಾತಿ 2023 : ಕರ್ನಾಟಕ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ

  1. Chetan Kumar D
    S/o davaraj G
    Kolar

    Sub: I need job in Kolar dairy

    Hello sir I am chethan heare to inform you that I am interested to join any job in the Kolar milk dairy, my qualifications are degre geraguated, customer knowledge (6months sertefeket) thanking you

    Your’s faithfully
    (Chethan)

Leave a Reply

Your email address will not be published. Required fields are marked *