Home » Karnataka Jobs » KPSC Recruitment 2023: ವಾಣಿಜ್ಯ ತೆರಿಗೆ ನಿರೀಕ್ಷಕರ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಅಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್

KPSC Recruitment 2023: ವಾಣಿಜ್ಯ ತೆರಿಗೆ ನಿರೀಕ್ಷಕರ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಅಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್

WhatsApp Group Join Now
Telegram Group Join Now
WhatsApp Image 2023 09 07 at 07.27.18

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ KPSC(ಕರ್ನಾಟಕ ಲೋಕ ಸೇವಾ ಆಯೋಗ) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ(Recruitment) ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.  ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  KPSC ನೇಮಕಾತಿ(Recruitment) 2023 ರ ಅವಲೋಕನ  –

ಆಯೋಗವು ಕರ್ನಾಟಕ ನಾಗರೀಕ ಸೇವೆಗಳು, (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2011ರ ನಿಯಮಗಳು ತಿದ್ದುಪಡಿ  ನಿಯಮ 2022ರನ್ವಯ ಈ  ಉಳಿಕೆ ಮೂಲ ವೃಂದದ ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ On-line ಮೂಲಕ ಅರ್ಜಿಗಳನ್ನು  ಆಹ್ವಾನಿಸಿದೆ. ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ (Commercial Taxes Department) ಖಾಲಿ ಇರುವ 230 ವಾಣಿಜ್ಯ ತೆರಿಗೆ ಪರಿವೀಕ್ಷಕರ (Commercial Tax Officer Recruitment) ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು KPSC
ಹುದ್ದೆಗಳ ಹೆಸರು ವಾಣಿಜ್ಯ ತೆರಿಗೆ ಪರಿವೀಕ್ಷಕರ
ವರ್ಷ 2023
ಒಟ್ಟು ಹುದ್ದೆಗಳು  230
ಅಪ್ಲಿಕೇಶನ್ ವಿಧಾನ online

KPSC ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಹುದ್ದೆಯ ಹೆಸರು : ವಾಣಿಜ್ಯ ತೆರಿಗೆ ಪರಿವೀಕ್ಷಕರ
ಒಟ್ಟು ಹುದ್ದೆಗಳ ಸಂಖ್ಯೆ : 230
ಉದ್ಯೋಗ ಸ್ಥಳ : ಕರ್ನಾಟಕ

KPSC ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಅರ್ಥಶಾಸ್ತ್ರ ಅಥವಾ ಗಣಿತವನ್ನು ಒಂದು ವಿಷಯವಾಗಿ ಹೊಂದಿರುವ ಭಾರತದಲ್ಲಿ ಕಾನೂನಿನಿಂದ ಸ್ಥಾಪಿಸಲಾದ ವಿಶ್ವವಿದ್ಯಾಲಯದ ಪದವಿಯನ್ನು ಪಡೆದಿರಬೇಕು ಅಥವಾ ವಾಣಿಜ್ಯದಲ್ಲಿ ಅಥವಾ ಅಂತಹ ಪದವಿಗೆ ಸಮನಾಗಿರುತ್ತದೆ ಎಂದು ಸರ್ಕಾರವು ಘೋಷಿಸಿದ ಅರ್ಹತೆಯನ್ನು ಹೊಂದಿರಬೇಕು.

ವಯೋಮಿತಿ :

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷಗಳನ್ನು ಮೀರಿರಬಾರದು .
ವಯಸ್ಸಿನ ಸಡಿಲಿಕೆ :
ಪ್ರವರ್ಗ 2 ಎ, 2ಬಿ, 3ಎ, 3ಬಿ ವರ್ಗದ ವಿದ್ಯಾರ್ಥಿಗಳಿಗೆ : 3 ವರ್ಷ.
ಪರಿಶಿಷ್ಟ ಜಾತಿ ಮತ್ತು ಪಂಗಡ, ಪ್ರವರ್ಗ 1ಅಭ್ಯರ್ಥಿಗಳು : 5 ವರ್ಷ

ಸಂಬಳದ ಪ್ಯಾಕೇಜ್ ಎಷ್ಟು?:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.33,450 ರಿಂದ 62,600/- ಗಳನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಕನ್ನಡ ಭಾಷಾ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ

ಅರ್ಜಿ ಶುಲ್ಕ:

ಪ್ರವರ್ಗ 2 ಎ, 3 ಎ, 3 ಬಿ ಅಭ್ಯರ್ಥಿಗಳಿಗೆ :  300 ರೂ
ಸಾಮಾನ್ಯ ಅಭ್ಯರ್ಥಿಗಳಿಗೆ: ರೂ.600
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ಪಾವತಿಯಿಂದ ವಿನಾಯ್ತಿ ನೀಡಲಾಗಿದೆ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  1-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  30-09-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್
ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *