Home » Latest Job News » ಸಾರಿಗೆ ಇಲಾಖೆಯಲ್ಲಿ ಮೋಟರ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸಾರಿಗೆ ಇಲಾಖೆಯಲ್ಲಿ ಮೋಟರ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

WhatsApp Group Join Now
Telegram Group Join Now
KPSC Transport Department Recruitment 2024

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಕೆ ಪಿ ಎಸ್ ಸಿ ನೇಮಕಾತಿಯ(KPSC Recruitment)  ಕುರಿತು ತಿಳಿಸಲಾಗಿದೆ. ಈ ನೇಮಕಾತಿಯಲ್ಲಿ 76 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ

– ಕೆಪಿಎಸ್‌ಸಿ ಸಾರಿಗೆ ಇಲಾಖೆ ನೇಮಕಾತಿ  2024 ರ(KPSC Transport Department Recruitment 2024) ಅವಲೋಕನ –

ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್‌ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಆನ್‌ಲೈನ್ (Online) ಮುಖಾಂತರ ಅರ್ಜಿಗಳನ್ನು ಹಾಕುವ ಅವಕಾಶವಿದೆ. ಅಧಿಸೂಚನೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ದಯವಿಟ್ಟು ಓದಿ, ಪಠ್ಯಕ್ರಮ, ವಯಸ್ಸಿನ ಮಿತಿ, ವಿದ್ಯಾರ್ಹತೆ, ಸಂಬಳ ಮತ್ತು ಎಲ್ಲಾ ಇತರ ಮಾಹಿತಿಯ ಸಂಪೂರ್ಣ ವಿವರಕ್ಕಾಗಿ ಉದ್ಯೋಗ ಅಧಿಸೂಚನೆಯ ನೇರವಾದ ಲಿಂಕನ್ನು ಕೆಳಗಡೆ ನೀಡಲಾಗಿದೆ. ಅಷ್ಟೇ ಅಲ್ಲದೆ ಈ ಹುದ್ದೆಯ ಕುರಿತಾದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ :

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಗಳ ಹೆಸರು ಮೋಟಾರು ವಾಹನ ನಿರೀಕ್ಷಕರು
ವರ್ಷ 2024
ಒಟ್ಟು ಹುದ್ದೆಗಳು  76
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

Motor vehicle inspector recruitment:

ಖಾಲಿ ಹುದ್ದೆಗಳ ವಿವರ :
ಹುದ್ದೆಯ ಹೆಸರು: ಮೋಟಾರು ವಾಹನ ನಿರೀಕ್ಷಕರು (ಉಳಿಕೆ ಮೂಲ ವೃಂದ) : 70
ಮೋಟಾರು ವಾಹನ ನಿರೀಕ್ಷಕರು (ಹೈದರಾಬಾದ್ ಕರ್ನಾಟಕ) : 6
ಒಟ್ಟು ಹುದ್ದೆಗಳ  ಸಂಖ್ಯೆ: 76
ಉದ್ಯೋಗ ಸ್ಥಳ:  ಕರ್ನಾಟಕ

ವಿದ್ಯಾರ್ಹತೆ:

ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
ಮೂರು ವರ್ಷಗಳ ಡಿಪ್ಲೊಮಾ ಇನ್ ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಇಂಜಿನಿಯರ್ ಮುಗಿಸಿರಬೇಕು/ ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಮೆಕ್ಯಾನಿಕಲ್ ಇಂಜಿನಿಯರ್ ಪದವಿ ಹೊಂದಿರಬೇಕು.
ಲಘು ಮೋಟಾರು ವಾಹನ ಮತ್ತು ಮೋಟಾರು ಸೈಕಲ್ (ಗಿಯರ್) ವಾಹನ ಚಾಲನಾ ಪರವಾನಿಗೆ(Driving license) ಹೊಂದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ ವಯೋಮಿತಿ 35 ವರ್ಷಗಳನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ :

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು : 40 ವರ್ಷಗಳು

ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 38 ವರ್ಷಗಳು

ಸಾಮಾನ್ಯ ವರ್ಗದ ಅಭ್ಯರ್ಥಿಗಳು : 35 ವರ್ಷಗಳು

Picsart 23 06 10 13 55 14 667

ಸಂಬಳದ ಪ್ಯಾಕೇಜ್ ಎಷ್ಟು ?

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು  ರೂ. 33,450 ರಿಂದ ರೂ. 62,600 ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಸ್ಪರ್ಧಾತ್ಮಕ ಪರೀಕ್ಷೆ

ಅರ್ಜಿ ಶುಲ್ಕ :

SC/ST/ Cat-I ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಸಾಮಾನ್ಯ/OBC ಅಭ್ಯರ್ಥಿಗಳು: ರೂ.600/-
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು : ರೂ. 300
ಮಾಜಿ ಸೈನಿಕ ಅಭ್ಯರ್ಥಿಗಳು : ರೂ. 50

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದ್ದಲ್ಲಿ)

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  22-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  21-05-2024

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಶೀಘ್ರದಲ್ಲೇ ಪ್ರಕಟಿಸಲಾಗುವುದು
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ.

WhatsApp Group Join Now
Telegram Group Join Now

About

Editor | M.Sc CS

5 thoughts on “ಸಾರಿಗೆ ಇಲಾಖೆಯಲ್ಲಿ ಮೋಟರ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

  1. ಅಂಗನವಾಡಿ ಉದೋಗ ಮತ್ತು ಅದಕ್ಕೆ ವಯೋಮಿತಿ
    ಹೆಷ್ಟು ಮತ್ತೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ನಲ್ಲಿ ಅವಕಾಶಗಳು

Leave a Reply

Your email address will not be published. Required fields are marked *