Home » Karnataka Jobs » ಪ್ರಥಮ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಪ್ರಥಮ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಕಂಪ್ಲೀಟ್ ಮಾಹಿತಿ

WhatsApp Group Join Now
Telegram Group Join Now
IMG 20240317 WA0002

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿಯ(KUWSDB Recruitment)  ಕುರಿತು ತಿಳಿಸಲಾಗಿದೆ. ಈ ನೇಮಕಾತಿಯಲ್ಲಿ 64 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿ 2024 ರ (KUWSDB Recruitment 2024) ಅವಲೋಕನ :

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿಎಲ್) ಹಾಗೂ 14 ಸಿ’ ಗ್ರೂಸ್ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಅಧಿಸೂಚನೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ದಯವಿಟ್ಟು ಓದಿ, ಪಠ್ಯಕ್ರಮ, ವಯಸ್ಸಿನ ಮಿತಿ, ವಿದ್ಯಾರ್ಹತೆ, ಸಂಬಳ ಮತ್ತು ಎಲ್ಲಾ ಇತರ ಮಾಹಿತಿಯ ಸಂಪೂರ್ಣ ವಿವರಕ್ಕಾಗಿ ಉದ್ಯೋಗ ಅಧಿಸೂಚನೆಯ ನೇರವಾದ ಲಿಂಕನ್ನು ಕೆಳಗಡೆ ನೀಡಲಾಗಿದೆ. ಅಷ್ಟೇ ಅಲ್ಲದೆ ಈ ಹುದ್ದೆಯ ಕುರಿತಾದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ :

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಹುದ್ದೆಗಳ ಹೆಸರು ಸಹಾಯಕ ಇಂಜಿನಿಯರ್ (Assistant Engineer), First Division Accounts Assistant
ವರ್ಷ 2024
ಒಟ್ಟು ಹುದ್ದೆಗಳು  64
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

KUWSDB ನೇಮಕಾತಿಯ ಹುದ್ದೆಗಳ ವಿವರ:

ಖಾಲಿ ಹುದ್ದೆಗಳ ವಿವರ :
ಹುದ್ದೆಯ ಹೆಸರು: ಸಹಾಯಕ ಇಂಜಿನಿಯರ್ (ಸಿವಿಲ್) : 50
ಮೊದಲ ವಿಭಾಗದ ಖಾತೆ ಸಹಾಯಕ (ಗುಂಪು-ಸಿ) : 14
ಒಟ್ಟು ಹುದ್ದೆಗಳ  ಸಂಖ್ಯೆ: 64
ಉದ್ಯೋಗ ಸ್ಥಳ:  ಕರ್ನಾಟಕ

ವಿದ್ಯಾರ್ಹತೆ:

ಸಹಾಯಕ ಇಂಜಿನಿಯರ್ (ಸಿವಿಲ್): ಸಿವಿಲ್‌ನಲ್ಲಿ ಬಿಇ(B.E)ಅಥವಾ ಬಿ.ಟೆಕ್

ಮೊದಲ ವಿಭಾಗದ ಖಾತೆ ಸಹಾಯಕ (ಗುಂಪು-ಸಿ): ಬಿ.ಕಾಂ

ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ ವಯೋಮಿತಿ 35 ವರ್ಷಗಳನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ :

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು : 40 ವರ್ಷಗಳು

ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 38 ವರ್ಷಗಳು

Picsart 23 06 10 13 55 14 667

ಸಂಬಳದ ಪ್ಯಾಕೇಜ್ ಎಷ್ಟು ?

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು  ರೂ.27650-83900/- ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಶುಲ್ಕ :

SC/ST/ ಪ್ರವರ್ಗ -I/ಮಾಜಿ ಸೈನಿಕರು/ಮಾನಸಿಕ ವಿಕಲಚೇತನ ಅಭ್ಯರ್ಥಿಗಳು : ರೂ.500/-
ಸಾಮಾನ್ಯ/ಕ್ಯಾಟ್-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.750/-

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದ್ದಲ್ಲಿ)

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  11-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  21-03-2024

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ.

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *