Home » Trending News » Loan Interest: ರೈತರ ಸಾಲದ ಬಡ್ಡಿ ಮನ್ನಾ ಪ್ರಯೋಜನ ಪಡೆಯಲು ಇಂದೇ ಕೊನೆಯ ದಿನ

Loan Interest: ರೈತರ ಸಾಲದ ಬಡ್ಡಿ ಮನ್ನಾ ಪ್ರಯೋಜನ ಪಡೆಯಲು ಇಂದೇ ಕೊನೆಯ ದಿನ

WhatsApp Group Join Now
Telegram Group Join Now
loan interest

ರೈತರು ರಾಜ್ಯದ ಸಹಕಾರ ಸಂಘಗಳು ಅಂದರೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ(loan) ಪಡೆದು 31.12.2023ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು 29-02-2024 ರೊಳಗೆ ಸಂಬಂಧಪಟ್ಟ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಗೆ ಪೂರ್ತಿಯಾಗಿ ಮರುಪಾವತಿಸಿದಲ್ಲಿ ಈ ಮೊತ್ತಕ್ಕೆ ಬಾಕಿಯಿರುವ ಬಡ್ಡಿಯನ್ನು ಮನ್ನಾ ಮಾಡಲು ಆದೇಶಿಸಿತ್ತು. ಜೊತೆಗೆ ಈ ರೀತಿ ಮನ್ನಾ ಮಾಡಿದ ಬಡ್ಡಿ(interest) ಮೊಬಲಗನ್ನು ಸಹಕಾರ ಸಂಘಗಳಿಗೆ ಸರ್ಕಾರ ಭರ್ತಿ ಮಾಡಲು ಕೆಲವು ಷರತ್ತಿಗೊಳಪಟ್ಟು ಮಂಜೂರಾತಿ ನೀಡಿ ಆದೇಶಿಸಲಾಗಿತ್ತು.

ಈ ಮೊತ್ತಕ್ಕೆ ಬಾಕಿಯಿರುವ ಬಡ್ಡಿಯನ್ನು ಮನ್ನಾ ಮಾಡಲು ಮತ್ತು ಈ ರೀತಿ ಮನ್ನಾ ಮಾಡಿದ ಬಡ್ಡಿ ಮೊಬಲಗನ್ನು ಸಹಕಾರ ಸಂಘಗಳಿಗೆ ಸರ್ಕಾರವು ಭರ್ತಿ ಮಾಡಲು ಕೆಲವು ಷರತ್ತಿಗೊಳಪಟ್ಟು ಮಂಜೂರಾತಿ ನೀಡಿ ಸಹಕಾರ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

ಬರಗಾಲ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರೈತರ ಅನುಕೂಲಕ್ಕಾಗಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಯೋಜನೆಯಡಿ ಸುಸ್ತಿ ಸಾಲಗಳ ಮರುಪಾವತಿ ಅವಧಿಯನ್ನು ದಿನಾಂಕ: 31-03-2024 ರವರೆಗೆ ವಿಸ್ತರಿಸುವಂತೆ ನಿಬಂಧಕರು ಕೋರಿರುತ್ತಾರೆ. ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಕಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರದ ಆದೇಶ ಸಂಖ್ಯೆ:ಸಿಒ 291 ಸಿಎಲ್‌ಎಸ್ 2023, ದಿನಾಂಕ: 20-01-2024 ರ ಆದೇಶದಲ್ಲಿ ಬಡ್ಡಿಮನ್ನಾ ಮಾಡುವ ಯೋಜನೆಯಲ್ಲಿ ಬಡ್ಡಿ ಮನ್ನಾ ಸೌಲಭ್ಯವನ್ನು ಪಡೆಯಲು ರಾಜ್ಯದ ರೈತರು ಸಹಕಾರ ಸಂಘಗಳು ಅಂದರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು,  ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು ದಿನಾಂಕ: 31-12-2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು ಪಾವತಿಸಲು ನಿಗದಿಪಡಿಸಿದ ದಿನಾಂಕ:29-02-2024ನ್ನು ದಿನಾಂಕ: 31-03-2024 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *