Home » Central Jobs » ಹೊಸ ನೇಮಕಾತಿ ಅಧಿಸೂನಚನೆ ಪ್ರಕಟ | National Horticulture Board Recruitment 2024 Apply Online @nhb.gov.in

ಹೊಸ ನೇಮಕಾತಿ ಅಧಿಸೂನಚನೆ ಪ್ರಕಟ | National Horticulture Board Recruitment 2024 Apply Online @nhb.gov.in

WhatsApp Group Join Now
Telegram Group Join Now
NHB recruitment

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ರಾಷ್ಟೀಯ ತೋಟಗಾರಿಕೆ ಮಂಡಳಿ(National Horticulture Board) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ

-ರಾಷ್ಟೀಯ ತೋಟಗಾರಿಕೆ ಮಂಡಳಿ ನೇಮಕಾತಿ (Recruitment) 2023 ರ ಅವಲೋಕನ-

ರಾಷ್ಟ್ರೀಯ ತೋಟಗಾರಿಕೆ ಮಂಡಳಿ (NHB) ಪ್ರಸ್ತುತ 44 ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡುತ್ತಿದೆ. ಉಪ ನಿರ್ದೇಶಕರು (ಗುಂಪು A) ಮತ್ತು ಹಿರಿಯ ತೋಟಗಾರಿಕೆ ಅಧಿಕಾರಿಗಳ (ಗುಂಪು ಬಿ) ಹುದ್ದೆಗಳಿಗೆ ಪ್ರಕಟಣೆಯನ್ನು ಪ್ರಕಟಿಸಲಾಗಿದೆ.  ಅಪ್ಲಿಕೇಶನ್ ವಿಂಡೋ ಡಿಸೆಂಬರ್ 16, 2023 ರಿಂದ ಜನವರಿ 5, 2024 ರವರೆಗೆ ತೆರೆದಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ವೆಬ್‌ಸೈಟ್ https://exams.nta.ac.in/NHB/ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ರಾಷ್ಟ್ರೀಯ ತೋಟಗಾರಿಕೆ ಮಂಡಳಿ(National Horticulture Board. NHB )
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು
ವರ್ಷ 2023
ಒಟ್ಟು ಹುದ್ದೆಗಳು  44
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

 NHB ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಪೋಸ್ಟಗಳು :

ಉಪ ನಿರ್ದೇಶಕರು (ಗುಂಪು A) – 19 ಹುದ್ದೆಗಳು

ಹಿರಿಯ ತೋಟಗಾರಿಕೆ ಅಧಿಕಾರಿಗಳ  (ಗುಂಪು ಬಿ) – 25 ಹುದ್ದೆಗಳು.

ಒಟ್ಟು ಹುದ್ದೆಗಳು: 44  ಹುದ್ದೆಗಳು

ಉದ್ಯೋಗ ಸ್ಥಳ : ಭಾರತದ್ಯಾದಂತ.

NHB  ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :

ಉಪ ನಿರ್ದೇಶಕರಿಗೆ – ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ತೋಟಗಾರಿಕೆ/ಕೃಷಿ/ Post – Harvest technology/ ಕೃಷಿ ಅರ್ಥಶಾಸ್ತ್ರ/ ಕೃಷಿ ಇಂಜಿನಿಯರಿಂಗ್/ Post- Harvest Management /ಆಹಾರ ತಂತ್ರಜ್ಞಾನ/ಆಹಾರ ವಿಜ್ಞಾನದಲ್ಲಿ ಪದವೀಧರರಾಗಿರಬೇಕು.

ಹಿರಿಯ ತೋಟಗಾರಿಕಾ ಅಧಿಕಾರಿಗೆ – ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಕೃಷಿ/ತೋಟಗಾರಿಕೆ/ಆಹಾರ ತಂತ್ರಜ್ಞಾನ/Post-harvest Technology/ಕೃಷಿ ಅರ್ಥಶಾಸ್ತ್ರ/ಕೃಷಿ ಇಂಜಿನಿಯರಿಂಗ್/ಆಹಾರ ವಿಜ್ಞಾನಗಳಲ್ಲಿ ಪದವಿ ಪಡೆದಿರಬೇಕು, ಹಾಗೆಯೇ ಅದೇ ಕ್ಷೇತ್ರದಲ್ಲಿ ಸ್ನಾತಕೋತ್ತರ (Masters degree ) ಪದವೀಧರರಾಗಿರಬೇಕು.

ವಯೋಮಿತಿ:

ಈ ನೇಮಕಾತಿ ಯ ಅನುಗುಣವಾಗಿ ಅರ್ಜಿ ಸಲ್ಲಿಸಲು ಉಪ ನಿರ್ದೇಶಕರ ಹುದ್ದೆಗೆ ಅಭ್ಯರ್ಥಿಗಳು ಗರಿಷ್ಠ 40 ವರ್ಷ ಮೀರಬಾರದು ಮತ್ತು ಹಿರಿಯ ತೋಟಗಾರಿಕಾ ಅಧಿಕಾರಿಗೆ 30 ವರ್ಷ ಮೀರಬಾರದು.

Picsart 23 06 10 13 55 14 667

ಸಂಬಳ ಪ್ಯಾಕೇಜ್ ಎಷ್ಟು?

ಉಪನಿರ್ದೇಶಕರ ವೇತನ ಶ್ರೇಣಿಯು  ರೂ.56,100-1,77,500 ಆಗಿರುತ್ತದೆ , ಮತ್ತು ಹಿರಿಯ ತೋಟಗಾರಿಕೆ ಅಧಿಕಾರಿಗಳಿಗೆ ವೇತನ ಶ್ರೇಣಿಯು ರೂ.35,400-1,12,400 ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆಯ ನಂತರ ಸಂದರ್ಶನವನ್ನು ಒಳಗೊಂಡಿರುತ್ತದೆ. ಲಿಖಿತ ಪರೀಕ್ಷೆಯನ್ನು NTA ನಡೆಸುತ್ತದೆ.

ಅರ್ಜಿ ಶುಲ್ಕ :

ಸಾಮಾನ್ಯ/ ಕಾಯ್ದಿರಿಸದ/OBC/EWS ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ : ರೂ.1000

SC/ST ವರ್ಗಗಳ ಅಭ್ಯರ್ಥಿಗಳಿಗೆ : ರೂ.500 ಶುಲ್ಕ

PwBD ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕದ ಪಾವತಿಯಿಂದ ಇರುವುದಿಲ್ಲ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದ್ದಲ್ಲಿ)

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  16-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  05-12-2024

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ.

WhatsApp Group Join Now
Telegram Group Join Now

About

Editor | M.Sc CS

2 thoughts on “ಹೊಸ ನೇಮಕಾತಿ ಅಧಿಸೂನಚನೆ ಪ್ರಕಟ | National Horticulture Board Recruitment 2024 Apply Online @nhb.gov.in

  1. This page is phenomenal. The splendid substance exhibits the essayist’s commitment. I’m overwhelmed and expect more such unfathomable posts.

Leave a Reply

Your email address will not be published. Required fields are marked *