Home » Karnataka Jobs » Raddi Bank Recruitment – ರಡ್ಡಿ ಸಹಕಾರ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

Raddi Bank Recruitment – ರಡ್ಡಿ ಸಹಕಾರ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now
WhatsApp Image 2023 08 12 at 13.19.00

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ರಡ್ಡಿ ಸಹಕಾರ ಬ್ಯಾಂಕ್ ನಿಯಮಿತ, ದಾರವಾಡ ನೇಮಕಾತಿ(Recruitment) 2023 ರ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ ಬ್ಯಾಂಕ್ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  ರಡ್ಡಿ ಸಹಕಾರ ಬ್ಯಾಂಕ್(Raddi Bank Dharwad) ನೇಮಕಾತಿ (Recruitment) 2023 ರ ಅವಲೋಕನ  –

ಧಾರವಾಡ ಜಿಲ್ಲೆಯ ರಡ್ಡಿ ಸಹಕಾರ ಬ್ಯಾಂಕ್ ನಿಯಮಿತ(THE RADDI SAHAKARA BANK NIYAMITHA)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಿರಿಯ ಸಹಾಯಕ, ಸೇವಕ, ಜವಾನ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ರಡ್ಡಿ ಸಹಕಾರ ಬ್ಯಾಂಕ್ ನಿಯಮಿತ, ಧಾರವಾಡ
ಹುದ್ದೆಗಳ ಹೆಸರು ಕಿರಿಯ ಸಹಾಯಕ, ಸೇವಕ/ ಜವಾನ
ವರ್ಷ 2023
ಒಟ್ಟು ಹುದ್ದೆಗಳು  34
ಅಪ್ಲಿಕೇಶನ್ ವಿಧಾನ ಆನ್ಲೈನ್

ರಡ್ಡಿ ಸಹಕಾರ ಬ್ಯಾಂಕ್ ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಕಿರಿಯ ಸಹಾಯಕ : 24
ಸೇವಕ/ ಜವಾನ : 10
ಒಟ್ಟು ಹುದ್ದೆಗಳ ಸಂಖ್ಯೆ : 34
ಉದ್ಯೋಗ ಸ್ಥಳ : ಧಾರವಾಡ-ಕರ್ನಾಟಕ

ರಡ್ಡಿ ಸಹಕಾರ ಬ್ಯಾಂಕ್ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಕಿರಿಯ ಸಹಾಯಕ ಹುದ್ದೆಗೆ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಬಿಎ, ಬಿಕಾಂ, ಬಿಎಸ್ಸಿ, ಬಿಸಿಎ, ತತ್ಸಮಾನ ಪದವಿಯಲ್ಲಿ ತೇರ್ಗಡೆಯಾಗಿರಬೇಕು. ಅಲ್ಲದೇ ಹೈಯರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಡಿಪ್ಲೋಮಾ ಇನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್ಮೆಂಟ್ ಸೇರಿದಂತೆ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸೇವಕ/ಜವಾನ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ :

ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು.

ವಯೋಮಿತಿ ಸಡಿಲಿಕೆ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
ಪ.ಜಾತಿ/ ಪ.ಪಂಗಡ/ ಪ್ರ1 ಅಭ್ಯರ್ಥಿಗಳಿಗೆ :  40 ವರ್ಷ

ಸಂಬಳದ ಪ್ಯಾಕೇಜ್ ಎಷ್ಟು?:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಕಿರಿಯ ಸಹಾಯಕ : ರೂ.17650-32000/-
ಸೇವಕ/ ಜವಾನರಿಗೆ : ರೂ.12500-24000/- ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಶುಲ್ಕ:

ಕಿರಿಯ ಸಹಾಯಕ : ರೂ.1,000 + GST ರೂ.180, ಒಟ್ಟು ರೂ.1,180
ಸೇವಕ / ಜವಾನ  – ರೂ. 500 + GST ರೂ.90, ಒಟ್ಟು ರೂ.590 ಗಳನ್ನು ಆನ್ಲೈನ್ ಮೂಲಕ ಪಾವತಿಸಬೇಕು.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  26-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  22-08-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್
ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *