Home » Trending News » Rain Alert : ಇಂದಿನಿಂದ 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಇಲ್ಲಿದೆ ವಿವರ

Rain Alert : ಇಂದಿನಿಂದ 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಇಲ್ಲಿದೆ ವಿವರ

WhatsApp Group Join Now
Telegram Group Join Now
rain alert

ರಾಜ್ಯದಲ್ಲಿ ವರುಣ ದೇವನ ಆಗಮನವಾಗಿದೆ, ಈ ವರ್ಷ ಸಾಕಷ್ಟು ಮಳೆಯಾಗುವ ಸಾಧ್ಯತೆ ಇದೇ ಎಂದು ಹೇಳಲಾಗುತ್ತಿದೆ, ಹೌದು ಇಂದಿನಿಂದ ಸತತವಾಗಿ 5 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೇ ಎಂದು ಹವಾಮಾನ ಇಲಾಖೆ ಹೇಳಿದೆ. ಏಪ್ರಿಲ್ 18, 19 ಮತ್ತು 20 ರಂದು ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯಾಗುವ ಮುನ್ಸೂಚನೆ ಇದ್ದು, ಮಳೆಯನ್ನು ನಿರೀಕ್ಷೆ ಮಾಡಬಹುದಾಗಿದೆ.ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜಿಲ್ಲಾವಾರು ಮಳೆ ಮಾಹಿತಿ ಕೆಳಗೆ ಕೊಡಲಾಗಿದೆ.

ಯಾವ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ಇಂದು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.

ನಾಳೆ ಏಪ್ರಿಲ್ 18 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ 19 ರಂದು ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ.

rainh

ಏಪ್ರಿಲ್ 20 ರಂದು ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹೇಳಿದೆ.

ಏಪ್ರಿಲ್ 21 ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್

22ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರ್ಗಿ, ರಾಯಚೂರು, ವಿಜಯಪುರ, ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *