Home » Trending News » New Ration Card: ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿಗೆ ಅರ್ಜಿ ಪ್ರಾರಂಭ, 2 ದಿನ ಅವಕಾಶ, ಈ ದಾಖಲೆಗಳು ಕಡ್ಡಾಯ

New Ration Card: ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿಗೆ ಅರ್ಜಿ ಪ್ರಾರಂಭ, 2 ದಿನ ಅವಕಾಶ, ಈ ದಾಖಲೆಗಳು ಕಡ್ಡಾಯ

WhatsApp Group Join Now
Telegram Group Join Now
ration card 3

ನಿಮ್ಮ ಬಳಿ ಪಡಿತರ ಚೀಟಿ (BPL Ration card) ಇಲ್ಲದಿದ್ದರೆ, ಕರ್ನಾಟಕದಲ್ಲಿ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಮತ್ತೆ ಇಂದಿನಿಂದ ಪ್ರಾರಂಭವಾಗಿದೆ. ಹೊಸ ಬಿಪಿಎಲ್‌ ಅಥವಾ ಎಪಿಎಲ್‌ ಕಾರ್ಡ್‌ಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡುವುದು ಹೇಗೆ? ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳನ್ನು ಹೊಂದಿರಬೇಕು? ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ನಾವು ಇಂದು ಹೇಳಲಿದ್ದೇವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಪಡಿತರ ಚೀಟಿಯು ಭಾರತೀಯರಿಗೆ ಪ್ರಮುಖ ದಾಖಲೆಯಾಗಿದೆ. ಪಡಿತರ ಚೀಟಿಯ ಸಹಾಯದಿಂದ ಸರ್ಕಾರದ ಗ್ಯಾರಂಟಿ (Guarantee scheme) ಯೋಜನೆಗಳ ಸೌಲಭ್ಯ ಪಡೆಯಬಹುದು. ಗುರುತಿನ ಚೀಟಿಯಾಗಿಯೂ ಬಳಸಬಹುದು. ಇದರಲ್ಲಿ ನಿಮ್ಮ ಹಾಗೂ ನಿಮ್ಮ ಕುಟುಂಬದವರ ಮಾಹಿತಿ ದಾಖಲಾಗಿರುತ್ತದೆ. ಎಪಿಎಲ್‌ ಕಾರ್ಡ್‌ ಇರುವವರಿಗೂ ಕೆಲ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಘೋಷಿಸಿದೆ.

ಇಂದಿನಿಂದ ಪಡಿತರ ಚೀಟಿಗೆ ಅರ್ಜಿ

ಹೊಸ ಆದ್ಯತಾ (BPL Ration card) ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ನಾಗರಿಕರು ಇಂದಿನಿಂದ (08-03-2024 ಮತ್ತು 09-03-2024) ಆನ್‌ಲೈನ್‌ ಅರ್ಜಿ ಆಹ್ವಾನಿಸಲಾಗಿದ್ದು, ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಸಮಯ ನಿಗದಿ ಮಾಡಲಾಗಿದೆ.

ತಿದ್ದುಪಡಿ ಹಾಗೂ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಲು ಅವಕಾಶ

ಪಡಿತರ ಚೀಟಿಯಲ್ಲಿ ತಿದ್ದುಪಡಿ ಹಾಗೂ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಲು ದಿನಾಂಕ:08/03/2024 ಮತ್ತು 09/03/2024 ರಂದು ಮಧ್ಯಾಹ್ನ02:00 ಗಂಟೆಯಿಂದ ಸಂಜೆ 04:00 ಗಂಟೆಯವರೆಗೆ ಅರ್ಜಿ ಸಲ್ಲಿಸಲು ಸರ್ಕಾರವು ಅವಕಾಶ ಕಲ್ಪಿಸಿರುತ್ತದೆ. ಪಡಿತರ ಚೀಟಿದಾರರು ತಾಲೂಕಿನ ಗ್ರಾಮ ಒನ್, ಕರ್ನಾಟಕ ಒನ್ ಗಳಲ್ಲಿ ಮಾತ್ರ ಪಡಿತರ ಚೀಟಿ ತಿದ್ದುಪಡಿ ಮತ್ತು ಸೇರ್ಪಡೆ ಆನಲೈನ್ ಮುಖಾಂತರ ಸಕಾಲದಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ

Picsart 23 06 10 13 55 14 667

ಅರ್ಜಿ ಸಲ್ಲಿಸುವುದು ಹೇಗೆ?:

ಜಿಲ್ಲೆಯ ನಗರ ಪ್ರದೇಶಗಳಲ್ಲಿರುವ ಕರ್ನಾಟಕ ಒನ್‌ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿನ ಗ್ರಾಮ ಒನ್‌ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಇವುಗಳನ್ನು ಹೊರತುಪಡಿಸಿ ಬೇರೆ ಇನ್ಯಾವುದೇ ಆನ್‌ಲೈನ್‌ ಸೆಂಟರ್‌ಗಳಲ್ಲಿಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲಎಂದು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಅರ್ಜಿ ಸಲ್ಲಿಕೆ‌ಯಾಗುವ ಹಿನ್ನೆಲೆ ಕಡಿಮೆ ಸಮಯಾವಕಾಶ ಕೊಟ್ಟಿರುವ ಆಹಾರ ಇಲಾಖೆ. ಎಲ್ಲರಿಗೂ ಭಾನುವಾರ ಅರ್ಜಿ ಹಿನ್ನೆಲೆ ಅಂದೇ ಹೊಸ ರೇಷನ್ ಮಾಡಿಸಲು ಅವಕಾಶ ನೀಡಲಾಗಿದೆ.

ಹೊಸ ರೇಷನ್‌ ಕಾರ್ಡ್‌ ಪಡೆಯಲು ಅಗತ್ಯ ದಾಖಲೆಗಳು

ಆಧಾರ್‌ ಕಾರ್ಡ್‌,
ಮನೆಯ ಸದಸ್ಯರ ಆಧಾರ್‌ ಕಾರ್ಡ್‌ಗಳು,
ಆದಾಯ, ಜಾತಿ, ನಿವಾಸ ಪ್ರಮಾಣ ಪತ್ರ
ಮೊಬೈಲ್‌ ಸಂಖ್ಯೆ (ಕಡ್ಡಾಯ)
ಬಾಡಿಗೆದಾರರಿಗೆ ಒಪ್ಪಂದ ಪತ್ರ‌ (ಕಡ್ಡಾಯ)

ಪಡಿತರ ಚೀಟಿಗಾಗಿ ಸಲ್ಲಿಸಿದ ಎಲ್ಲಾ ದಾಖಲೆಗಳ ಪರಿಶೀಲನೆ ಬಳಿಕ 15 ದಿನದೊಳಗೆ ಹೊಸ ಪಡಿತರ ಚೀಟಿಗಳನ್ನು ನೀಡಲಾಗುತ್ತದೆ. ಆ ಸಂದರ್ಭದಲ್ಲಿ 100 ರೂ ಅಥವಾ ನಿಗದಿಪಡಿಸಿರುವ ಹಣವನ್ನು ನೀಡಬೇಕಾಗುತ್ತದೆ.

Picsart 23 06 10 14 01 54 141
WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *