Home » Central Jobs » 10ನೇ ಕ್ಲಾಸ್ ಪಾಸ್ ಆದವರಿಗೆ SSC MTS ಹುದ್ದೆಗಳು | SSC MTS Recruitment 2023

10ನೇ ಕ್ಲಾಸ್ ಪಾಸ್ ಆದವರಿಗೆ SSC MTS ಹುದ್ದೆಗಳು | SSC MTS Recruitment 2023

WhatsApp Group Join Now
Telegram Group Join Now
Picsart 23 07 02 11 58 15 611 scaled

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ SSC MTS 2023 ರ ನೇಮಕಾತಿಯ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ    SSC MTS ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  SSC MTS ನೇಮಕಾತಿ (Recruitment) 2023 ರ ಅವಲೋಕನ  –

ಪ್ರತಿ ವರ್ಷದಂತೆಯೇ ಈ ವರ್ಷವೂ ಕೂಡ, ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಭಾರತ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಮತ್ತು ಅಧೀನ ಕಚೇರಿಗಳಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) ಮತ್ತು ಹವಾಲ್ದಾರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು SSC MTS ಅಧಿಸೂಚನೆ 2023 ಅನ್ನು ಬಿಡುಗಡೆ ಮಾಡಿದೆ.  SSC MTS ಅಧಿಸೂಚನೆ 2023 pdf ಅನ್ನು ಅಪ್‌ಲೋಡ್ ಮಾಡಿದೆ, 30ನೇ ಜೂನ್ 2023 ರಂದು 1558 MTS ಮತ್ತು ಹವಾಲ್ದಾರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ 10th ಪಾಸ್ ಅಭ್ಯರ್ಥಿಗಳನ್ನು ಆಹ್ವಾನಿಸುತ್ತದೆ. SSC MTS 2023 ಪರೀಕ್ಷೆಯ ಆನ್‌ಲೈನ್ ನೋಂದಣಿಯು 30ನೇ ಜೂನ್ 2023 ರಿಂದ ಅಧಿಕೃತ ಅಧಿಸೂಚನೆಯ ಬಿಡುಗಡೆಯೊಂದಿಗೆ ಪ್ರಾರಂಭವಾಗಿದೆ. ಈ ಹುದ್ದೆಗಳ ಬಗ್ಗೆ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ.

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ಹುದ್ದೆಗಳ ಹೆಸರು ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) ಮತ್ತು ಹವಾಲ್ದಾ
ವರ್ಷ 2023
ಒಟ್ಟು ಹುದ್ದೆಗಳು  1558 ಪೋಸ್ಟ್ ಗಳು
ಅಪ್ಲಿಕೇಶನ್ ವಿಧಾನ ಆನ್ಲೈನ್(online)

SSC MTS ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

MTS: 1198
ಹವಲ್ದಾರ್ : 360

ಒಟ್ಟು ಹುದ್ದೆಗಳ ಸಂಖ್ಯೆ : 1558
ಉದ್ಯೋಗ ಸ್ಥಳ : ಭಾರತ

SSC MTS ನೇಮಕಾತಿ – 2023ಕ್ಕೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿಯನ್ನು ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು.

ವಯೋಮಿತಿ :

ಅಭ್ಯರ್ಥಿಯು 18-25 ವರ್ಷ ವಯಸ್ಸಿನವರಾಗಿರಬೇಕು (ಎಂಟಿಎಸ್ ಮತ್ತು CBN ನಲ್ಲಿ ಹವಾಲ್ದಾರ್‌ಗೆ).
ಅಭ್ಯರ್ಥಿಯು 18-27 ವರ್ಷ ವಯಸ್ಸಿನವರಾಗಿರಬೇಕು (ಸಿಬಿಐಸಿಯಲ್ಲಿ ಹವಾಲ್ದಾರ್ ಮತ್ತು MTS ನ ಕೆಲವು ಹುದ್ದೆಗಳಿಗೆ)
ವಯಸ್ಸಿನ ಮಿತಿಯನ್ನು ಲೆಕ್ಕಾಚಾರ ಮಾಡಲು ನಿರ್ಣಾಯಕ ದಿನಾಂಕವು 01 ಆಗಸ್ಟ್ 2023 ಆಗಿದೆ.
ಮೊದಲೇ ತಿಳಿಸಲಾದ ವಯಸ್ಸಿನ ಅವಶ್ಯಕತೆಯ ಹೊರತಾಗಿ, ಮೀಸಲಾತಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆಯನ್ನು ನೀಡಲಾಗುತ್ತದೆ.

ಸಂಬಳದ ಪ್ಯಾಕೇಜ್ ಎಷ್ಟು?:

ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ (ತಾಂತ್ರಿಕೇತರ) ಮತ್ತು ಹವಾಲ್ದಾರ್ ಗಳಿಗೆ ಮೂಲ ವೇತನ 7 ನೇ ವೇತನ ಆಯೋಗದ ಪ್ರಕಾರ, ರೂ. 18000/- ಮತ್ತು ಗ್ರೇಡ್ ಪೇ ರೂ. 1800/- ನೀಡಲಾಗುತ್ತದೆ. ಎಸ್‌ಎಸ್‌ಸಿ ಎಂಟಿಎಸ್ ಮತ್ತು ಹವಾಲ್ದಾರ್‌ಗೆ ಇನ್-ಹ್ಯಾಂಡ್ ಸಂಬಳವು ತಿಂಗಳಿಗೆ 18,000/ ರಿಂದ 22,000/ ರ ವ್ಯಾಪ್ತಿಯಲ್ಲಿದೆ ಮತ್ತು ರೂ. 5200 – ರೂ. 20200 ಉದ್ಯೋಗ ಪೋಸ್ಟ್ ಮತ್ತು ನಿಯೋಜಿಸಲಾದ ನಗರವನ್ನು ಅವಲಂಬಿಸಿ.

ಆಯ್ಕೆ ಪ್ರಕ್ರಿಯೆ :

CBE
PET/PST (ಹವಾಲ್ದಾರ್ ಹುದ್ದೆಗೆ ಮಾತ್ರ)
ಡಾಕ್ಯುಮೆಂಟ್ ಪರಿಶೀಲನೆ

ಅರ್ಜಿ ಶುಲ್ಕ :

SSC MTS 2023 ಗಾಗಿ ಅರ್ಜಿ ಶುಲ್ಕ ರೂ. 100/-, SC/ST/PWD/ಮಾಜಿ ಸೈನಿಕ ವರ್ಗವನ್ನು ಹೊರತುಪಡಿಸಿ ಎಲ್ಲಾ ವರ್ಗಗಳಿಗೆ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  30-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  21-07-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್
ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *