Home » Karnataka Jobs » ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಗೆ ಅರ್ಜಿ ಆಹ್ವಾನ, Village Accountant 2024 Apply ಆನ್ಲೈನ್ @kea.kar.nic.in

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಗೆ ಅರ್ಜಿ ಆಹ್ವಾನ, Village Accountant 2024 Apply ಆನ್ಲೈನ್ @kea.kar.nic.in

WhatsApp Group Join Now
Telegram Group Join Now
IMG 20240307 WA0008

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ, ಕಂದಾಯ ಇಲಾಖೆ(Revenue Department)ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ ಕರ್ನಾಟಕ ಸರ್ಕಾರವು ಕಂದಾಯ ಇಲಾಖೆಯಲ್ಲಿರುವ ಗ್ರಾಮ ಲೆಕ್ಕಿಗರ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಇದು ಒಂದು ಉತ್ತಮವಾದ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿಯುಳ್ಳವರು ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಲು ಸಹಾಯ ಪಡೆದುಕೊಳ್ಳಬಹುದಾಗಿದೆ.

-ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ (Village Accountant Recruitment) ಯ ಅವಲೋಕನ –

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತ ಮಾನದಂಡಗಳು, ಆಯ್ಕೆ ಪ್ರಕ್ರಿಯೆ, ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಹುದ್ದೆಯ ವಿವರ ಕೆಳಗಿನಂತಿದೆ :

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಕಂದಾಯ ಇಲಾಖೆ
ಹುದ್ದೆಗಳ ಹೆಸರು ಗ್ರಾಮ ಆಡಳಿತ ಅಧಿಕಾರಿ
ವರ್ಷ 2024
ಒಟ್ಟು ಹುದ್ದೆಗಳು  1000
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024ರ ಖಾಲಿ ಹುದ್ದೆಗಳ ವಿವರ :

ಹುದ್ದೆಯ ಹೆಸರು : ಗ್ರಾಮ ಆಡಳಿತ ಅಧಿಕಾರಿ
ಒಟ್ಟು ಹುದ್ದೆಗಳ ಸಂಖ್ಯೆ : 1000
ಉದ್ಯೋಗ ಸ್ಥಳ : ಕರ್ನಾಟಕ

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಯ ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಯು ಯಾವದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾ ಅರ್ಹತೆಯನ್ನು ಹೊಂದಿರಬೇಕು.

ವಯೋಮಿತಿ :

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಕೆಳಕಂಡ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು:

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ : 35 ವರ್ಷಗಳು
ಪ್ರವರ್ಗ 2A , 2B, 3A, 3B ಅಭ್ಯರ್ಥಿಗಳಿಗೆ : 38 ವರ್ಷಗಳು
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳು

ಸಂಬಳದ ಪ್ಯಾಕೇಜ್ ಎಷ್ಟು?:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹21,400/- ರಿಂದ ₹42, 000/- ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಸ್ಪರ್ಧಾತ್ಮಕ ಪರೀಕ್ಷೆ
ಕನ್ನಡ ಭಾಷಾ ಪರೀಕ್ಷೆ

Picsart 23 06 10 13 55 14 667

ಅರ್ಜಿ ಶುಲ್ಕ :

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ : 750/-
ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ, ಪ್ರವರ್ಗ-1, ಮಾಜಿ ಸೈನಿಕ, ವಿಕಲ ಚೇತನ ಅಭ್ಯರ್ಥಿಗಳಿಗೆ : 500/-

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದ್ದಲ್ಲಿ)

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  04-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  03-04-2024

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹ

WhatsApp Group Join Now
Telegram Group Join Now

About

Editor | M.Sc CS

One thought on “ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಗೆ ಅರ್ಜಿ ಆಹ್ವಾನ, Village Accountant 2024 Apply ಆನ್ಲೈನ್ @kea.kar.nic.in

Leave a Reply

Your email address will not be published. Required fields are marked *